ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೂನ್ 22ರಿಂದ ಕೆಎಸ್ಆರ್‌ಟಿಸಿ ಅಂತರ್‌ ರಾಜ್ಯ ಬಸ್ ಸಂಚಾರ

|
Google Oneindia Kannada News

ಬೆಂಗಳೂರು, ಜೂನ್ 21; ಕರ್ನಾಟಕದಲ್ಲಿ ಕೆಎಸ್ಆರ್‌ಟಿಸಿ ಬಸ್‌ಗಳ ಸಂಚಾರ ಸೋಮವಾರದಿಂದ ಆರಂಭವಾಗಿದೆ. ಅಂತರ ರಾಜ್ಯ ಬಸ್ ಸಂಚಾರವನ್ನು ಜೂನ್ 22ರಿಂದ ಆರಂಭಿಸಲಾಗುತ್ತದೆ ಎಂದು ನಿಗಮದ ಪ್ರಕಟಣೆ ತಿಳಿಸಿದೆ.

ಸೋಮವಾರ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಈ ಕುರಿತು ಮಾಹಿತಿ ನೀಡಿದೆ. ಕೋವಿಡ್ ಲಾಕ್‌ಡೌನ್ ಹಿನ್ನಲೆಯಲ್ಲಿ ಅಂತರ ರಾಜ್ಯ ಬಸ್‌ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.

ಕೆಎಸ್ಆರ್‌ಟಿಸಿ ಮಾಸಿಕ ಬಸ್ ಪಾಸ್; ಮಹತ್ವದ ಘೋಷಣೆ ಕೆಎಸ್ಆರ್‌ಟಿಸಿ ಮಾಸಿಕ ಬಸ್ ಪಾಸ್; ಮಹತ್ವದ ಘೋಷಣೆ

ಪ್ರಸ್ತುತ ಲಾಕ್‌ಡೌನ್ ಸಡಿಲಗೊಂಡಿರುವ ಹಿನ್ನಲೆಯಲ್ಲಿ ದಿನಾಂಕ 22/6/2021ರಿಂದ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಆಯಾ ರಾಜ್ಯಗಳ ಕೋವಿಡ್ ಮಾರ್ಗಸೂಚಿ ಅನ್ವಯ ಬಸ್ ಓಡಿಸಲಾಗುತ್ತದೆ.

 KSRTC Interstate Bus Service From June 22

ಪ್ರಯಾಣಿಕರ ದಟ್ಟಣೆ, ಅವಶ್ಯಕತೆಗೆ ಅನುಗುಣವಾಗಿ ಶೇ 50ರಷ್ಟು ಆಸನ ಸಾಮರ್ಥ್ಯದೊಂದಿಗೆ ಬಸ್ ಸಂಚಾರವನ್ನು ಆರಂಭಿಸಲಾಗುತ್ತದೆ. ಆಂಧ್ರ ಪ್ರದೇಶಕ್ಕೆ ಬೆಳಗ್ಗೆ 6ರಿಂದ ಸಾಯಂಕಾಲ 6 ಗಂಟೆಯೊಳಗೆ ತಲುಪುವಂತೆ ಬಸ್ ಸಂಚಾರ ನಡೆಸಲಿದೆ.

ಸರ್ಕಾರ ಅನುಮತಿ ಕೊಟ್ಟರೂ ಖಾಸಗಿ ಬಸ್ ಸೇವೆ ಆರಂಭವಿಲ್ಲವೇಕೆ? ಸರ್ಕಾರ ಅನುಮತಿ ಕೊಟ್ಟರೂ ಖಾಸಗಿ ಬಸ್ ಸೇವೆ ಆರಂಭವಿಲ್ಲವೇಕೆ?

ಅಂತರ ರಾಜ್ಯ ಬಸ್‌ಗಳಲ್ಲಿ ಪ್ರಯಾಣಿಸುವ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ನಿಗಮದ ಬಸ್‌ಗಳಲ್ಲಿ ಸಂಚಾರ ನಡೆಸುವಾಗ ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ.

ಪ್ರಯಾಣಿಕರು ksrtc.karnataka.gov.in/ www.ksrtc.in ವೆಬ್ ಸೈಟ್‌ಗಳಿಗೆ ಭೇಟಿ ನೀಡುವ ಮೂಲಕ ಮುಂಗಡ ಟಿಕೆಟ್ ಕಾಯ್ದಿರಿಸಬಹುದಾಗಿದೆ.

Recommended Video

ದಿಗ್ಗಜ ಕ್ರಿಕೆಟಿಗ ಶೇನ್ ವಾರ್ನ್ ಗೆ ಸ್ಪಿನ್ ಪಾಠ ಮಾಡಿದ ಫ್ಯಾನ್ | Oneindia Kannada

English summary
Karnataka State Road Transport Corporation (KSRTC) announced that it will resume bus service to Andhra Pradesh and Telangana from June 22, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X