KSRTC Employees Strike : ಸಾರಿಗೆ ನೌಕರರಿಗೆ ಸಿಹಿ ಸುದ್ದಿ ನೀಡಿದ ಬಸವರಾಜ ಬೊಮ್ಮಾಯಿ; ಶೇ.15ರಷ್ಟು ವೇತನ ಹೆಚ್ಚಳ
ಬೇಡಿಕೆಗಳ ಈಡೇರಿಕೆಗಾಗಿ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ಕೊಟ್ಟ ಬೆನ್ನಲ್ಲೇ ವೇತಳ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ.
ಬೆಂಗಳೂರು, ಮಾರ್ಚ್16: ವೇತನ ಪರಿಷ್ಕರಣೆ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮಾರ್ಚ್ 21ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ಕೊಟ್ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವೇತನ ಹೆಚ್ಚಳಕ್ಕೆ ನಿರ್ಧಾರ ಮಾಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಾರಿಗೆ ನೌಕರರ ಶೇ.15 ರಷ್ಟು ವೇತನ ಹೆಚ್ಚಳ ಮಾಡುತ್ತೇವೆ ಹೆಚ್ಚಳ ಮಾಡುತ್ತೇವೆ ಎಂದು ಹೇಳುವ ಮೂಲಕ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ನೀಡಿದ್ದಾರೆ. ಇನ್ನೂ ಕೆಪಿಟಿಸಿಎಲ್ ನೌಕರರ ಶೇ.20 ರಷ್ಟು ವೇತನ ಹೆಚ್ಚಳ ಮಾಡಲು ತೀರ್ಮಾನ ಮಾಡಿದ್ದು, ಇಂದು ಆದೇಶ ಹೊರಡಿಸುತ್ತೇವೆ ಎಂದು ಹೇಳಿದ್ದಾರೆ.

ಮಾಚ್ 21ರಂದು ಬೆಳಗ್ಗೆ 6 ಗಂಟೆಯಿಂದ ಮುಷ್ಕರ ಆರಂಭವಾಗಲಿದೆ ಎಂದು ರಾಜ್ಯ ಸಾರಿಗೆ ನೌಕರರ ಸಂಘದ ಅಧ್ಯಕ್ಷ ಅನಂತ್ ಸುಬ್ಬಾರಾವ್ ತಿಳಿಸಿದ್ದಾರೆ. ಮುಂದಿನ ಮಂಗಳವಾರ ನಮ್ಮ ಮುಷ್ಕರ ನಡೆಯಲಿದೆ. 1 ಲಕ್ಷಕ್ಕೂ ಹೆಚ್ಚು ಸಿಬ್ಬಂದಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದು, ಯಾವುದೇ ಕಾರಣಕ್ಕೂ ಡಿಪೋದಿಂದ ಬಸ್‌ಗಳನ್ನು ತೆಗೆಯಲ್ಲ ಎಂದು ಎಚ್ಚರಿಕೆ ಕೊಟ್ಟ ಬೆನ್ನಲ್ಲೇ ವೇತನ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ.
ಸಾರಿಗೆ ನೌಕರರ ಬೇಡಿಕೆಗಳೇನು?
1. ಮೂಲ ವೇತನಕ್ಕೆ ಬಿ.ಡಿ.ಎ ವಿಲೀನಗೊಳಿಸಿ, ಮೂಲ ವೇತನವನ್ನು ಶೇ.25ರಷ್ಟು ಹೆಚ್ಚಿಸಬೇಕು.
2. ವೇತನ ಹೆಚ್ಚಳವು ಪರಿಷ್ಕೃತ ಮೂಲ ವೇತನದ ಶೇ.3ರಷ್ಟಿರಬೇಕು.
3. ಆಯ್ಕೆ ಶ್ರೇಣಿ ಹಾಗೂ ಉನ್ನತ ಶ್ರೇಣಿಗಳ ವೇತನ ಶ್ರೇಣಿಯನ್ನೂ ಮೇಲಿನಂತೆಯೇ ಸಿದ್ಧಪಡಿಸಬೇಕು. ವೇತನ ಬಡ್ತಿ ದರವು ಪರಿಷ್ಕೃತ ಮೂಲ ವೇತನದ ಶೇ 3ರಷ್ಟಿರಬೇಕು. ಆಯ್ಕೆ ಶ್ರೇಣಿ ಬಡ್ತಿಯನ್ನು ಸೇವಾವಧಿಯ ಪ್ರತಿ 10 ವರ್ಷಕ್ಕೆ ನೀಡಬೇಕು.

4. ಎಲ್ಲನೌಕರರಿಗೂ ಹಾಲಿ ಇರುವ ಬಾಟಾ, ಮಾಸಿಕ, ದೈನಂದಿನ (ಕ್ಯಾಷ್, ರಿಪಾಸ್ಟ್, ಬಟ್ಟೆ ತೊಳೆಯುವ, ರಾತ್ರಿ ಪಾಳಿ, ಪ್ರೋತ್ಸಾಹ ಭತ್ಯೆ) ಭತ್ಯೆಗಳನ್ನು ಐದು ಪಟ್ಟು ಜಾಸ್ತಿ ಮಾಡಬೇಕು.
5. ಹೊಲಿಗೆ ಭತ್ಯೆ, ಶೂ, ಜೆರ್ಸಿ, ರೈನ್ ಕೋಟ್‌ಗೆ ನೀಡುವ ಮೊತ್ತವನ್ನು ಮೂರು ಪಟ್ಟು ಹೆಚ್ಚಿಸಬೇಕು.
6. ಎಲ್ಲ ನಿರ್ವಾಹಕರಿಗೂ ಕ್ಯಾಷಿಯರ್‌ಗಳಿಗೆ ಸಮಾನವಾದ ನಗದು ಪ್ರೋತ್ಸಾಹಧನ ನೀಡಬೇಕು.
7. 2021ರ ಏಪ್ರಿಲ್‌ನಲ್ಲಿ ಮುಷ್ಕರ ನಡೆಸಿದ ಸಂದರ್ಭದಲ್ಲಿ ಸೇವೆಯಿಂದ ವಜಾಗೊಳಿಸಿದ ನೌಕರರನ್ನು ಷರತ್ತಿಲ್ಲದೆ ಮರು ನೇಮಕ ಮಾಡಬೇಕು.
8. ವರ್ಗಾವಣೆ ಶಿಕ್ಷೆಗೆ ಒಳಗಾದ ಸಿಬ್ಬಂದಿ, ನೌಕರರನ್ನು ಮೂಲ ಘಟಕಕ್ಕೆ ಮರು ನಿಯೋಜಿಸಬೇಕು.
9. ಮುಷ್ಕರದ ವೇಳೆ ಎಫ್‌ಐಆರ್ ದಾಖಲಿಸಿರುವ ನೌಕರರನ್ನು ಕೆಲಸಕ್ಕೆ ವಾಪಸ್ ತೆಗೆದುಕೊಳ್ಳಬೇಕು.
10. ಜಂಟಿ ಕ್ರಿಯಾ ಸಮಿತಿಯಿಂದ ಜ. 24ರಂದು ಸಲ್ಲಿಸಿರುವ ಬೇಡಿಕೆಗಳನ್ನು ಆಡಳಿತ ವರ್ಗದವರು ಚರ್ಚಿಸಿ, ವಿಳಂಬವಿಲ್ಲದೇ ಈಡೇರಿಸಬೇಕು.
11. ಕೈಗಾರಿಕಾ ವಿವಾದ ಕಾಯಿದೆ 1947ರ ಅನ್ವಯ ಜಂಟಿ ಕ್ರಿಯಾ ಸಮಿತಿಯ ಜತೆ ಕೈಗಾರಿಕಾ ಒಪ್ಪಂದ ಮಾಡಬೇಕು. ಇದು 2020ರ ಜ. 1 ರಿಂದ 2023ರ ಡಿ. 31ರವರೆಗೆ ಜಾರಿಯಲ್ಲಿರಬೇಕು.












Click it and Unblock the Notifications