KSRTC Employees Protest: ಹೊಸ ವರ್ಷಕ್ಕೆ ಗುಡ್‌ನ್ಯೂಸ್‌; ಸಾರಿಗೆ ಇಲಾಖೆ ನೌಕರರ ಮುಷ್ಕರ ಮುಂದೂಡಿಕೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸೆಂಬರ್ 31ರಿಂದ ಅನಿರ್ಧಿಷ್ಟ ಅವಧಿಗೆ ಮುಷ್ಕರ ನಡೆಸಲು ಉದ್ದೇಶಿಸಲಾಗಿದ್ದ ಸಾರಿಗೆ ನಿಗಮಗಳ ಕಾರ್ಮಿಕರು ಈಗ ಮುಷ್ಕರವನ್ನು ಮುಂದೂಡಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸಾವಿನ ಕಾರಣ ಸಂಧಾನ ಸಭೆ ಮುಂದೂಡಿಕೆಯಾಗಿದ್ದರಿಂದ ಸದ್ಯ ಮುಷ್ಕರವನ್ನು ಮುಂದೂಡಲಾಗಿದೆ ಎಂದು ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಘೋಷಿಸಿವೆ.

ಭಾನುವಾರ ಸಿಎಂ ನಿವಾಸದಲ್ಲಿ ಕರೆದಿದ್ದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಭಾನುವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಾರಿಗೆ ನಿಗಮಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸಾರಿಗೆ ಇಲಾಖೆಯ ಪ್ರಧಾನಕಾರ್ಯದರ್ಶಿಯವರು ಸಾರಿಗೆ ನಿಗಮಗಳ ಹಿರಿಯ ಅಧಿಕಾರಿಗಳು ನಡೆಸಿದ ಸಭೆ ಯಶಸ್ವಿಯಾಗಿದೆ.

KSRTC Employees Postpone Indefinite Strike

ಜಂಟಿ ಕ್ರಿಯಾ ಸಮಿತಿಯು ಸಾರಿಗೆ ನಿಗಮಗಳ ಕಾರ್ಮಿಕರು ಡಿಸೆಂಬರ್ 31 ರಿಂದ ಅನಿರ್ಧಿಷ್ಟ ಅವಧಿಗೆ ಮುಷ್ಕರ ಮಾಡಲು ನೋಟಿಸನ್ನು ಸಿಎಂ ಸಿದ್ದರಾಮಯ್ಯನವರಿಗೆ ನೀಡಿತ್ತು. ಆಡಳಿತ ವರ್ಗ ಕಾರ್ಮಿಕ ಇಲಾಖೆಯ ಮೂಲಕ ಡಿಸೆಂಬರ್ 27ರಂದು ಕಾರ್ಮಿಕ ಆಯುಕ್ತರ ಜೊತೆ ರಾಜಿ ಸಂಧಾನ ಏರ್ಪಡಿಸಿತ್ತು. ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್‌ರವರು ನಿಧನರಾದ ಕಾರಣ ರಾಜ್ಯ ಸರ್ಕಾರ ಶೋಕಾಚರಣೆ ಪ್ರಯುಕ್ತ, ಸಾರ್ವತ್ರಿಕ ರಜೆ ಘೋಷಣೆ ಮಾಡಿದ್ದರಿಂದ ಸಂಧಾನ ಸಭೆಯನ್ನು ಡಿಸೆಂಬರ್ 30ಕ್ಕೆ ಮುಂದೂಡಿಕೆ ಮಾಡಲಾಗಿತ್ತು.

ಸಾರಿಗೆ ಸಚಿವರು ಜಂಟಿ ಕ್ರಿಯಾ ಸಮಿತಿಗೆ ಲಿಖಿತವಾಗಿ ಮನವಿ ಮಾಡಿ, ಸಾರಿಗೆ ನೌಕರರ ಮುಷ್ಕರವನ್ನು ಹಿಂಪಡೆಯಬೇಕು ಎಂದು ಮನವಿ ಮಾಡಿದ್ದು, ಸಂಕ್ರಾಂತಿ ಹಬ್ಬದ ನಂತರ ಸಾರಿಗೆ ನೌಕರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಿಎಂ ಸಿದ್ದರಾಮಯ್ಯನವರ ಜೊತೆ ಸಭೆ ಏರ್ಪಡಿಸುವುದಾಗಿ ಭರವಸೆ ನೀಡಿರುವ ಹಿನ್ನಲೆಯಲ್ಲಿ ಡಿಸೆಂಬರ್ 31 ರಿಂದ ನಡೆಸಲು ಉದ್ದೇಶಿಸಲಾಗಿದ್ದ ಅನಿರ್ಧಿಷ್ಟಾವಧಿ ಮುಷ್ಕರವನ್ನು ಮುಂದೂಡಿಕೆ ಮಾಡಲಾಗಿದೆ.

ಸಭೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಸಾರಿಗೆ ಸಿಬ್ಬಂದಿ ಮುಷ್ಕರದ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚೆ ಮಾಡಿದ್ದೇವೆ. ಈ ಹಿಂದಿದ್ದ ಬಿಜೆಪಿ ಸರ್ಕಾರ 5,900 ಕೋಟಿ ರೂಪಾಯಿ ಸಾಲ ಹೊರೆಸಿದ್ದೆ ಇಂದಿನ ಸಮಸ್ಯೆಗೆ ಕಾರಣವಾಗಿದೆ. ಫೆಬ್ರವರಿಯಲ್ಲಿ ಮಂಡಿಸಲಿರುವ ರಾಜ್ಯ ಬಜೆಟ್‌ನಲ್ಲಿ ಅನುದಾನ ನೀಡುವಂತೆ ಬೇಡಿಕೆ ಇಟ್ಟಿದ್ದು, ಸಂಕ್ರಾಂತಿ ಬಳಿಕ ಸಮಸ್ಯೆ ಬಗೆಹರಿಯಲಿದೆ ಎಂದು ಹೇಳಿದರು.

ನೌಕರರ ಬೇಡಿಕೆಗಳೇನು?

ಸಾರಿಗೆ ನೌಕರರ ವೇತನ ಪರಿಷ್ಕರಣೆ ಮಾಡಬೇಕು, 2020ರಲ್ಲಿ ವೇತನ ಹೆಚ್ಚಳ ಘೋಷಿಸಿದ್ದರೂ 1,750 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದ್ದು ಬಿಡುಗಡೆ ಮಾಡಬೇಕು. 2,900 ಕೋಟಿ ರೂಪಾಯಿ ಭವಿಷ್ಯ ನಿಧಿ ಬಾಕಿಯಿದ್ದು ಪಾವತಿ ಮಾಡಬೇಕು. ನಿವೃತ್ತ ನೌಕರರಿಗೆ ನೀಡಬೇಕಿರುವ 325 ಕೋಟಿ ರೂಪಾಯಿ ತುಟ್ಟಿಭತ್ಯೆಯನ್ನು ಕೂಡಲೇ ಪಾವತಿಸಲು ಆಗ್ರಹಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+