Karnataka Bandh: KSRTC, BMTC ಬಸ್ ಸಂಚಾರ: ನೌಕರರಿಗೆ ಕಡ್ಡಾಯ ಹಾಜರಾತಿಗೆ ಸೂಚನೆ!
ಬೆಂಗಳೂರು, ಸೆಪ್ಟೆಂಬರ್ 28: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಶುಕ್ರವಾರ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಶುಕ್ರವಾರದ ಕರ್ನಾಟಟಕ ಬಂದ್‌ಗೆ ಸಾವಿರಾರು ಸಂಘಟನೆಗಳು ಬೆಂಬಲ ನೀಡಿದ್ದು, ಕರ್ನಾಟಕ ಸಂಪೂರ್ಣ ಸ್ತಬ್ಧವಾಗುವ ಸಾಧ್ಯತೆ ಇದೆ.
ಇತ್ತ ಕರ್ನಾಟಕ ಬಂದ್ ಆಗಲಿದೆ, ಆದರೆ, ಸೆಪ್ಟೆಂಬರ್ 29ರಂದು ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ಗಳು ಎಂದಿನಂತೆ ಸಂಚರಿಸಲಿವೆ ಎಂದು ತಿಳಿದುಬಂದಿದೆ. ಸಾರಿಗೆ ನೌಕರರು ಕಡ್ಡಾಯವಾಗಿ ಶುಕ್ರವಾರ ಕೆಲಸಕ್ಕೆ ಹಾಜರಾಗಬೇಕು ಎಂದು ಸೂಚನೆ ನೀಡಲಾಗಿದೆ.

ಹೌದು. ಕರ್ನಾಟಕ ಬಂದ್ ಹಿನ್ನೆಲೆ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್ ಸೇವೆಯನ್ನು ಶುಕ್ರವಾರ ನೀಡಲಿವೆ. ಈ ಹಿನ್ನೆಲೆ ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ನೌಕರರಿಗೆ ಕಡ್ಡಾಯ ಹಾಜರಾತಿಗೆ ಸೂಚನೆ ನೀಡಲಾಗಿದೆ. ದೀರ್ಘಾವಧಿ, ವಾರದ ರಜೆ ಹೊರತುಪಡಿಸಿ ನೌಕರರು ಹೊರತುಪಡಿಸಿ ಉಳಿದ ಎಲ್ಲಾ ನೌಕರರು ಕಡ್ಡಾಯವಾಗಿ ನಾಳೆ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ನೌಕರರಿಗೆ ಸಾರಿಗೆ ನಿಗಮಗಳು ಮೌಖಿಕ ಸೂಚನೆ ನೀಡಿವೆ.
ಇನ್ನೂ ಸಾರಿಗೆ ನಿಗಮಗಳು ಅಗತ್ಯ ಸೇವೆಗಳ ಅಡಿಯಲ್ಲಿ ಬರುವುದರರಿಂದ ಸೇವೆ ನೀಡಬೇಕು. ಹೀಗಾಗಿ ಯಾರು ಸಹ ನಾಳಿನ ಬಂದ್ ನಲ್ಲಿ ಭಾಗಿಯಾಗುವಂತಿಲ್ಲ. ಒಂದು ವೇಳೆ ಕೆಲಸಕ್ಕೆ ಗೈರು ಆಗಿ ಬಂದ್ ನಲ್ಲಿ ಭಾಗಿಯಾದ್ರೆ ಅಂತವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುವುದಾಗಿ ಎಚ್ಚರಿಕೆ ಸಹ ನೀಡಲಾಗಿದೆ.

ಇತ್ತ ಬೆಂಗಳೂರು ಬಂದ್ ಆದ ಸಂದರ್ಭದಲ್ಲಿ ಕೆಲ ಕಡೆ ಕಲ್ಲು ತೂರಾಟಗಳಾದ ವರದಿಯಾಗ ಹಿನ್ನೆಲೆಯಲ್ಲಿ ಬಿಎಂಟಿಸಿ ನಿಗಮವೂ ಎಚ್ಚರಗೊಂಡಿದೆ. ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಸಾರ್ವಜನಿಕರ ಆಸ್ತಿಗೆ ಹಾನಿಯಾಗದಂತೆ ಬಿಎಂಟಿಸಿ ನಿಗಮ ಮುಂಜಾಗ್ರತಾ ಕ್ರಮಕೈಗೊಂಡಿದೆ. ಬಿಎಂಟಿಸಿ ಎಲ್ಲ ಡಿಪೋಗಳಿಗೂ ಪೊಲೀಸ್ ಭದ್ರತೆ ನೀಡುವಂತೆ ನಿಗಮ ಮನವಿ ಮಾಡಿದೆ. ಅಲ್ಲದೇ ಬಸ್ ನಿಲ್ದಾಣಗಳಲ್ಲೂ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದೆ. ಈ ಮೂಲಕ ಬಿಎಂಟಿಸಿ ಬಸ್ ರಸ್ತೆಗಿಳಿದಾಗ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಮುಂದಾಗಿದೆ ಎಂದು ತಿಳಿದು ಬಂದಿದೆ.
ಸಾರ್ವಜನಿಕರಿಗೆ ತೊಂದರೆಯಾಗದಂತೆ ಬಸ್ ಗಳ ಕಾರ್ಯಚರಣೆ ಮಾಡಲು ವ್ಯವಸ್ಥೆ ಮಾಡಿಕೊಳ್ಳುವಂತೆ ತಿಳಿಸಲಾಗಿದ್ದು, ಡಿಪೋ ಮ್ಯಾನೇಜರ್ ಗಳು ಕಡ್ಡಾಯವಾಗಿ ಡಿಪೋದಲ್ಲಿದ್ದು ಬಸ್ ಕಾರ್ಯಚರಣೆ ನಡೆಸುವಂತೆ ಸೂಚನೆ ನೀಡಲಾಗಿದೆ. ಇನ್ನೂ ರಾಜ್ಯಾದ್ಯಂತ ಕೆಸ್ಆರ್ಟಿಸಿ ಬಸ್ ಸಂಚರಿಸಲಿವೆ. ಇತ್ತ ಬೆಂಗಳೂರಿನಲ್ಲೂ ಸಹ ಬಿಎಂಟಿಸಿ ಬಸ್ ಸಂಚಾರ ಇರಲಿದೆ ಎಂದು ಮಾಹಿತಿ ನೀಡಿದೆ.












Click it and Unblock the Notifications