KSRTC: ನೌಕರರ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಮೊತ್ತ ₹20 ಲಕ್ಷಕ್ಕೆ ಹೆಚ್ಚಳ
ಬೆಂಗಳೂರು, ಆಗಸ್ಟ್ 19: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ರಾಜ್ಯದಲ್ಲಿ ಉತ್ತಮ ಸಾರಿಗೆ ಸೇವೆ ನೀಡುತ್ತಿದೆ. ಇದಕ್ಕೆ ದಕ್ಷ ಚಾಲಕ, ನಿರ್ವಾಹಕರು ಹಾಗೂ ಸಿಬ್ಬಂದಿ ಕಾರಣವೆಂದು ಹಲವು ಭಾರಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ತಿಳಿಸಿದ್ದಾರೆ. ಇಂತಹ ನೌಕರರಿಗೆ ಅಪಘಾತ ಹೊರತುಪಡಿಸಿ ಇತರೇ ಕಾರಣಗಳಿಂದ ಅವರು ಮರಣ ಹೊಂದಿದಲ್ಲಿ ನೌಕರರ ಕುಟುಂಬ ಕಲ್ಯಾಣ ಯೋಜನೆಯಡಿ ನೀಡುತ್ತಿದ್ದ ಪರಿಹಾರ ಮೊತ್ತ ಹೆಚ್ಚಿಸಲಾಗಿದೆ ಎಂದು ಮಂಗಳವಾರ KSRTC ಅಧಿಕಾರಿಗಳು ಮಂಗಳವಾರ ಅಧಿಕೃತ ಮಾಹಿತಿ ನೀಡಿದ್ದಾರೆ.
ಸಾರಿಗೆ ನೌಕರರು ಅಪಘಾತ ಹೊರತುಪಡಿಸಿ ಇತರ ಕಾರಣಗಳಿಂದ ಮೃತಪಟ್ಟಲ್ಲಿ ಅವರ ಕುಟುಂಬದವರಿಗೆ ನೀಡುತ್ತಿದ್ದ ಪರಿಹಾರ ಮೊತ್ತವನ್ನು ರೂ.10 ಲಕ್ಷಗಳಿಂದ ರೂ. 20 ಲಕ್ಷಗಳಿಗೆ ಹೆಚ್ಚಳ ಮಾಡಲಾಗಿದೆ. ಇನ್ನೂ ನೌಕರರು KSRTC ಯ ಸೇವೆಯಲ್ಲಿರುವಾಗ ಖಾಸಗಿ ಅಥವಾ ಕರ್ತವ್ಯ ನಿರತ ಅಪಘಾತದಲ್ಲಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ ರೂ.1 ಕೋಟಿ ರೂಪಾಯಿ ಅಪಘಾತ ವಿಮಾ ಮೊತ್ತ ವಿತರಿಸುವ ಯೋಜನೆ ಈಗಾಗಲೇ ಜಾರಿಯಲ್ಲಿದೆ.

ಇದೇ ಮೊದಲ ಬಾರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ರವರು ಅಪಘಾತ ಹೊರತುಪಡಿಸಿ ಇತರೆ ಕೆಳಕಂಡ ಪ್ರಕರಣಗಳಲ್ಲಿ ರೂಪಾಯಿ 6 ಲಕ್ಷ ಪರಿಹಾರ ಮೊತ್ತ ನೀಡುತ್ತಿದ್ದಾರೆ.
ನಿಗಮದ ನೌಕರರು ಅಪಘಾತ ಹೊರತುಪಡಿಸಿ ಇತರೇ ಕಾರಣಗಳಿಂದ ಅಂದರೆ ಹೃದಯಾಘಾತ, ಕ್ಯಾನ್ಸರ್, ಕಿಡ್ನಿ ಹಾಗೂ ಇತರೇ ಕಾರಣಗಳಿಂದ ನೌಕರರು ಮರಣ ಹೊಂದಿದಲ್ಲಿ ನೌಕರರ ಕುಟುಂಬ ಕಲ್ಯಾಣ ಯೋಜನೆಯಡಿ ನೀಡುತ್ತಿದ್ದ ಪರಿಹಾರ ಮೊತ್ತವನ್ನು ರೂ.3.00 ಲಕ್ಷಗಳಿಂದ ರೂ. 10.00 ಲಕ್ಷಗಳಿಗೆ ಹೆಚ್ಚಿಸಿ 01.10.2023 ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲಾಗಿತ್ತು.
ಅದರಂತೆ ಇದುವರೆವಿಗೂ 157 ಮೃತ ನೌಕರರ ಅವಲಂಬಿತರಿಗೆ ತಲಾ ರೂ.10 ಲಕ್ಷಗಳ ಪರಿಹಾರ ಮೊತ್ತವನ್ನು ವಿತರಿಸಲಾಗಿದೆ. ಮೃತ ನೌಕರರ ಅವಲಂಬಿತರಿಗೆ ಹೆಚ್ಚಿನ ಮೊತ್ತದ ಪರಿಹಾರ ನೀಡುವ ಮೂಲಕ, ಆರ್ಥಿಕ ಭದ್ರತೆ ಒದಗಿಸಿಕೊಡುವ ಸದುದ್ದೇಶದಿಂದ ದಿನಾಂಕ:01.09.2025 ರಿಂದ ಜಾರಿಗೆ ಬರುವಂತೆ ನಿಗಮದ ವತಿಯಿಂದ ನೀಡಲಾಗುತ್ತಿರುವ ರೂ.10 ಲಕ್ಷಗಳ ಪರಿಹಾರ ಮೊತ್ತವನ್ನು ರೂ. 14 ಲಕ್ಷ ಗಳಿಗೆ ಹೆಚ್ಚಿಸಿ ಹೆಚ್ಚಿಸಿ ಪರಿಷ್ಕರಿಸಲಾಗಿದೆ. ಅಂದರೆ ಈ 14 ಲಕ್ಷ ರೂ. ಜೊತೆಗೆ ಇದರೊಂದಿಗೆ ರೂ.6 ಲಕ್ಷಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಬ್ಯಾಂಕ್ ವತಿಯಿಂದ ಸೇರಿ ಒಟ್ಟು ಮೊತ್ತ 20 ಲಕ್ಷ ರೂಪಾಯಿ ಆಗಲಿದೆ ಎಂದು ಪ್ರಕಟಣೆಯಲ್ಲಿ ಸಾರಿಗೆ ಸಂಸ್ಥೆ ಅಧಿಕಾರಿಗಳು ತಿಳಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications