ಕೆಎಸ್ಆರ್‌ಟಿಸಿಯಲ್ಲಿ 1463 ಹುದ್ದೆಗಳಿವೆ ಅರ್ಜಿ ಸಲ್ಲಿಸಿ

ಬೆಂಗಳೂರು, ಫೆ. 18 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಗಳೂರು, ಪುತ್ತೂರು ಮತ್ತು ಚಾಮರಾಜನಗರ ವಿಭಾಗಗಳಲ್ಲಿ ಚಾಲಕ ಮತ್ತು ಚಾಲಕ ಕಂ ನಿರ್ವಾಹಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 1463 ಹುದ್ದೆಗಳು ಖಾಲಿ ಇದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 3.

ಚಾಲಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆ ದಿನಾಂಕಕ್ಕೆ 2 ವರ್ಷದ ಅವಧಿ ಪೂರ್ಣಗೊಂಡು ಚಾಲ್ತಿಯಲ್ಲಿರುವ ಸಾಗಾಣಿಕೆ/ಪ್ರಯಾಣಿಕ ಭಾರಿ ವಾಹನ ಚಾಲನಾ ಪರವಾನಗಿ ಮತ್ತು ಕರ್ನಾಟಕ ಬ್ಯಾಡ್ಜ್ ಹೊಂದಿರಬೇಕು. [ಕನ್ನಡದಲ್ಲಿ ನೇಮಕಾತಿ ಆದೇಶ ಓದಿ]

ಅರ್ಹತೆ : ಚಾಲಕ ಕಂ ನಿರ್ವಾಹಕರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆ ದಿನಾಂಕಕ್ಕೆ 2 ವರ್ಷದ ಅವಧಿ ಪೂರ್ಣಗೊಂಡು ಚಾಲ್ತಿಯಲ್ಲಿರುವ ಸಾಗಾಣಿಕೆ/ಪ್ರಯಾಣಿಕ ಭಾರಿ ವಾಹನ ಚಾಲನಾ ಪರವಾನಗಿ ಮತ್ತು ಕರ್ನಾಟಕ ಬ್ಯಾಡ್ಜ್ ಹೊಂದಿರಬೇಕು.

ksrtc

ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 24 ವರ್ಷ. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗಕ್ಕೆ 35, 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38 ವರ್ಷ. ಪ.ಜಾತಿ/ಪ.ಪಂ/ಪ್ರವರ್ಗ 1ರ ಅಭ್ಯರ್ಥಿಗಳಿಗೆ 40 ವರ್ಷಗಳು.

ಮಾಜಿ ಸೈನಿಕ ಅಭ್ಯರ್ಥಿಗಳು ಭಾರತ ಸಶಸ್ತ್ರ ಪಡೆಯಲ್ಲಿ ಸೇವೆ ಸಲ್ಲಿಸಿ ಮಾಜಿ ಸೈನಿಕ ಎಂಬುದಕ್ಕೆ ಅರ್ಹ ಪ್ರಮಾಣ ಪತ್ರವನ್ನು ಹೊಂದಿದ್ದರೆ ಅವರು ಸಲ್ಲಿಸಿದ ಸೇವೆಯ ಜೊತೆಗೆ ಮೂರು ವರ್ಷಗಳ ರಿಯಾಯಿತಿಗೆ ಅರ್ಹರು. ಆದರೆ, ವಯೋಮಿತಿ 45 ವರ್ಷಗಳನ್ನು ಮೀರಬಾರದು.

ಅರ್ಜಿ ಶುಲ್ಕ : ಸಾಮಾನ್ಯ ವರ್ಗ/2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 300 ರೂ., ಪರಿಶಿಷ್ಟ ಜಾತಿ/ಪಂಗಡ/ಪ್ರವರ್ಗ 1/ಮಾಜಿ ಸೈನಿಕ ಅಭ್ಯರ್ಥಿಗಳಿಗೆ 150 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಅರ್ಜಿಯನ್ನು ಸಲ್ಲಿಸಿದ ನಂತರ ವೆಬ್‌ಸೈಟ್‌ನಿಂದ ಚಲನ್ ಡೌನ್‌ಲೋಡ್ ಮಾಡಿಕೊಂಡು ಎಲೆಕ್ಟ್ರಾನಿಕ್ ಅಂಚೆ ಕಚೇರಿಗಳಲ್ಲಿ ಇ-ಪೇಮೆಂಟ್ ಮೂಲಕ ಅರ್ಜಿಯನ್ನು ಪಾವತಿ ಮಾಡಬಹುದು.

ಅರ್ಜಿಯನ್ನು ಕೆಎಸ್ಆರ್‌ಟಿಸಿ ವೆಬ್‌ಸೈಟ್‌ಗೆ ಭೇಟಿ ನೀಡಿ ಭರ್ತಿ ಮಾಡಬೇಕು. ಅರ್ಜಿ ಮತ್ತು ಅರ್ಜಿ ಸಲ್ಲಿಸುವ ಬಗ್ಗೆ ಮಾಹಿತಿ http://ksrtc1.online-ap1.com/ ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಈ ವೆಬ್‌ಸೈಟ್‌ ಮೂಲಕ ಫೆ.16ರಿಂದ ಮಾರ್ಚ್ 3ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಶುಲ್ಕ ಪಾವತಿ ಮಾಡಲು ಮಾರ್ಚ್ 4 ಕೊನೆಯ ದಿನ. ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+