KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಆಡಳಿತ ಕುಲಸಚಿವರಾಗಿ ಹಿರಿಯ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರೊಂದಿಗೆ ವಿವಿಯ ಆಡಳಿತ ಚುಕ್ಕಾಣಿ ಈಗ ಅನುಭವಿ ಅಧಿಕಾರಿಯ ಕೈಸೇರಿದೆ. ಈವರೆಗೂ ಕುಲಸಚಿವರಾಗಿದ್ದ ಪ್ರೊ.ಎಸ್.ಕೆ.ನವೀನ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರು ಮಂಗಳೂರು ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗಕ್ಕೆ ಮರು ನಿಯೋಜನೆಗೊಂಡಿದ್ದಾರೆ.
ಪ್ರೊ.ಕೆ.ಬಿ.ಪ್ರವೀಣ್ ವಿರುದ್ಧ ಆರೋಪಗಳು ಕೇಳಿ ಬಂದ ನಂತರ ನವೀನ್ ಕುಮಾರ್ ಅವರನ್ನು ಏಳು ತಿಂಗಳ ಹಿಂದೆ ನೇಮಕ ಮಾಡಲಾಗಿತ್ತು. ವಿಶ್ವವಿದ್ಯಾಲಯದಲ್ಲಿ ನೇಮಕ ಸಂಬಂಧಿಸಿ ಹಲವು ವಿಷಯಗಳಲ್ಲಿ ಆರೋಪ ಕೇಳಿ ಬಂದಿದ್ದು, ನ್ಯಾಯಮೂರ್ತಿ ಪಾಟೀಲ ಅವರ ನೇತೃತ್ವದ ಸಮಿತಿ ವಿಚಾರಣೆ ನಡೆಸುತ್ತಿರುವಾಗಲೇ ನವೀನ್‌ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಸಾಮಾನ್ಯವಾಗಿ ಎಲ್ಲಾ ವಿಶ್ವವಿದ್ಯಾಲಯಗಳಿಗೆ ಕೆಎಎಸ್ ಅಧಿಕಾರಿಗಳನ್ನು ಕುಲಸಚಿವರನ್ನಾಗಿ ನೇಮಿಸುವ ಸಂಪ್ರದಾಯವಿದೆ. ಆದರೆ, ಕರಾಮುವಿಯಲ್ಲಿ ಕಳೆದ ಎರಡು ದಶಕಗಳಿಂದ ಪ್ರಾಧ್ಯಾಪಕರೇ ಕುಲಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು. ಈಗ ಕುಸುಮಾಕುಮಾರಿ ಅವರ ನೇಮಕದೊಂದಿಗೆ ಸುದೀರ್ಘ ಕಾಲದ ನಂತರ ಆಡಳಿತ ವಿಭಾಗಕ್ಕೆ ಕೆಎಎಸ್ ಅಧಿಕಾರಿಯ ಪ್ರವೇಶವಾಗಿದೆ.
ಕುಸುಮಾ ಕುಮಾರಿ ಅವರ ಹಿನ್ನೆಲೆ
ಕುಸುಮಾಕುಮಾರಿ ಅವರು 2006ನೇ ಬ್ಯಾಚ್‌ನ ಕೆಎಎಸ್ ಅಧಿಕಾರಿ. ಮೈಸೂರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದರು. ಆನಂತರ ನಗರ ಪಾಲಿಕೆ ವಲಯ 6ರ ಸಹಾಯಕ ಆಯುಕ್ತರಾಗಿದ್ದರು. ಆನಂತರ ಕಬಿನಿ ಭೂಸ್ವಾಧೀನ ಅಧಿಕಾರಿಯಾಗಿ ನೇಮಿಸಲಾಗಿತ್ತು. ಮೈಸೂರು ಮಹಾನಗರ ಪಾಲಿಕೆ ಹೆಚ್ಚುವರಿ ಆಯುಕ್ತರೂ ಆಗಿದ್ದರು.
ಒಂದು ತಿಂಗಳ ಹಿಂದೆಯೇ ಮೈಸೂರು ಮಹಾ ನಗರಪಾಲಿಕೆ ಹೆಚ್ಚುವರಿ ಆಯುಕ್ತರ ಹುದ್ದೆಯಿಂದ ಬಿಡುಗಡೆಯಾಗಿ ಹುದ್ದೆಗಾಗಿ ಕಾಯುತ್ತಿದ್ದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಸರ್ಕಾರ ನೇಮಕ ಮಾಡಿರುವ ಆದೇಶ ಶನಿವಾರವೇ ಕೈ ಸೇರಿದೆ. ಭಾನುವಾರ ರಜೆ ಇದ್ದುದರಿಂದ ಸೋಮವಾರ ಅಧಿಕಾರ ವಹಿಸಿಕೊಳ್ಳುತ್ತೇನೆ. ಈ ಹಿಂದೆ ಮೈಸೂರಿನ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿದ್ದೇನೆ ಎಂದು ಎಸ್.ಕುಸುಮಾ ಕುಮಾರಿ ತಿಳಿಸಿದ್ದಾರೆ.
ಕುಸುಮಾ ಕುಮಾರಿ ಅವರು ಮೈಸೂರಿನ ಆಡಳಿತ ವ್ಯವಸ್ಥೆಯಲ್ಲಿ ಚಿರಪರಿಚಿತ ಹೆಸರು. ಇವರು ಈ ಹಿಂದೆ ಮೈಸೂರಿನಲ್ಲಿ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಮೈಸೂರಿನ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿರುವ ಇವರು, ವಿವಾದಗಳ ಸುಳಿಯಲ್ಲಿರುವ ಮುಕ್ತ ವಿಶ್ವವಿದ್ಯಾಲಯದ ಆಡಳಿತವನ್ನು ಹೇಗೆ ಸುಗಮಗೊಳಿಸಲಿದ್ದಾರೆ ಎಂಬುದು ಈಗ ಕುತೂಹಲ ಮೂಡಿಸಿದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications