Deepavali 25: ಹಬ್ಬದ ಪ್ರಯುಕ್ತ ಹೆಚ್ಚುವರಿ 2500 KSRTC ಬಸ್ ವ್ಯವಸ್ಥೆ, ಟಿಕೆಟ್ ಮೇಲೆ ರಿಯಾಯಿತಿ
ಬೆಂಗಳೂರು, ಅಕ್ಟೋಬರ್ 13: ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ಕರ್ನಾಟಕದಲ್ಲಿ ಸಂಭ್ರಮ, ಸಡಗರ ಮನೆ ಮಾಡಿದೆ. ನಾಗರಿಕರು ಹಬ್ಬ ಬರ ಮಾಡಿಕೊಳ್ಳಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಹಬ್ಬಕ್ಕಾಗಿ ಬೇರೆ ಬೇರೆ ಊರುಗಳಿಗೆ ತೆರಳುವವರ ಸಂಖ್ಯೆ ಹೆಚ್ಚಿರುತ್ತದೆ. ಈ ಜನ ದಟ್ಟಣೆ ನಿವಾರಣೆಗೆ ಹಾಗೂ ಸಾರಿಗೆ ಸೇವೆ ಲಭ್ಯವಾಗುವಂತೆ ಮಾಡಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) 2500 ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆ ಮಾಡುತ್ತಿದೆ.
ಈ ವಿಶೇಷ ಸಾರಿಗೆ ವ್ಯವಸ್ಥೆಯು 2025 ಅಕ್ಟೋಬರ್ 20 ರಂದು ನರಕ ಚತುರ್ದಶಿ, 2025 ಅಕ್ಟೋಬರ್ 22 ಬಲಿಪಾಡ್ಯಮಿ ಆಚರಣೆ ಇರಲಿದೆ. ಈ ವಿಶೇಷ ಸಾರಿಗೆ ವ್ಯವಸ್ಥೆಯು ಪ್ರಯಾಣಿಕರಿಗೆ ಅನುಕೂಲಕರಂದು ಅಕ್ಟೋಬರ್ 17 20 ರವರೆಗೆ ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ ಸೇವೆ ನೀಡಲಿವೆ. 2500 ಬಸ್‌ಗಳು ವಿವಿಧ ಮಾರ್ಗಗಳಲ್ಲಿ ಸಂಚರಿಸಲಿವೆ.

ಕರ್ನಾಟಕದ ಜಿಲ್ಲೆಗಳು ಮಾತ್ರವಲ್ಲದೇ ಹೊರ ರಾಜ್ಯಗಳ ಅನೇಕ ಸ್ಥಳಗಳಿಗೆ ಬೆಂಗಳೂರಿನಿಂದ ಹೊರಡುತ್ತವೆ. ಬೆಂಗಳೂರಿಗೆ ಹೊರ ರಾಜ್ಯಗಳಿಂದ ಅಕ್ಟೋಬರ್ 22 ರಿಂದ 26ರವರೆಗೆ ಕಾರ್ಯಾಚರಣೆ ನಡೆಸಲಿವೆ. ಬಸ್ ಹೊರಡುವ ಮಾರ್ಗ, ಎಲ್ಲಿಂದ ಎಲ್ಲಿಗೆ ಎಂಬ ವಿವರ ಇಲ್ಲಿದೆ.
ಕರ್ನಾಟಕದಲ್ಲಿ ಬಸ್ ಸಂಚಾರ ವಿವರ
ನಗರದ ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಬಸ್‌ಗಳು ಓಡಾಡಲಿವೆ.
ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಗೆ ಕಾರ್ಯಾಚರಣೆ ನಡೆಸಲಿವೆ.
ಹೊರ ರಾಜ್ಯಗಳಿಗೆ ಬಸ್ ಸೇವೆ: ಪ್ರಯಾಣಿಕರಿಗೆ ಡಿಸ್ಕೌಂಟ್
• ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುತ್ತಿದೆ.
• ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯ ಸಹ ಕಲ್ಪಿಸಲಾಗಿದೆ.
• ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟ್‌ಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.
• ಇ-ಟಿಕೇಟ್ ಬುಕಿಂಗ್ ಅನ್ನು www.ksrtc.karnataka.gov.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಸೀಟು ಕಾಯ್ದಿರಿಸಬಹುದು.
• ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ ಬುಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.
• ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇಕಡ 05 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ & ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದರೆ ಟಿಕೆಟ್ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ಲಭ್ಯವಿದೆ.
• ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೆರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇವೆ. ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.
• ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ ಹಾಗೂ ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ.
• ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಿವೆ ಎಂದು KSRTC ಪ್ರಕಟಣೆಯಲ್ಲಿ ತಿಳಿಸಿದೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ












Click it and Unblock the Notifications