KSRTC: ಕೆಎಸ್ಆರ್‌ಟಿಸಿ ಒಂಟಿ ಪುರುಷ ಉದ್ಯೋಗಿಗಳಿಗೆ 180 ದಿನ-ಶಿಶುಪಾಲನಾ ರಜೆ
ಬೆಂಗಳೂರು ಜನವರಿ 4: ಕೆಎಸ್ಆರ್‌ಟಿಸಿಯಲ್ಲಿ ಕೆಲಸ ಮಾಡುವ ಒಂಟಿ ಪುರುಷ ಉದ್ಯೋಗಿಗಳಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುರುಷ ಉದ್ಯೋಗಿಗಳಿಗೆ 180 ದಿನಗಳ ಶಿಶುಪಾಲನಾ ರಜೆಯನ್ನು ನೀಡುವ ಆದೇಶವನ್ನು ಹೊರಡಿಸಲಾಗಿದೆ. ಆದರೆ ಈ ರಜೆಯನ್ನು ನೀಡಲು ಕೆಲವು ಷರತ್ತುಗಳನ್ನು ಕೂಡ ವಿಧಿಸಲಾಗಿದೆ.
ಹೌದು... ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುರುಷ ನೌಕರರಿಗೂ ಮಹಿಳೆಯರಂತೆ ಶಿಶುಪಾಲನಾ ರಜೆ ಸೌಲಭ್ಯವನ್ನು ಮಂಜೂರು ಮಾಡುವಂತೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಸರ್ಕಾರಿ ಆದೇಶದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಅವರ ಇಡೀ ಸೇವಾವಧಿಯಲ್ಲಿ ಗರಿಷ್ಠ 6 ತಿಂಗಳವರೆಗೆ ಅಂದರೆ 180 ದಿನಗಳ ಶಿಶುಪಾಲನಾ ರಜೆಯನ್ನು ಮಂಜೂರು ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆ. ಅದರಂತೆ ಒಂಟಿ ಪೋಷಕರಾಗಿರುವ ಅವಿವಾಹಿತ/ವಿವಾಹ ವಿಚ್ಚೇದಿತ ವಿಧುರ ಪುರುಷ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುರುಷ ನೌಕರರಿಗೂ ಮಕ್ಕಳ ಆರೈಕೆಗಾಗಿ ಶಿಶುಪಾಲನಾ ರಜೆಯ ಅವಶ್ಯಕತೆ ಇರುತ್ತದೆಂದು ಪರಿಗಣಿಸಲಾಗಿದೆ.

ಹಾಗಂತ ಪುರುಷ ಉದ್ಯೋಗಿಗಳು ಈ ರಜೆಯನ್ನು ದುರುಪಯೋಗಪಡಿಸಿಕೊಳ್ಳುವಂತಿಲ್ಲ. ತಮ್ಮ ವೈಯಕ್ತಿಕ ಕಾರ್ಯಗಳಿಗಾಗಿ ಈ ರಜೆಗಳನ್ನು ಬಳಸಿಕೊಳ್ಳುವಂತಿಲ್ಲ. ಶಿಶುಪಾಲನಾ ರಜೆ ಅವಧಿಯಲ್ಲಿ ಉದ್ಯೋಗಿ ಮದುವೆಯಾದರೆ ರಜೆಯನ್ನು ರದ್ದುಗೊಳಿಸಲಾಗುತ್ತದೆ ಎಂದು ಕೆಎಸ್‌ಆರ್‌ಟಿಸಿ ಷರತ್ತು ವಿಧಿಸಿದೆ.
ಕರ್ನಾಟಕದಲ್ಲಿ ಮಾತ್ರವಲ್ಲದೆ ಭಾರತದ ಕೆಲ ರಾಜ್ಯಗಳಲ್ಲಿ ಇಂಥಹ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಉದಾಹರಣೆಗೆ ಜಮ್ಮು ಮತ್ತು ಕಾಶ್ಮೀರ ಆಡಳಿತ ಒಂಟಿ ಪುರುಷ ಉದ್ಯೋಗಿಗಳಿಗೆ ಶಿಶುಪಾಲನಾ ರಜೆಯನ್ನು ವಿಸ್ತರಿಸಿದೆ. ಮೊದಲ ವರ್ಷಕ್ಕೆ ಪೂರ್ಣ ಸಂಬಳ ಮತ್ತು ಎರಡನೇ ವರ್ಷಕ್ಕೆ 80% ವೇತನದೊಂದಿಗೆ ಎರಡು ವರ್ಷಗಳವರೆಗೆ ರಜೆ ಪಡೆಯಲು ಅವಕಾಶ ನೀಡುತ್ತದೆ. ಅದೇ ರೀತಿ ಹರಿಯಾಣ ಸರ್ಕಾರ ನೌಕರರಿಗೆ ಎರಡು ವರ್ಷಗಳ (730 ದಿನಗಳು) ಶಿಶುಪಾಲನಾ ರಜೆಯನ್ನು ತೆಗೆದುಕೊಳ್ಳಲು ಅನುವು ಮಾಡಿಕೊಡುವ ತಿದ್ದುಪಡಿಗಳನ್ನು ಅನುಮೋದಿಸಿದೆ.
ಆದೇಶದ ವಿವರ:-
ಸರ್ಕಾರಿ ಆದೇಶದಲ್ಲಿ ವಿವರಿಸಿರುವ ಕಾರಣಗಳ ಹಿನ್ನೆಲೆಯಲ್ಲಿ ಸರ್ಕಾರ ಒಂಟಿ ಪೋಷಕರಾಗಿರುವ ಅವಿವಾಹಿತ/ ವಿವಾಹ ವಿಚ್ಛೇದಿತ/ ವಿಧುರ ಪುರುಷ ರಾಜ್ಯ ಸರ್ಕಾರಿ ನೌಕರರಿಗೂ ಅವರ ಇಡೀ ಸೇವಾವಧಿಯಲ್ಲಿ ಗರಿಷ್ಠ 6 ತಿಂಗಳ ಅವಧಿಗೆ ಅಂದರೆ ಒಟ್ಟು 180 ದಿನಗಳಿಗೆ ಮೀರದಂತೆ ಶಿಶುಪಾಲನಾ ರಜೆಯ ಸೌಲಭ್ಯವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮಂಜೂರು ಮಾಡಿದೆ. ರಜೆಯನ್ನು ಮಂಜೂರು ಮಾಡುವ ಸಕ್ಷಮ ಪ್ರಾಧಿಕಾರ ದಿನಾಂಕ 21/06/2021ರ ಸರ್ಕಾರಿ ಆದೇಶ ಸಂಖ್ಯೆ ಆಇ 4(ಇ) ಸೇನಿಸೇ 2021 ರಲ್ಲಿ ವಿಧಿಸಲಾಗಿರುವ ಷರತ್ತುಗಳನ್ನು ಸಂದರ್ಭಾನುಸಾರ ಅನ್ವಯಿಸಿಕೊಂಡು ಶಿಶುಪಾಲನಾ ರಜೆಯನ್ನು ಮಂಜೂರು ಮಾಡತಕ್ಕದ್ದು ಎಂದು ಹೇಳಿದೆ.
ಅದರಂತೆ ಕೆಎಸ್‌ಆರ್‌ಟಿಸಿ ನಿಗಮದಲ್ಲಿ ಒಂಟಿ ಪೋಷಕರಾಗಿರುವ ಅವಿವಾಹಿತ/ವಿವಾಹ-ವಿಚ್ಚೇದಿತ/ವಿಧುರ ಪುರುಷ ನೌಕರರಿಗೆ ಮಕ್ಕಳ ಆರೈಕೆಗಾಗಿ ಅವರ ಇಡೀ ಸೇವಾವಧಿಯಲ್ಲಿ ಗರಿಷ್ಠ ಆರು ತಿಂಗಳ ಅವಧಿಗೆ ಅಂದರೆ 180 ದಿನಗಳಿಗೆ ಮೀರದಂತೆ ಸುತ್ತೋಲೆ ಸಂಖ್ಯೆ:1696. ದಿನಾಂಕ: 18.01.2022ರ ಷರತ್ತು ಮತ್ತು ನಿಬಂಧನೆಗಳನ್ವಯ ಶಿಶುಪಾಲನಾ ರಜೆ ಮಂಜೂರು ಮಾಡಲು ನಿಗಮದ ನಿರ್ದೇಶಕ ಮಂಡಳಿ ಠರಾವು ಸಂಖ್ಯೆ 10453, ದಿನಾಂಕ: 13.11.2024ರನ್ವಯ ಒಪ್ಪಿಗೆ ನೀಡಿದೆ. ಈ ಆದೇಶವನ್ನು ಮನದಲ್ಲಿಟ್ಟುಕೊಂಡು ಅಧಿಕಾರಿಗಳು ಕ್ರಮ ಕೈಗೊಳ್ಳತಕ್ಕದ್ದು ಎಂದು ವ್ಯವಸ್ತಾಪಕ ನಿರ್ದೇಶಕರು ತಿಳಿಸಿದ್ದಾರೆ.
-
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications