ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜನರ ಜೇಬಿಗೆ ಕತ್ತರಿ; ಸರ್ಕಾರಿ ಬಸ್ ದರ ಶೇ 12ರಷ್ಟು ಏರಿಕೆ

|
Google Oneindia Kannada News

ಬೆಂಗಳೂರು, ಫೆಬ್ರವರಿ 25 : ಕರ್ನಾಟಕ ಸರ್ಕಾರ ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕಿದೆ. ಸರ್ಕಾರಿ ಬಸ್‌ಗಳ ಪ್ರಯಾಣ ದರವನ್ನು ಶೇ 12ರಷ್ಟು ಹೆಚ್ಚಳ ಮಾಡಲಾಗಿದೆ. ಮಂಗಳವಾರ ಮಧ್ಯರಾತ್ರಿಯಿಂದಲೇ ನೂತನ ದರ ಜಾರಿಗೆ ಬರಲಿದೆ.

Recommended Video

Karnataka State Road Transport Corporation fare hiked up to 12 percent

ಎಲ್ಲಾ ಮಾದರಿಯ ಸರ್ಕಾರಿ ಬಸ್‌ಗಳ ಪ್ರಯಾಣ ದರವನ್ನು ಏರಿಕೆ ಮಾಡಲು ಕರ್ನಾಟಕ ಸರ್ಕಾರ ಒಪ್ಪಿಗೆ ನೀಡಿದೆ. ಕೆಎಸ್ಆರ್‌ಟಿಸಿ ಪ್ರಯಾಣ ದರ ಹೆಚ್ಚಳ ಮಾಡಲು ಅನುಮತಿ ನೀಡುವಂತೆ ಪ್ರಸ್ತಾವನೆ ಸಲ್ಲಿಸಿತ್ತು. ದರ ಏರಿಕೆ ಕುರಿತು ಹಲವು ದಿನಗಳಿಂದ ಚರ್ಚೆ ನಡೆಯುತ್ತಿತ್ತು.

 ಪ್ರವಾಸಿಗರಿಗೆ ಡಬಲ್ ಡೆಕ್ಕರ್ ಬಸ್ ನಲ್ಲಿ ಮೈಸೂರು ಸುತ್ತುವ ಮೋಜು... ಪ್ರವಾಸಿಗರಿಗೆ ಡಬಲ್ ಡೆಕ್ಕರ್ ಬಸ್ ನಲ್ಲಿ ಮೈಸೂರು ಸುತ್ತುವ ಮೋಜು...

KSRTC Bus Fare Hiked To 12 Percent

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಪ್ರಯಾಣ ದರವನ್ನು ಏರಿಕೆ ಮಾಡಿಲ್ಲ. ಉಳಿದ ಮೂರು ನಿಗಮಗಳಲ್ಲಿ ಪ್ರಯಾಣ ದರವನ್ನು ಹೆಚ್ಚಳ ಮಾಡಲು ಸರ್ಕಾರ ಅನುಮೋದನೆ ನೀಡಿದೆ.

ದಾವಣಗೆರೆ; ಕೆಎಸ್ಆರ್‌ಟಿಸಿಯಿಂದ ಶಿರಡಿ, ಶ್ರೀಶೈಲಕ್ಕೆ ಹೊಸ ಬಸ್ ದಾವಣಗೆರೆ; ಕೆಎಸ್ಆರ್‌ಟಿಸಿಯಿಂದ ಶಿರಡಿ, ಶ್ರೀಶೈಲಕ್ಕೆ ಹೊಸ ಬಸ್

ಕರ್ನಾಟಕ ಸರ್ಕಾರದ ಪರವಾಗಿ ಅಧೀನ ಕಾರ್ಯದರ್ಶಿ ಎಂ. ಸತ್ಯವತಿ ಈ ಕುರಿತು ಮಂಗಳವಾರ ಸಂಜೆ ಅಧಿಕೃತ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಆದೇಶದ ಪ್ರಕಾರ 100 ರೂ.ಗೆ 12 ರೂ. ಪ್ರಯಾಣ ದರ ಹೆಚ್ಚಳವಾಗಲಿದೆ.

ಬೆಂ-ಹೈದರಾಬಾದ್‌ ನಡುವೆ ಹೊಸ ಬಸ್ ಘೋಷಿಸಿದ ಕೆಎಸ್ಆರ್‌ಟಿಸಿ ಬೆಂ-ಹೈದರಾಬಾದ್‌ ನಡುವೆ ಹೊಸ ಬಸ್ ಘೋಷಿಸಿದ ಕೆಎಸ್ಆರ್‌ಟಿಸಿ

order

ಆದೇಶವೇನು?

* ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
* ವಾಯುವ್ಯ ಕರ್ನಾಟಕ ರಸ್ತೆ ಸಂಸ್ಥೆ
* ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳು ಶೇ 12ರಷ್ಟು ಪ್ರಯಾಣ ದರ ಹೆಚ್ಚಿಸಲು ಅನುಮತಿ ನೀಡಲಾಗಿದೆ.

English summary
Karnataka State Road Transport Corporation fare hiked up to 12 percent. Karnataka government approved for fare hike.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X