ಫ್ಲೈ ಬಸ್ ಸೇವೆ ಅರಂಭಿಸಲು ಜನರ ಸಲಹೆ ಕೇಳಿದ ಕೆಎಸ್ಆರ್‌ಟಿಸಿ
ಬೆಂಗಳೂರು, ಫೆಬ್ರವರಿ 22 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವಿವಿಧ ನಗರಗಳಿಗೆ ಫ್ಲೈ ಬಸ್ ಸೇವೆಯನ್ನು ವಿಸ್ತರಣೆ ಮಾಡಲು ಮುಂದಾಗಿದೆ. ಈ ಬಗ್ಗೆ ಜನರ ಅಭಿಪ್ರಾಯವನ್ನು ಕೇಳಿದ್ದು, ಈ-ಮೇಲ್ ಮೂಲಕ ಅಭಿಪ್ರಾಯ ತಿಳಿಸಬಹುದಾಗಿದೆ.
ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ ಹಾಗೂ ಆಂಧ್ರಪ್ರದೇಶದ ಅನಂತಪುರ ಮತ್ತು ಕಡಪಕ್ಕೆ ಫ್ಲೈ ಬಸ್ ಸೇವೆಯನ್ನು ಆರಂಭಿಸಿಸಲು ಕೆಎಸ್ಆರ್‌ಟಿಸಿ ಚಿಂತನೆ ನಡೆಸಿದೆ. ಇದಕ್ಕಾಗಿ ಜನರಿಂದ ಅಭಿಪ್ರಾಯವನ್ನು ಸಂಗ್ರಹ ಮಾಡುತ್ತಿದೆ.
ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯದ ಬೇರೆ-ಬೇರೆ ನಗರಗಳಿಂದ ನೇರವಾಗಿ ಸಂಪರ್ಕ ಕಲ್ಪಿಸಲು ಕೆಎಆರ್‌ಟಿಸಿ ಫ್ಲೈ ಬಸ್ ಸೇವೆಯನ್ನು ಆರಂಭಿಸಿದೆ. ಮೊದಲು ಮೈಸೂರಿಗೆ ಬಸ್ ಸೇವೆ ಆರಂಭಿಸಲಾಗಿತ್ತು.

ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನಲೆಯಲ್ಲಿ ಕುಂದಾಪುರ, ಮಣಿಪಾಲ ಮತ್ತು ಮಡಿಕೇರಿಗೂ ಫ್ಲೈ ಬಸ್ ಸೇವೆಯನ್ನು ವಿಸ್ತರಣೆ ಮಾಡಲಾಗಿದೆ. ಈಗ ರಾಜ್ಯದ ಇತರ ನಗರಕ್ಕೂ ಸೇವೆಯನ್ನು ವಿಸ್ತರಣೆ ಮಾಡಲಾಗುತ್ತಿದೆ.
ಕೆಎಸ್‌ಆರ್‌ಟಿಸಿ ತನ್ನ ಪ್ರಯಾಣಿಕರ ಸಲಹೆ/ಸೂಚನೆಗಳಿಗೆ ಮಾನ್ಯತೆ ನೀಡುವುದರಿಂದ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದೆ. ಸದಗಿ ಫ್ಲೈ ಬಸ್ ಸೇವೆಗಳ ನಿರ್ಗಮನ/ಆಗಮನದ ಸಮಯವನ್ನು ನಿಗದಿಪಡಿಸಲು ಸಲಹೆ ಕೇಳಲಾಗಿದೆ.
ಜನರು [email protected] ಅಥವ Facebook/KSRTC.Karnataka ಮೂಲಕ ಅಭಿಪ್ರಾಯ ತಿಳಿಸಬಹುದು ಎಂದು ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.












Click it and Unblock the Notifications