Get Updates
Get notified of breaking news, exclusive insights, and must-see stories!

KSRTC: ಪುನಶ್ಚೇತನ ಐರಾವತ ಕ್ಲಬ್ ಕ್ಲಾಸ್ ಬಸ್‌ಗೆ ಚಾಲನೆ, 5800 ಹೊಸ ಬಸ್‌ಗಳ ಸೇರ್ಪಡೆ: ರಾಮಲಿಂಗಾ ರೆಡ್ಡಿ

ಬೆಂಗಳೂರು, ಅಕ್ಟೋಬರ್ 16: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 18 ತಿಂಗಳಲ್ಲಿ KSRTCಯ 1000 ಮೃತ ಸಿಬ್ಬಂದಿಯ ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ನೌಕರಿ ನೀಡಲಾಗಿದೆ. ಸರ್ಕಾರವು 5800 ನೂತನ ವಾಹನಗಳನ್ನು ಸೇರ್ಪಡೆ ಮಾಡಲು ಅನುಮತಿ ಕೊಟ್ಟಿದೆ. ಇಂದು ಮೃತರ ಅವಲಂಬಿತರಿಗೆ ಕೋಟಿ ಹಣದ ಚೆಕ್ ನೀಡಲಾಗುತ್ತಿದೆ ಎಂದು ವಿವಿಧ ವಿಷಯಗಳನ್ನು ಜನರ ಮುಂದೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ವಿವರಿಸಿದ್ದಾರೆ.

ಬುಧವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC), ಬೆಂಗಳೂರು ಕೇಂದ್ರೀಯ ವಿಭಾಗದ ಕಚೇರಿ ಬಳಿ ನಡೆದ 63ನೇ ಸಂಸ್ಥಾಪನಾ ದಿನಾಚರಣೆ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಸಚಿವರು ಚಾಲನೆ ನೀಡಿದರು. ಇದೇ ವೇಳೆ ನಿಗಮದಲ್ಲಿ ಪ್ರಪ್ರಥಮವಾಗಿ ಪುನಶ್ಚೇತನಗೊಳಿಸಿದ ಐರಾವತ ಕ್ಲಬ್ ಕ್ಲಾಸ್ ವಾಹನಗಳ ಕಾರ್ಯಾಚರಣೆಗೆ ಅವರು ಹಸಿರು ನಿಶಾನೆ ತೋರಿದರು.

KSRTC 6500 Posts Recruitment soon and 5800 Buses Will Add on says Ramalinga Reddy

KSRTC 6500 ಹುದ್ದೆಗಳಿಗೆ ಶೀಘ್ರ ನೇಮಕಾತಿ

ನಿಗಮವು ಕಾರ್ಮಿಕರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ. ಕಳೆದ ನಾಲ್ಕು ವರ್ಷಗಳಿಂದ ಯಾವುದೇ ಅನುಕಂಪದ ಆಧಾರದಲ್ಲಿ ನೇಮಕಾತಿ ನಡೆದಿಲ್ಲ. ನಮ್ಮ ಸರ್ಕಾರ ಬಂದ ಅದು ನಡೆದಿದೆ. ನಾಲ್ಕು ನಿಗಮಗಳಲ್ಲಿ 9000 ಹುದ್ದೆಗಳ ನೇಮಕಾತಿಗೆ ಅನುಮತಿ ಸಿಕ್ಕಿದೆ. ಇದರಲ್ಲಿ 1883, ಚಾಲಕ ಕಂ ನಿರ್ವಾಹಕ ಹಾಗೂ ತಾಂತ್ರಿಕ ಸಿಬ್ಬಂದಿಗಳಿಗೆ ನೇಮಕಾತಿ ಆದೇಶ ನೀಡಲಾಗಿದೆ. 6500 ಹುದ್ದೆಗಳ ನೇಮಕಾತಿಗೆ ಪ್ರಕ್ರಿಯೆ ಶೀಘ್ರದಲ್ಲೆ ಪೂರ್ಣಗೊಳಿಸಲಾಗುವುದು ಎಂದು ಅವರು ತಿಳಿಸಿದರು.

ಸರ್ಕಾರವು 5800 ನೂತನ ವಾಹನಗಳನ್ನು ಸೇರ್ಪಡೆ ಮಾಡಲು ಒಪ್ಪಿಗೆ ನೀಡಿದೆ. ಅದರಲ್ಲಿ ಸದ್ಯ 3,417 ವಾಹನಗಳನ್ನು ಸೇರಿಸಲಾಗಿದೆ. ನಿಗಮವು ನೂತನವಾಗಿ ಜಾರಿಗೊಳಿಸಿದ ವಾಹನಗಳ ಪುನಶ್ಚೇತನ ಕಾರ್ಯವು ನೂತನ ಬಸ್ಸುಗಳನ್ನು ಸೇರ್ಪಡೆ ಮಾಡುವಲ್ಲಿ ಉಂಟಾಗಿರುವ ವಿಳಂಬದ ಕೊರತೆ ಸರಿಪಡಿಸಲಾಗುವುದು. ಈ ಬಸ್ಸುಗಳು ನಾಲ್ಕು ಲಕ್ಷ ಕಿಮೀವರೆಗೆ ಕಾರ್ಯಾಚರಣೆ ಮಾಡಿದ ಬಳಿಕ ಪುನಃಶ್ಚೇತನ ಮಾಡಲಾಗುತ್ತದೆ ಎಂದರು.

KSRTC 6500 Posts Recruitment soon and 5800 Buses Will Add on says Ramalinga Reddy

ಒಂದು ಕೋಟಿ, ಹತ್ತು ಲಕ್ಷ ಹೀಗೆ ಅಪಘಾತ ಹಾಗೂ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಧನವನ್ನು ಪಡೆದಿರುವ ಸಾರಿಗೆ ಸಿಬ್ಬಂದಿ ಮೃತರ ಅವಲಂಬಿತರ ಕುಟುಂಬವು ಸದರಿ ಮೊತ್ತವನ್ನು ಸದುಪಯೋಗಪಡಿಸಿಕೊಳ್ಳಬೇಕು. ಈ ಹಣವನ್ನು ಮಕ್ಕಳ ವಿದ್ಯಾಭ್ಯಾಸ, ಆಸ್ತಿ ಖರೀದಿಗೆ ಬಳಸಿಕೊಳ್ಳುವಂತೆ ಮತ್ತು ಯಾವುದೇ ಪ್ರಲೋಭನೆಗಳಿಗೆ ಒಳಗಾಗದೆ ಹಣವನ್ನು ದುರುಪಯೋಗ ಮಾಡದಂತೆ ಅವರು ಕಿವಿ ಮಾತು ಹೇಳಿದರು.

ಸಾರಿಗೆ ಸಚಿವರು ತಿಳಿಸಿದ ಹೆಚ್ಚುವರಿ ಅಂಶಗಳು ಇಲ್ಲಿವೆ

* KSRTC ದಿನನಿತ್ಯ 8849 ವಾಹನಗಳ ಮೂಲಕ 8068 ಅನುಸೂಚಿಗಳನ್ನು ಕಾರ್ಯಾಚರಣೆಗೊಳಿಸಿ, 28.50 ಲಕ್ಷ ಕಿ.ಮಿ ಕ್ರಮಿಸಿ, 34.92 ಲಕ್ಷ ಪ್ರಯಾಣಿಕರಿಗೆ ಸಾರಿಗೆ ಸೌಲಭ್ಯ ಒದಗಿಸಲಾಗುತ್ತಿದೆ.

* ಸರ್ಕಾರವು ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ 5800 ಹೊಸ ಬಸ್ಸುಗಳ ಸೇರ್ಪಡೆಗೆ ಅನುಮೋದನೆ ನೀಡಿದೆ. ಈ ಪೈಕಿ ನಾಲ್ಕು ನಿಗಮಗಳಲ್ಲಿ 3417 ಬಸ್ಸುಗಳನ್ನು ಸೇರ್ಪಡೆಗೊಳಿಸಲಾಗಿದೆ.

* ನಾಲ್ಕು ನಿಗಮಗಳಲ್ಲಿ 9000 ಹುದ್ದೆಗಳ ನೇಮಕಾತಿಗೆ ಅನುಮತಿ ನೀಡಿದೆ. ಈ ಪೈಕಿ 1883, ಚಾಲಕ ಕಂ ನಿರ್ವಾಹಕ ಹಾಗೂ ತಾಂತ್ರಿಕ ಸಿಬ್ಬಂದಿಗಳಿಗೆ ನೇಮಕಾತಿ ಆದೇಶ ನೀಡಲಾಗಿದೆ. ಬಾಕಿ ನೇಮಕಾತಿ ಶೀಘ್ರವೇ ಮಾಡಲಾಗುವುದು.

* ನಿಗಮಗಳ ವಾಹನಗಳಲ್ಲಿ 308.12 ಕೋಟಿ ಮಹಿಳೆಯರು ಪ್ರಯಾಣಿಸಿದ್ದು ಅವರ ಪ್ರಯಾಣದ ಶೂನ್ಯ ಟಿಕೇಟ್‌ ಮೌಲ್ಯ ರೂ.7431.00 ಕೋಟಿಗಳಾಗಿರುತ್ತದೆ. ಮಹಿಳಾ ಪ್ರಯಾಣಿಕರ ಪ್ರಯಾಣದ ಪ್ರಮಾಣ ಶೇ.58.12 ಆಗಿರುತ್ತದೆ.

* ಶಕ್ತಿ ಯೋಜನೆ ಜಾರಿಗೆ ಬರುವ ಮುನ್ನ ಪ್ರತಿದಿನ ನಾಲ್ಕು ನಿಗಮಗಳ ವ್ಯಾಪ್ತಿಯಲ್ಲಿ ಕಾರ್ಯಾಚರಣೆಗೊಳಿಸುತ್ತಿದ್ದ 158909 ಟ್ರಿಪ್‌ಗಳ ಪ್ರಮಾಣವು 17,2,333ಗೆ ಹೆಚ್ಚಳ, ಪ್ರತಿ ದಿನ 13,424 ಹೆಚ್ಚುವರಿ ಟ್ರಿಪ್ಪುಗಳ ಕಾರ್ಯಾಚರಣೆ ಮಾಡಲಾಗುತ್ತಿದೆ.

* ಈಗಾಗಲೇ ನಾಲ್ಕು ನಿಗಮಗಳಲ್ಲಿ 1000 ಮೃತ ಸಿಬ್ಬಂದಿಗಳ ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ನೇಮಕಾತಿಗೆ ಆದೇಶ ನೀಡಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+