KSRTC: ಕೆಎಸ್‌ಆರ್‌ಟಿಸಿ, ಬಿಎಂಟಿಸಿಯಿಂದ ಟಿಕೆಟ್ ದರ ಏರಿಕೆಗಾಗಿ ಸರ್ಕಾರಕ್ಕೆ ಪ್ರಸ್ತಾವನೆ
ಬೆಂಗಳೂರು ಜುಲೈ 31: ಕಾಂಗ್ರೆಸ್ ಪಕ್ಷದ ಪಂಚ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆಯಿಂದ ಮಹಿಳಾ ಮಣಿಗಳು ಸಖತ್ ಖುಷಿಯಾಗಿದ್ದಾರೆ. ರಾಜ್ಯಾದ್ಯಂತ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಮಹಿಳೆಯರಿಗೆ ಅವಕಾಶ ನೀಡಲಾಗಿದೆ. ಆದರೆ ಮಹಿಳೆಯರ ಈ ಉಚಿತ ಪ್ರಯಾಣದ ಹೊರೆಯನ್ನು ಪುರುಷ ಪ್ರಯಾಣಿಕರು ಹೋರುವ ಸ್ಥಿತಿ ಬರಬೇಕಾಗಬಹುದು.
ಹೌದು... ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರವನ್ನು ಹೆಚ್ಚಿಸುವಂತೆ ಸರ್ಕಾರದ ಮುಂದೆ ಪ್ರಸ್ತಾಪಿಸಿವೆ. ಹೀಗಾಗಿ ಪ್ರಸ್ತಾವನೆಯಂತೆ ಸರ್ಕಾರ ಪ್ರಯಾಣ ದರಕ್ಕೆ ಒಪ್ಪಿಗೆ ಸೂಚಿಸಿದರೆ ಇದರ ಹೊಡೆತ ಪುರುಷ ಪ್ರಯಾಣಿಕರ ಮೇಲೆ ಬೀಳಲಿದೆ. ಜೊತೆಗೆ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದ ಸರ್ಕಾರದ ಮೇಲೆಯೇ ಇದರ ಹೊರೆ ಬೀಳಲಿದೆ.

ಹೀಗಾಗಿ ಸರ್ಕಾರ ಈ ಬಗ್ಗೆ ಯಾವ ರೀತಿ ನಿರ್ಧಾರ ಕೈಗೊಳ್ಳುತ್ತದೆ ಎಂದು ಕಾದು ನೋಡಬೇಕಿದೆ. ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಶೇಕಡ 15 ರಿಂದ 20 ರಷ್ಟು ಏರಿಕೆಗೆ ಸಾರಿಗೆ ನಿಗಮಗಳಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಬಿಎಂಟಿಸಿ ಬರೋಬ್ಬರಿ ಶೇ.37ರಷ್ಟು ಟಿಕೆಟ್ ದರ ಹೆಚ್ಚಳ ಮಾಡಬೇಕೆಂದು ಪ್ರಸ್ತಾವನೆ ಸಲ್ಲಿಸಿದ್ದರೆ, ಎನ್‌ಡಬ್ಲ್ಯೂಕೆಆರ್‌ಟಿಸಿ ಶೇ. 30 ಹಾಗೂ ಕೆಕೆಆರ್‌ಟಿಸಿ ಶೇ 30 ರಷ್ಟು ಟಿಕೆಟ್ ದರ ಏರಿಕೆ ಮಾಡುವಂತೆ ಪ್ರಸ್ತಾವನೆಯನ್ನು ಸಲ್ಲಿಕೆ ಮಾಡಿವೆ.
ಶಕ್ತಿ ಯೋಜನೆ ಜಾರಿಯಾದ ಬಳಿಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಆದಾಯ ಹೆಚ್ಚಾಗಿದೆ. ಆದರೆ ಸಿಬ್ಬಂದಿ ವೇತನ, ಡೀಸೆಲ್, ಬಿಡಿ ಭಾಗಗಳ ಬೆಲೆ ಹೆಚ್ಚಳದಿಂದ ನಿಗಮಗಳು ಆರ್ಥಿಕವಾಗಿ ಸದೃಢವಾಗಿಲ್ಲ. ಹೀಗಾಗಿ ಶೇಕಡ ಪ್ರಯಾಣ ದರ ಹೆಚ್ಚಳಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ.

ಈ ಪ್ರಸ್ತಾವನೆಗೆ ಅನುಮೋದನೆ ನೀಡುವ ಹೊಣೆಯನ್ನು ಸಿಎಂಗೆ ಬಿಡಲಾಗಿದೆ. ಈಗಾಗಲೇ ಪ್ರಸ್ತಾವನೆ ಬಗ್ಗೆ ಸಿಎಂ ಗಮನಕ್ಕೆ ತರಲಾಗಿದೆ. ಇನ್ನಿ ಕೆಲವೇ ದಿನಗಳಲ್ಲಿ ಸಿಎಂ ಸಭೆ ನಡೆಸಿ ದರ ಹೆಚ್ಚಳ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಕೆಎಸ್‌ಆರ್‌ಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ, ಕೆಕೆಆರ್‌ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಿ ನಾಲ್ಕು ವರ್ಷಗಳಾಗಿದ್ದರೆ, ಬಿಎಂಟಿಸಿ ಬಸ್ ಪ್ರಯಾಣ ದರ ಏರಿಕೆ ಮಾಡಿ ಬರೋಬ್ಬರಿ ಹತ್ತು ವರ್ಷಗಳಾಗಿವೆ. ನಾಲ್ಕು ನಿಗಮದ ಬಸ್ಸುಗಳಿಗೆ ಡಿಸೇಲ್ ಹಾಕಿಸಲು ತುಂಬಾ ಕಷ್ಟ ಆಗುತ್ತಿದೆ. ಹೆಚ್ಚುವರಿಯಾಗಿ ತಿಂಗಳಿಗೆ ಹದಿನೈದು ಕೋಟಿ ರೂಪಾಯಿ ಹಣ ಬೇಕಾಗುತ್ತಿದ್ದು ವರ್ಷಕ್ಕೆ 190-200 ಕೋಟಿಯಷ್ಟು ಹೆಚ್ಚುವರಿ ಹೊರೆ ಆಗುತ್ತದೆ ಎಂದು ನಿಗಮಗಳು ಪ್ರಸ್ತಾವನೆಯಲ್ಲಿ ತಿಳಿಸಿವೆ.
ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷವು ನೀಡಿದ್ದ 5 ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ(Shakti scheme) ಸರ್ಕಾರಿ ಬಸ್‌ಗಳಲ್ಲಿ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ನೀಡುತ್ತದೆ. ಶಕ್ತಿ ಯೋಜನೆಯನ್ನು ಜೂನ್ 11 ರಂದು ಜಾರಿಗೆ ತರಲಾಯಿತು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC), ಉತ್ತರ ಪಶ್ಚಿಮ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)ಯಲ್ಲಿ ಪ್ರಯಾಣಿಕರ ಸಂಖ್ಯೆ ಗಗನಕ್ಕೇರಿದೆ. ಸರ್ಕಾರ ಯಾವುದೇ ಸಂದರ್ಭದಲ್ಲಾದರೂ ಉಚಿತ ಪ್ರಯಾಣವನ್ನು ನಿಲ್ಲಿಸಬಹುದು ಎಂಬ ಕಾರಣಕ್ಕೆ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಇದರಿಂದ ಪುರುಷ ಪ್ರಯಾಣಿಕರ ಸಂಖ್ಯೆ ಕೂಡ ಹೆಚ್ಚಾಗಿದ್ದು ಆದಾಯ ಹೆಚ್ಚಾಗಿದೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ












Click it and Unblock the Notifications