ಬೆಂಗಳೂರು-ಕುಕ್ಕೆ ಸುಬ್ರಮಣ್ಯಕ್ಕೆ ಸ್ಲೀಪರ್ ಬಸ್ ಸೇವೆ

Posted By:
Subscribe to Oneindia Kannada

ಬೆಂಗಳೂರು, ಆಗಸ್ಟ್ 14 : ಭಕ್ತಾದಿಗಳ ಅನುಕೂಲಕ್ಕಾಗಿ ಕೆಎಸ್ಆರ್‌ಟಿಸಿ ಬೆಂಗಳೂರು-ಕುಕ್ಕೆ ಸುಬ್ರಮಣ್ಯ ನಡುವೆ ಕರೋನಾ ಎಸಿ ಸ್ಲೀಪರ್ ಬಸ್ ಸೇವೆಯನ್ನು ಆರಂಭಿಸಲಿದೆ. ಈ ಬಸ್ಸಿನ ಪ್ರಯಾಣ ದರ 650 ರೂ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರು ಕೇಂದ್ರಿಯ ವಿಭಾಗ ಆ.17ರಿಂದ ಬೆಂಗಳೂರು-ಕುಕ್ಕೆ ಸುಬ್ರಮಣ್ಯ ನಡುವೆ ಕರೋನಾ ಎಸಿ ಸ್ಲೀಪರ್ ಬಸ್ ಸೇವೆ ಆರಂಭಿಸಲಿದೆ.[13 ಬಸ್ ನಿಲ್ದಾಣದಲ್ಲಿ ವೈಫೈ ವ್ಯವಸ್ಥೆ]

KSRTC new bus service to Kukke Subramanya from Bengaluru

ಈ ಬಸ್ ಬೆಂಗಳೂರು, ಹಾಸನ, ಸಕಲೇಶಪುರ ಮಾರ್ಗವಾಗಿ ಪ್ರತಿದಿನ ಸಂಚಾರ ನಡೆಸಲಿದೆ. ಈ ಮಾರ್ಗದ ಪ್ರಯಾಣ ದರ 650 ರೂ. ಎಂದು ನಿಗದಿಪಡಿಸಲಾಗಿದೆ. ಬೆಂಗಳೂರಿನಿಂದ ಮತ್ತು ಕುಕ್ಕೆ ಸುಬ್ರಮಣ್ಯದಿಂದ ಪ್ರತಿದಿನ 10.45ಕ್ಕೆ ಬಸ್ ಹೊರಡಲಿದೆ.[ಬಸ್ ಪ್ರಯಾಣ ದರ ಕಡಿಮೆ ಮಾಡೋಲ್ಲ : ರೆಡ್ಡಿ]

ಬೆಂಗಳೂರು-ಕಾಸರಗೋಡು ಬಸ್ ಸೇವೆ : ಕೆಎಸ್ಆರ್‌ಟಿಸಿ ಬೆಂಗಳೂರು-ಕಾಸರಗೋಡು ನಡುವೆ ಸ್ಲೀಪರ್ ಬಸ್ ಸೇವೆಯನ್ನು ಆರಂಭಿಸಿದೆ. ಬೆಂಗಳೂರಿನಿಂದ ರಾತ್ರಿ 9.15ಕ್ಕೆ ಹೊರಡುವ ಬಸ್ ಮರುದಿನ ಬೆಳಗ್ಗೆ 5 ಗಂಟೆಗೆ ಕಾಸರಗೋಡು ತಲುಪಲಿದೆ. ಕಾಸರಗೋಡಿನಿಂದ ರಾತ್ರಿ 10ಕ್ಕೆ ಹೊರಡುವ ಬಸ್ ಮರುದಿನ ಬೆಳಗ್ಗೆ 6 ಗಂಟೆಗೆ ಬೆಂಗಳೂರು ತಲುಪಲಿದೆ.[KSRTC ವೆಬ್ ಸೈಟ್]

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Karnataka State Road Transport Corporation (KSRTC) will introduce new corona sleeper bus service to Kukke Subramanya from Bengaluru from August 17, 2016, fare is Rs 650.
Please Wait while comments are loading...