• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮತ್ತೆ ವಿದ್ಯಾರ್ಥಿ ಬಸ್ ಪಾಸ್ ಅವಧಿ ವಿಸ್ತರಣೆ

|

ಬೆಂಗಳೂರು, ಫೆಬ್ರವರಿ 26: ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಮತ್ತೊಮ್ಮೆ ಒಂದು ತಿಂಗಳವರೆಗೂ ಕೆಎಸ್‌ಆರ್‌ಟಿಸಿ ವಿಸ್ತರಿಸಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ವಿದ್ಯಾರ್ಥಿಗಳು 2019-20ನೇ ಸಾಲಿನ ಪಾಸಿನ ಆಧಾರದಲ್ಲಿ ಉಚಿತವಾಗಿ ಪ್ರಯಾಣಿಸಲು ಫೆಬ್ರವರಿ 28ರವರೆಗೆ ಅನುವು ಮಾಡಿಕೊಡಲಾಗಿತ್ತು. ಇದೀಗ ಶಾಲಾ ಕಾಲೇಜುಗಳು ಪುನರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಈ ಅವಧಿಯನ್ನು ಒಂದು ತಿಂಗಳವರೆಗೂ ವಿಸ್ತರಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ರಾಜ್ಯ ಸಾರಿಗೆ ಸಚಿವರು ಮಾಹಿತಿ ನೀಡಿದ್ದಾರೆ.

ವಿದ್ಯಾರ್ಥಿಗಳು ಫೆ.28ವರೆಗೆ ಹಳೆ ಪಾಸ್ ತೋರಿಸಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸಬಹುದು

ಪಾಸುಗಳನ್ನು ಪಡೆಯಲು ವಿದ್ಯಾರ್ಥಿಗಳಿಗೆ ಮತ್ತಷ್ಟು ಕಾಲಾವಕಾಶ ನೀಡುವ ಸಲುವಾಗಿ ಎಲ್ಲಾ ವರ್ಗದ ಶಾಲಾ ಕಾಲೇಜು ವಿದ್ಯಾರ್ಥಿಗಳು ಕಳೆದ ವರ್ಷದ ಬಸ್ ಪಾಸ್ ನೊಂದಿಗೆ ಪ್ರಸ್ತುತ ಸಾಲಿನಲ್ಲಿ ಶಾಲಾ ಕಾಲೇಜುಗಳಿಗೆ ಶುಲ್ಕ ಪಾವತಿಸಿರುವ ರಸೀತಿ ತೋರಿಸಿ ಮಾರ್ಚ್ 31ರವರೆಗೂ ಸಾರಿಗೆ ನಿಗಮಗಳ ಬಸ್ಸುಗಳಲ್ಲಿ ತೆರಳಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಲಾಗಿದೆ.

English summary
Student bus pass validity extended one month till march 31 said state transport minister Lakshmana savadi,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X