'ಮಂಡ್ಯ ಸಾಹಿತ್ಯ ಸಮ್ಮೇಳನ'ಕ್ಕೆ ತೆರಳುವ ಪ್ರಯಾಣಿಕರಿಗೆ KSRTC ಗುಡ್ ನ್ಯೂಸ್: ವಿಶೇಷ್ ಬಸ್ ವ್ಯವಸ್ಥೆ

ಬೆಂಗಳೂರು, ಡಿಸೆಂಬರ್ 19: ಮಂಡ್ಯದಲ್ಲಿ ಈ ಪ್ರಸಕ್ತ ಸಾಲಿನ ಮೂರು ದಿನಗಳ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ ಮಾಡಲಾಗಿದೆ. ಈ ಸಂಬಂಧ ವಿವಿಧ ತಾಲೂಕು, ಜಿಲ್ಲೆಗಳಿಂದ ಹಾಗೂ ಬೆಂಗಳೂರು ಮತ್ತು ಮೈಸೂರು ಭಾಗದಿಂದಲೂ ಜನರು ಆಗಮಿಸುವ ನಿರೀಕ್ಷೆ ಇದೆ. ಈ ಕಾರಣದಿಂದಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ವಿಶೇಷ ಬಸ್‌ ವ್ಯವಸ್ಥೆ ಮಾಡಿದೆ. ಸಾಹಿತ್ಯಾಸಕ್ತರಿಗೆ ಸಾರಿಗೆ ನಿಗಮವು ಈ ಮೂಲಕ ಗುಡ್ ನ್ಯೂಸ್ ನೀಡಿದೆ.

ರಾಜ್ಯ ಸರ್ಕಾರ ಮತ್ತು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸಕ್ಕರೆ ನಾಡು ಮಂಡ್ಯದಲ್ಲಿ ಡಿಸೆಂಬರ್ 20ರಿಂದ ಡಿಸೆಂಬರ್ 22ರವರೆಗೆ ಮೂರು ದಿನ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಿದೆ. ಎಲ್ಲ ಸಿದ್ಧತೆಗಳು ಮುಗಿದಿದ್ದು, ಪೊಲೀಸ್ ಬಿಗಿ ಭದ್ರತೆ, ಎಲ್ಲ ವ್ಯವಸ್ಥೆ ಮಾಡಲಾಗಿದೆ.

KSRTC Arranged Special Buses to Mandya 87th Kannada Sahitya Sammelana

ಮಂಡ್ಯ ಕನ್ನಡ ಹಬ್ಬಕ್ಕೆ ಜಿಲ್ಲೆ ವಿವಿಧ ತಾಲೂಕುಗಳಿಂದ ಬರುವ ಸಾಹಿತ್ಯಾಸಕ್ತರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಇನ್ನೂ ಬೆಂಗಳೂರಿನಿಂದ ತೆರಳುವವರಿಗೆ ಮೈಸೂರು ರಸ್ತೆಯ ಸ್ಯಾಟ್‌ಲೈಟ್ ಬಸ್ ನಿಲ್ದಾಣದಿಂದ ವಿಶೇಷ ಬಸ್‌ಗಳು ಸಂಚರಿಸಲಿವೆ.

ಇನ್ನೂ ಮೈಸೂರಿನಿಂದಲೂ ಕೆಎಸ್‌ಆರ್‌ಟಿಸಿ ವಿಶೇಷ ಬಸ್‌ಗಳು ಪ್ರಯಾಣಿಕರನ್ನು ಹೊತ್ತು ಮಂಡ್ಯಕ್ಕೆ ಬರಲಿವೆ. ನಿಗದಿತ ನಿಲ್ದಾಣಗಳಿಂದ ಹೊರಡಲಿವೆ. ಇನ್ನೂ ಮಂಡ್ಯ ಜಿಲ್ಲೆಯ ವಿವಿಧ ತಾಲೂಕಿನ ಜನರಿಗೆ ಸಮ್ಮೇಳನ ಸ್ಥಳಕ್ಕೆ ಬರಲು ಒಟ್ಟು 15 ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಇವುಗಳು ಯಾವುದೇ ಟಿಕೆಟ್ ದರ ಪಡೆಯದೇ ಉಚಿತವಾಗಿ ಜನರನ್ನು ಕರೆದೊಯ್ಯಲಿವೆ.

ಇನ್ನೂ ಮಂಡ್ಯ ಜಿಲ್ಲಾಧಿಕಾರಿಗಳು ಮೂರು ದಿನಗಳ ಕನ್ನಡ ಹಬ್ಬ ಸಂಬಂಧ ನಿಗದಿತ ಪ್ರದೇಶದ ಸುತ್ತಮುತ್ತಲಿನ ರಸ್ತೆಗಳಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ. ಹೀಗಾಗಿ ನಿರ್ಬಂಧಿಸಿದ ರಸ್ತೆಗಳಲ್ಲಿ ಎಂದಿನಂತೆ ಅವಕಾಶ ಇರುವುದಿಲ್ಲ ಎಂದು ತಿಳಿದು ಬಂದಿದೆ.

ಸಾಹಿತ್ಯ ಸಮ್ಮೇಳನ ಪ್ರಯುಕ್ತ ಮಂಡ್ಯ ಜಿಲ್ಲೆ ವ್ಯಾಪ್ತಿಯಲ್ಲಿ ಎಲ್ಲ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ್ ಅವರು ಡಿಸೆಂಬರ್ 20, 21ರಂದು ಎರಡು ದಿನ ಸಾರ್ವಜನಿಕ ರಜೆ ಘೊಷಿಸಿದ್ದಾರೆ. ಎಲ್ಲ ವಿದ್ಯಾರ್ಥಿಗಳು, ಮಕ್ಕಳು, ಉಪನ್ಯಾಸಕರು ಈ ನುಡಿ ಜಾತ್ರೆಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂಬ ಕಾರಣಕ್ಕಾಗಿ ರಜೆ ಘೋಷಿಸಲಾಗಿದೆ ಎಂದು ಬುಧವಾರದ ಆದೇಶದಲ್ಲಿ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ..

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+