ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಎಸ್ಒಯುಗೆ ಮಾನ್ಯತೆ ನೀಡಲು ಒಪ್ಪಿಗೆ ನೀಡಿದ ಯುಜಿಸಿ

By Gururaj
|
Google Oneindia Kannada News

ಬೆಂಗಳೂರು, ಜೂನ್ 12 : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಕ್ಕೆ ಮಾನ್ಯತೆ ನೀಡಲು ಯುಜಿಸಿ ಮುಂದಾಗಿದೆ. 2013-14ರಿಂದ ವಿಶ್ವವಿದ್ಯಾಲಯಕ್ಕೆ ಮಾನ್ಯತೆ ಇಲ್ಲದೇ ಲಕ್ಷಾಂತರ ವಿಧ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ.

ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ನವದೆಹಲಿಯಲ್ಲಿ ನಡೆಯುವ ಸಭೆಗೆ ಹಾಜರಾಗಲು ಎಲ್ಲಾ ದಾಖಲೆಗಳ ಜೊತೆ ಸಿದ್ಧವಿರುವಂತೆ ಕೆಎಸ್ಒಯುಗೆ ಪತ್ರ ಬರೆದಿದೆ. ಈ ವರ್ಷದಲ್ಲಿ ಮಾನ್ಯತೆ ಸಿಗುವ ನಿರೀಕ್ಷೆ ಇದೆ.

ಕೆಎಸ್‌ಓಯು ಅಂಕಪಟ್ಟಿಗೆ ಮಾನ್ಯತೆ ನೀಡಿದ ಸರ್ಕಾರಕೆಎಸ್‌ಓಯು ಅಂಕಪಟ್ಟಿಗೆ ಮಾನ್ಯತೆ ನೀಡಿದ ಸರ್ಕಾರ

ಜೂನ್ 4ರಂದು ಮೈಸೂರಿನಲ್ಲಿ ನಡೆಯುವ ಮಾನವ ಸಂಪನ್ಮೂಲ ಇಲಾಖೆಯ ಸಂಸದೀಯ ಸ್ಥಾಯಿ ಸಮಿತಿ ಸಭೆಯಲ್ಲಿ ವಿವಿಯ ಕುಲಪತಿ ಪ್ರೊ.ಡಿ.ಶಿವಲಿಂಗಯ್ಯ ಅವರು ವಿವಿಗೆ ಮಾನ್ಯತೆ ನೀಡುವಂತೆ ಕೋರಿ ಪ್ರಾತ್ಯಕ್ಷಿಕೆ ನೀಡಿದ್ದರು.

KSOU may get UGC recognition soon

2013-14ರಿಂದ ವಿಶ್ವವಿದ್ಯಾಲಯಕ್ಕೆ ಮಾನ್ಯತೆ ಇಲ್ಲ. ಇಲ್ಲಿ ವ್ಯಾಸಂಗ ಮಾಡಿದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ವಿವಿಗೆ ಮಾನ್ಯತೆ ನೀಡುವಂತೆ ಹೈಕೋರ್ಟ್ ಸೂಚನೆ ನೀಡಿದ್ದರೂ, ಆದೇಶ ಪಾಲನೆಯಾಗಿಲ್ಲ ಎಂದು ಪ್ರಾತ್ಯಕ್ಷಿಕೆಯಲ್ಲಿ ತಿಳಿಸಿದ್ದರು.

ಕೆಎಸ್ಒಯು ವಿದ್ಯಾರ್ಥಿಗಳಿಗೆ ತಾತ್ಕಾಲಿಕ ನೆಮ್ಮದಿ ನೀಡಿದ ಹೈಕೋರ್ಟ್ಕೆಎಸ್ಒಯು ವಿದ್ಯಾರ್ಥಿಗಳಿಗೆ ತಾತ್ಕಾಲಿಕ ನೆಮ್ಮದಿ ನೀಡಿದ ಹೈಕೋರ್ಟ್

ಸಭೆಯಲ್ಲಿ ಪಾಲ್ಗೊಂಡಿದ್ದ ಸಮಿತಿಯ ಸದಸ್ಯರು ಯುಜಿಸಿ ಮತ್ತು ಮಾನವ ಸಂಪನ್ಮೂಲ ಇಲಾಖೆ ಜಂಟಿ ಕಾರ್ಯದರ್ಶಿಗೆ ಮಾನ್ಯತೆ ನೀಡುವಂತೆ ಸೂಚನೆ ನೀಡಿದ್ದರು. ಜೂನ್ 6ರಂದು ಯುಜಿಸಿ ಸಭೆಯಲ್ಲಿ ಹಾಜರಾಗಲು ಪತ್ರ ಬರೆಯಲಾಗಿದೆ.

ವಿವಿಯ ಕುಲಪತಿ ಪ್ರೊ.ಡಿ.ಶಿವಲಿಂಗಯ್ಯ ಈ ಕುರಿತು ಮಾಹಿತಿ ನೀಡಿದ್ದು, 'ಮೇ 27ರಂದು 900 ಪುಟಗಳ ಅರ್ಜಿಯನ್ನು ಆನ್‌ಲೈನ್‌ನಲ್ಲಿ ಸಲ್ಲಿಸಲಾಗಿತ್ತು. ಇದೀಗ ಮಾನ್ಯತೆ ನೀಡಲು ಯುಜಿಸಿ ಒಪ್ಪಿಗೆ ನೀಡಿದೆ' ಎಂದು ಹೇಳಿದ್ದಾರೆ.

English summary
Finally Karnataka State Open University (KSOU) will get the University Grants Commission (UGC) recognition soon. UGC de-recognised courses run by the KSOU in June 2015.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X