KSRTC: ವಿದ್ಯಾರ್ಥಿ ಬಸ್ ಪಾಸ್‌ಗಳಿಗೆ ಅರ್ಜಿ ಸಲ್ಲಿಸಿ: ಸಲ್ಲಿಕೆ ವಿಧಾನ, ದರ? ನಿಮಗಾಗಿ ಇಲ್ಲಿದೆ ಮಾಹಿತಿ
ಬೆಂಗಳೂರು, ಜೂನ್ 01: ಕರ್ನಾಟಕ ರಾಜ್ಯದಲ್ಲಿ ಇಂದಿನಿಂದ (ಜೂನ್ 1) ಶಾಲಾ-ಕಾಲೇಜುಗಳ ತರಗತಿಗಳು ಆರಂಭವಾಗಿವೆ. ಇತ್ತ ಪ್ರತಿ ವರ್ಷದಂತೆ ಈ ವರ್ಷವು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ವಿದ್ಯಾರ್ಥಿಗಳ ಬಸ್ ಪಾಸ್ ವಿತರಣೆಗೆ ಅರ್ಜಿಗಳನ್ನು ಆಹ್ವಾನಿಸಿದೆ.
KSRTC ಗಣಕೀಕೃತ ಬಸ್‌ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಿದೆ. ಹಾಗಾದರೆ ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟ್‌ಲ್‌ನಲ್ಲಿ ಹೇಗೆ ಅರ್ಜಿ ಸಲ್ಲಿಸಬೇಕು?, ವಿಧಾನ, ಬಸ್ ಪಾಸ್ ಅವಧಿ, ದರದ ಪಟ್ಟಿ, ಸಂಪೂರ್ಣ ಮಾಹಿತಿ ಇಲ್ಲಿದೆ.

ಸೇವಾ ಸಿಂಧು ಪೋರ್ಟ್‌ಲ್: ಅರ್ಜಿ ಸಲ್ಲಿಕೆ ವಿಧಾನಗಳು
* ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬೇಕಿದೆ. ಅದಕ್ಕಾಗಿ ಮೊದಲು ನೀವು ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in/buspassservices/ ಗೆ ಭೇಟಿ ನೀಡಬೇಕು.
* ವಿದ್ಯಾರ್ಥಿಗಳು 31.05.2024 ರಿಂದ ಸೇವಾಸಿಂಧು ಪೋರ್ಟಲ್‌ನಲ್ಲಿ ಬಸ್ ಪಾಸ್‌ಗಾಗಿ ಅರ್ಜಿಗಳನ್ನು ಸಲ್ಲಿಸಬಹುದು. ಆನ್ ಲೈನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇಲ್ಲ ಎಂದು ನಿಗಮ KSRTC ತಿಳಿಸಿದೆ.

* ವಿದ್ಯಾರ್ಥಿಗಳು, ಕರ್ನಾಟಕ-ಒನ್, ಗ್ರಾಮ-ಒನ್ ಮತ್ತು ಬೆಂಗಳೂರು-ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳ ಮೂಲಕವು ಅರ್ಜಿ ಸಲ್ಲಿಸಬೇಕು. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ ರೂ.30/- ಸೇವಾ ಶುಲ್ಕವನ್ನು ಸದರಿ ಕೇಂದ್ರಗಳ ಸಿಬ್ಬಂದಿಗಳು ಪಡೆಯಲು ಅವಕಾಶ ಇದೆ.
* ವಿದ್ಯಾರ್ಥಿಗಳು ವಿದ್ಯಾರ್ಥಿ ಬಸ್ ಪಾಸ್‌ಗಾಗಿ ಅರ್ಜಿ ಸಲ್ಲಿಸಲು Declaration Form ಅನ್ನು ಸೇವಾಸಿಂಧು ತಂತ್ರಾಂಶದಲ್ಲಿ ಅಥವಾ ನಿಗಮದ ವೆಬ್‌ಸೈಟ್‌ನಲ್ಲಿ (https://ksrtc.karnataka.gov.in/studentpass) ಮಾಡಬೇಕು. ಅರ್ಜಿ ಸಲ್ಲಿಸುವಾಗ Submit ಮಾಡಬೇಕು.
* ಅರ್ಜಿ ಅನುಮೋದನೆಯಾದ ವಿದ್ಯಾರ್ಥಿಗಳಿಗೆ ಪಾಸು ಪಡೆಯಲು ಭೇಟಿ ನೀಡಬೇಕಿರುವ ಕೌಂಟರ್‌ನ ಹೆಸರು / ವಿಳಾಸ ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮೂಲಕ ಕಳುಹಿಸಲಾಗುವುದು. ವಿದ್ಯಾರ್ಥಿ ಪಾಸುಗಳನ್ನು 01.06.2024 ರಿಂದ ನಿಗದಿತ ಪಾಸ್ ಕೌಂಟರ್ ಗಳಲ್ಲಿ ವಿತರಿಸಲಾಗುವುದು.
* ವಿದ್ಯಾರ್ಥಿಗಳು ಆಯ್ಕೆ ಮಾಡಿದ ಕೌಂಟರ್‌ಗೆ ತೆರಳಿ, ನಿಗದಿತ ಪಾಸಿನ ಶುಲ್ಕವನ್ನು ನಗದು, ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್/ ಯುಪಿಐ ಮೂಲಕ ಶುಲ್ಕ ಪಾವತಿಸಬೇಕು.
* ಕರ್ನಾಟಕ ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯದ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಲಿಂಗತ್ವ, ಅಲ್ಪಸಂಖ್ಯಾತರು) ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದೊಳಗೆ ಉಚಿತ ಬಸ್ ಸೌಲಭ್ಯ ನೀಡಿದೆ. ಹೀಗಾಗಿ ಕರ್ನಾಟಕದಲ್ಲಿ ವಾಸವಿದ್ದು, ಇಲ್ಲಿನ ಶಾಲಾ ಕಾಲೇಜುಗಳು ವ್ಯಾಸಂಗ ಮಾಡುತ್ತಿರುವ, ಗಡಿ ಭಾಗದ ಮಾರ್ಗಗಳಲ್ಲಿ ವಿದ್ಯಾರ್ಥಿನಿಯರು ವಿದ್ಯಾರ್ಥಿ ಬಸ್ ಪಾಸ್ ಪಡೆಯುವ ಅಗತ್ಯವಿದ್ದರೆ ಮೇಲ್ಕಂಡ ಕ್ರಮ ಅನುಸರಿಸಬೇಕು.
* KSRTC ವ್ಯಾಪ್ತಿಯಲ್ಲಿ 129 ಪಾಸ್ ವಿತರಣೆ ಕೌಂಟರ್‌ಗಳ ಮಾಹಿತಿಯನ್ನು ನಿಗಮ ಜಾಲತಾಣದಲ್ಲಿ ಒದಗಿಸಲಾಗಿದೆ. ಹೆಚ್ಚಿನ ಮಾಹಿತಿಗೆ ವಿದ್ಯಾರ್ಥಿಗಳು http://ksrtc.karnataka.gov.in/student pass ಭೇಟಿ ನೀಡಬೇಕು.
10 ತಿಂಗಳ ಅವಧಿಯ 'ಬಸ್‌ಪಾಸ್' ಶುಲ್ಕದ ವಿವರ
1. ಪ್ರಾಥಮಿಕ ಶಾಲೆ ಸಾಮಾನ್ಯ ವಿದ್ಯಾರ್ಥಿಗಳಿಗೆ (OBC) ₹150, ಎಸ್‌ಸಿ,ಎಸ್‌ಟಿ ವಿದ್ಯಾರ್ಥಿಗಳಿಗೆ ₹150.
2. ಪ್ರೌಢಶಾಲೆ ವಿದ್ಯಾರ್ಥಿಗಳಿಗೆ (OBC) ₹750, ಎಸ್‌ಸಿ,ಎಸ್‌ಟಿ ವಿದ್ಯಾರ್ಥಿಗಳಿಗೆ ₹150.
3. ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ (OBC) ₹550, ಎಸ್‌ಸಿ,ಎಸ್‌ಟಿ ವಿದ್ಯಾರ್ಥಿಗಳಿಗೆ ₹150.
4. ಕಾಲೇಜು/ಡಿಪ್ಲೋಮಾ ವಿದ್ಯಾರ್ಥಿನಿಯರಿಗೆ (OBC) ₹1050, ಸಿ,ಎಸ್‌ಟಿ ವಿದ್ಯಾರ್ಥಿಗಳಿಗೆ ₹150.
5. ಐಟಿಐ ವಿದ್ಯಾರ್ಥಿಗಳಿಗೆ (12 ತಿಂಗಳ ಪಾಸ್) (OBC) ₹1310, ಎಸ್‌ಸಿ,ಎಸ್‌ಟಿ ವಿದ್ಯಾರ್ಥಿಗಳಿಗೆ ₹160.
6. ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳಿಗೆ (OBC) ₹1550, ಎಸ್‌ಸಿ,ಎಸ್‌ಟಿ ವಿದ್ಯಾರ್ಥಿಗಳಿಗೆ ₹150.
7. ಸಂಜೆ ಕಾಲೇಜು/ Phd ಅಭ್ಯರ್ಥಿಗಳಿಗೆ (OBC) ₹1350, ಎಸ್‌ಸಿ,ಎಸ್‌ಟಿ ವಿದ್ಯಾರ್ಥಿಗಳಿಗೆ ₹150.
ವಿದ್ಯಾರ್ಥಿಗಳು ಅರ್ಜಿಗಳು, ಪಾಸು ವಿತರಣೆಗೆ ಸಂಬಂಧಿಸಿದಂತೆ, ಪಾಸು ಮುದ್ರಣಕ್ಕೆ ಸಂಬಂಧಿಸಿದಂತೆ ದೂರುಗಳು ಇದ್ದಲ್ಲಿ, ಕೂಡಲೇ ಸಹಾಯವಾಣಿ 8792662814/ 879662816/ 879662821/ 080-49203888ಗೆ ಸಂಪರ್ಕಿಸಬಹುದು.
ಕೇವಲ ಕೆಎಸ್‌ಆರ್‌ಟಿಸಿ ಮಾತ್ರವಲ್ಲದೇ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಧಾರವಾಡ ಜಿಲ್ಲಾ ವ್ಯಾಪ್ತಿಯ ಸೇರಿದಂತೆ ವಿವಿಧ ಜಿಲ್ಲೆಗಳ ವ್ಯಾಪ್ತಿಯ ಹಲವು ಕೇಂದ್ರಗಳಲ್ಲಿ ಪಾಸ್ ವಿತರಣೆ ಆರಂಭಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಕೂಡಲೇ ಅರ್ಜಿಗಳನ್ನು ಸಲ್ಲಿಸಬೇಕು.
ಹುಬ್ಬಳ್ಳಿ, ಧಾರವಾಡ, ಕಲಘಟಗಿ, ಗದಗ ಸೇರಿದಂತೆ ಹಲವು ಕಡೆಗಳಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪಾಸ್ ವಿತರಣಾ ಕೇಂದ್ರಗಳು ಇವೆ. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಆಯಾ ಕೇಂದ್ರಗಳಿಂದ ಪಾಸ್ ಪಡೆಯಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.












Click it and Unblock the Notifications