ಅ.5 ರಂದು ರಾಜ್ಯದ ಎಲ್ಲಾ ಸಾರಿಗೆ ನಿಗಮಗಳ ನೌಕರರ ಬೃಹತ್ ಪ್ರತಿಭಟನೆ!

ಬೆಂಗಳೂರು,ಸೆಪ್ಟೆಂಬರ್‌ 20: ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆಗಳಿಗೆ ತೊಂದರೆಯಾದ ಹಿನ್ನೆಲೆ ಸೆಪ್ಟೆಂಬರ್‌ 11 ರಂದು ಬಂದ್‌ ನಡೆಸಿದ್ದು, ಸರ್ಕಾರದ ವಿರುದ್ದ ಬೃಹತ್‌ ಪ್ರತಿಭಟನೆ ನಡೆಸಿತ್ತು. ಆದರೆ, ಇದಿಗ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯದ ಎಲ್ಲಾ ಸಾರಿಗೆ ನಿಗಮಗಳ ನೌಕರರು ಪ್ರತಿಭಟನೆಗೆ ಮುಂದಾಗಿದ್ದಾರೆ.

ಹೌದು, ವೇತನ ಹಿಂಬಾಕಿ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯದ ಎಲ್ಲಾ ಸಾರಿಗೆ ನಿಗಮಗಳ ನೌಕರರು ಅಕ್ಟೋಬರ್‌ 5 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ ನಲ್ಲಿ ಬೃಹತ್‌ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

KSRTC Employees Protest Urge For Fulfill Several Demands On october 05 In Bengaluru

ಈ ಕುರಿತು ಕೆ ಎಸ್‌ ಆರ್‌ ಟಿ ಸಿ ನಿಗಮಗಳ ಒಕ್ಕೂಟದ ಅಧ್ಯಕ್ಷ ಹೆಚ್‌ ಡಿ ರೇವಣ್ಣ ಅವರು, ಮಾಧ್ಯಮಗಳ ಜೊತೆಗೆ ಮಾತನಾಡಿದ್ದು, 2020 ಜನವರಿ 1 ರ ನಂತರ ವೇತನವನ್ನು ಶೇಕಡ 15 ರಷ್ಟು ಹೆಚ್ಚಳ ಮಾಡಿದ್ದು, ಪರಿಷ್ಕೃತ ಹಿಂಬಾಕಿಯನ್ನು ಪಾವತಿಸಬೇಕು. ಎಲೆಕ್ಟ್ರಿಕ್‌ ಬಸ್‌ ಗಳಲ್ಲಿ ನಮ್ಮ ನೌಕರರೇ ಚಾಲಕರಾಗಬೇಕು. ಈ ಹಿಂದೆ ಪ್ರತಿಭಟನೆ ನಡೆಸಿದಾಗ ವಜಾಗೊಳಿಸಿದ್ದ ಎಲ್ಲಾ ನೌಕರರನ್ನು ವಾಪಸ್‌ ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದು, ವಿವಿಧ ಬೇಡಿಕೆಗಳನ್ನ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನೂ ನಾಲ್ಕು ನಿಗಮಗಳ ನೌಕರರು ಅಕ್ಟೋಬರ್‌ 5 ರಂದು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. ಇದರಿಂದಾಗಿ ಅಕ್ಟೋಬರ್‌ 5 ರಂದು ಸಾರಿಗೆ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+