KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಆಡಳಿತ ಕುಲಸಚಿವರಾಗಿ ಹಿರಿಯ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರೊಂದಿಗೆ ವಿವಿಯ ಆಡಳಿತ ಚುಕ್ಕಾಣಿ ಈಗ ಅನುಭವಿ ಅಧಿಕಾರಿಯ ಕೈಸೇರಿದೆ. ಈವರೆಗೂ ಕುಲಸಚಿವರಾಗಿದ್ದ ಪ್ರೊ.ಎಸ್.ಕೆ.ನವೀನ್‌ ಕುಮಾರ್‌ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರು ಮಂಗಳೂರು ವಿಶ್ವವಿದ್ಯಾಲಯದ ಕಂಪ್ಯೂಟರ್‌ ಸೈನ್ಸ್‌ ವಿಭಾಗಕ್ಕೆ ಮರು ನಿಯೋಜನೆಗೊಂಡಿದ್ದಾರೆ.

ಪ್ರೊ.ಕೆ.ಬಿ.ಪ್ರವೀಣ್ ವಿರುದ್ಧ ಆರೋಪಗಳು ಕೇಳಿ ಬಂದ ನಂತರ ನವೀನ್‌ ಕುಮಾರ್ ಅವರನ್ನು ಏಳು ತಿಂಗಳ ಹಿಂದೆ ನೇಮಕ ಮಾಡಲಾಗಿತ್ತು. ವಿಶ್ವವಿದ್ಯಾಲಯದಲ್ಲಿ ನೇಮಕ ಸಂಬಂಧಿಸಿ ಹಲವು ವಿಷಯಗಳಲ್ಲಿ ಆರೋಪ ಕೇಳಿ ಬಂದಿದ್ದು, ನ್ಯಾಯಮೂರ್ತಿ ಪಾಟೀಲ ಅವರ ನೇತೃತ್ವದ ಸಮಿತಿ ವಿಚಾರಣೆ ನಡೆಸುತ್ತಿರುವಾಗಲೇ ನವೀನ್‌ಕುಮಾರ್‌ ಅವರನ್ನು ವರ್ಗಾವಣೆ ಮಾಡಲಾಗಿದೆ.

KSOU

ಸಾಮಾನ್ಯವಾಗಿ ಎಲ್ಲಾ ವಿಶ್ವವಿದ್ಯಾಲಯಗಳಿಗೆ ಕೆಎಎಸ್ ಅಧಿಕಾರಿಗಳನ್ನು ಕುಲಸಚಿವರನ್ನಾಗಿ ನೇಮಿಸುವ ಸಂಪ್ರದಾಯವಿದೆ. ಆದರೆ, ಕರಾಮುವಿಯಲ್ಲಿ ಕಳೆದ ಎರಡು ದಶಕಗಳಿಂದ ಪ್ರಾಧ್ಯಾಪಕರೇ ಕುಲಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು. ಈಗ ಕುಸುಮಾಕುಮಾರಿ ಅವರ ನೇಮಕದೊಂದಿಗೆ ಸುದೀರ್ಘ ಕಾಲದ ನಂತರ ಆಡಳಿತ ವಿಭಾಗಕ್ಕೆ ಕೆಎಎಸ್ ಅಧಿಕಾರಿಯ ಪ್ರವೇಶವಾಗಿದೆ.

ಕುಸುಮಾ ಕುಮಾರಿ ಅವರ ಹಿನ್ನೆಲೆ

ಕುಸುಮಾಕುಮಾರಿ ಅವರು 2006ನೇ ಬ್ಯಾಚ್‌ನ ಕೆಎಎಸ್‌ ಅಧಿಕಾರಿ. ಮೈಸೂರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದರು. ಆನಂತರ ನಗರ ಪಾಲಿಕೆ ವಲಯ 6ರ ಸಹಾಯಕ ಆಯುಕ್ತರಾಗಿದ್ದರು. ಆನಂತರ ಕಬಿನಿ ಭೂಸ್ವಾಧೀನ ಅಧಿಕಾರಿಯಾಗಿ ನೇಮಿಸಲಾಗಿತ್ತು. ಮೈಸೂರು ಮಹಾನಗರ ಪಾಲಿಕೆ ಹೆಚ್ಚುವರಿ ಆಯುಕ್ತರೂ ಆಗಿದ್ದರು.

ಒಂದು ತಿಂಗಳ ಹಿಂದೆಯೇ ಮೈಸೂರು ಮಹಾ ನಗರಪಾಲಿಕೆ ಹೆಚ್ಚುವರಿ ಆಯುಕ್ತರ ಹುದ್ದೆಯಿಂದ ಬಿಡುಗಡೆಯಾಗಿ ಹುದ್ದೆಗಾಗಿ ಕಾಯುತ್ತಿದ್ದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಸರ್ಕಾರ ನೇಮಕ ಮಾಡಿರುವ ಆದೇಶ ಶನಿವಾರವೇ ಕೈ ಸೇರಿದೆ. ಭಾನುವಾರ ರಜೆ ಇದ್ದುದರಿಂದ ಸೋಮವಾರ ಅಧಿಕಾರ ವಹಿಸಿಕೊಳ್ಳುತ್ತೇನೆ. ಈ ಹಿಂದೆ ಮೈಸೂರಿನ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿದ್ದೇನೆ ಎಂದು ಎಸ್.ಕುಸುಮಾ ಕುಮಾರಿ ತಿಳಿಸಿದ್ದಾರೆ.

ಕುಸುಮಾ ಕುಮಾರಿ ಅವರು ಮೈಸೂರಿನ ಆಡಳಿತ ವ್ಯವಸ್ಥೆಯಲ್ಲಿ ಚಿರಪರಿಚಿತ ಹೆಸರು. ಇವರು ಈ ಹಿಂದೆ ಮೈಸೂರಿನಲ್ಲಿ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಮೈಸೂರಿನ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿರುವ ಇವರು, ವಿವಾದಗಳ ಸುಳಿಯಲ್ಲಿರುವ ಮುಕ್ತ ವಿಶ್ವವಿದ್ಯಾಲಯದ ಆಡಳಿತವನ್ನು ಹೇಗೆ ಸುಗಮಗೊಳಿಸಲಿದ್ದಾರೆ ಎಂಬುದು ಈಗ ಕುತೂಹಲ ಮೂಡಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+