ಎಂಬಿಎ ಕೋರ್ಸ್ ಆರಂಭಿಸಲು ಮಾನ್ಯತೆ ಪಡೆದ ಕೆಎಸ್ಒಯು
ಬೆಂಗಳೂರು, ಜುಲೈ 20; ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ಎಂಬಿಎ ಕೋರ್ಸ್ ಆರಂಭಿಸಲು ಎಐಸಿಇಟಿ ಒಪ್ಪಿಗೆ ನೀಡಿದೆ. 10 ಸಾವಿರ ಸೀಟುಗಳಿಗೆ ಪ್ರವೇಶ ನೀಡಲು ಅನುಮೋದನೆ ನೀಡಲಾಗಿದೆ.
ಕೇಂದ್ರ ಶಿಕ್ಷಣ ಸಚಿವಾಲಯದ ಶಾಸನಬದ್ಧ ಅಂಗವಾದ ನವದೆಹಲಿಯ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು (ಎಐಸಿಇಟಿ) ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಎಂಬಿಎ ಕೋರ್ಸ್ ಆರಂಭಿಸಲು ಒಪ್ಪಿಗೆ ಕೊಟ್ಟಿದೆ.
ಮುಕ್ತ ಹಾಗೂ ದೂರ ಶಿಕ್ಷಣ ಮಾದರಿಯಡಿ ಎಂಬಿಎ ಕೋರ್ಸ್ ನಡೆಸಲು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ಒಪ್ಪಿಗೆ ಸಿಕ್ಕಿದೆ. ಎಂಬಿಎ ಕೋರ್ಸ್ ಆರಂಭಿಸಲು ಮಾನ್ಯತೆ ಪಡೆದಿರುವ ದೇಶದ ಏಕೈಕ ವಿಶ್ವವಿದ್ಯಾನಿಲಯ ಎಂಬ ಹೆಗ್ಗಳಿಕೆಯನ್ನು ಕೆಎಸ್ಒಯು ಪಡೆದಿದೆ.

2021-22ನೇ ಸಾಲಿಗೆ ಮುಕ್ತ ಹಾಗೂ ದೂರ ಶಿಕ್ಷಣ ಕಲಿಕಾ ವಿಧಾನದಡಿ ಎಂಬಿಎ ಕೋರ್ಸ್ಗೆ 10,000 ಸೀಟುಗಳಿಗೆ ಪ್ರವೇಶಾತಿ ಕಲ್ಪಿಸಲು ಎಐಸಿಟಿಇ ಅನುಮತಿ ನೀಡಿದೆ. ಯುಜಿಸಿಯಿಂದ ಕೆಲವು ದಿನಗಳ ಹಿಂದೆ ಕೆಎಸ್ಓಯು 12-ಬಿ ಮಾನ್ಯತೆಯನ್ನು ಪಡೆದಿತ್ತು.
ಕುಲಪತಿಗಳ ಸಂತಸ; ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ಎಂಬಿಎ ಕೋರ್ಸ್ ಆರಂಭಿಸಲು ಎಐಸಿಟಿಇ ಅನುಮತಿ ನೀಡಿರುವುದಕ್ಕೆ ಕುಲಪತಿ ಪ್ರೊ. ಎಸ್. ವಿದ್ಯಾಶಂಕರ್ ಸಂತಸ ವ್ಯಕ್ತಪಡಿಸಿದ್ದಾರೆ.
ದೇಶಾದ್ಯಂತ ಒಟ್ಟು 18 ಮುಕ್ತ ವಿಶ್ವವಿದ್ಯಾನಿಲಯಗಳು ಕಾರ್ಯ ನಿರ್ವಹಿಸುತ್ತಿವೆ. ಈ ಪೈಕಿ ಎಐಸಿಟಿಇ ಯಿಂದ ಮಾನ್ಯತೆ ಪಡೆದ ದೇಶದ ಮೊದಲ ವಿಶ್ವವಿದ್ಯಾನಿಲಯ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವಾಗಿದೆ.
-
Udupi: ಉಡುಪಿ ಜಿಲ್ಲೆಗೆ 'ಸಂಪೂರ್ಣ ಸಾಕ್ಷರತಾ' ಸ್ಥಾನಮಾನ, ಶೀಘ್ರವೇ ಘೋಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
NHAI ನಿಂದ ವಿದ್ಯಾರ್ಥಿಗಳಿಗೆ ಇಂಟರ್ನ್ಶಿಪ್ ಅವಕಾಶ: ತಿಂಗಳಿಗೆ ₹20,000 ಸ್ಟೈಪೆಂಡ್, ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್












Click it and Unblock the Notifications