Get Updates
Get notified of breaking news, exclusive insights, and must-see stories!

'KSRTC: 900 ಹೊಸ ಬಸ್‌ಗಳ ಖರೀದಿ ಶೀಘ್ರ, 2 ಜಿಲ್ಲೆಗಳಿಗೆ ಗುಡ್ ನ್ಯೂಸ್, ಮಂಗಳೂರಿಗೆ 100 ಇವಿ ಬಸ್'

ಉಡುಪಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ (KSRTC) 900 ಹೊಸ ಬಸ್‌ಗಳ ಸೇರ್ಪಡೆ ಹಾಗೂ ಪ್ರಮುಖ ದೇವಸ್ಥಾನ ಕೊಲ್ಲೂರು ಅಭಿವೃದ್ಧಿ ಕುರಿತು ಮುಜರಾಯಿ ಇಲಾಖೆ ಮತ್ತು ಸಾರಿಗೆ ಖಾತೆ ಸಚಿವ ರಾಮಲಿಂಗಾ ರೆಡ್ಡಿ ಅವರು ಮಹತ್ವದ ಮಾಹಿತಿ ನೀಡಿದ್ದಾರೆ. ಹೊಸ ಬಸ್‌ಗಳ ಖರೀದಿಗೆ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಶೀಘ್ರವೇ ಪೂರ್ಣಗೊಳ್ಳಲಿದೆ ಎಂದು ಅವರು ತಿಳಿಸಿದರು.

ಬೈಂದೂರಿನಲ್ಲಿ ಹೊಸದಾಗಿ ಸ್ಥಾಪಿಸಲಾದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣವನ್ನು ಉದ್ಘಾಟಿಸಿದ ಅವರು, ಬಳಿಕ ಸಾರಿಗೆ ಇಲಾಖೆ ಮತ್ತು ಮುಜರಾಯಿ ಇಲಾಖೆಗೆ ಸಂಬಂಧಿಸಿದ ವಿಚಾರಗಳನ್ನು ಹಂಚಿಕೊಂಡರು. ಹೊಸ 900 ಬಸ್‌ಗಳ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ನಂತರ ಆ ಬಸ್‌ಗಳನ್ನು ಹಂಚಿಕೆ ಮಾಡುವಾಗ ರಾಜ್ಯದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು. ಈ ಎರಡು ಜಿಲ್ಲೆಗಳಿಗೆ ಅಧಿಕ ಬಸ್‌ಗಳು ಹಂಚಿಕೆ ಆಗುವ ನಿರೀಕ್ಷೆ ಇದೆ. ಇದರಿಂದ ಜಿಲ್ಲೆಗಳ ಸಾರಿಗೆ ಬಸ್ ಕೊರತೆ, ಪ್ರಯಾಣಿಕರ ಸಮಸ್ಯೆಗಳಿಗೆ ಪರಿಹಾರ ದೊರಕಲಿದೆ.

KSRTC Procure 900 New Buses Soon Udupi and Dakshina Kannada to Get More buses

ರಾಜ್ಯದಲ್ಲಿ ಸಾರ್ವಜನಿಕ ಸಾರಿಗೆ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಈ ಪೈಕಿ ಕರಾವಳಿಯ ಈ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಮಾರ್ಗದಲ್ಲಿ ಪ್ರಯಾಣಿಕರ ಸಂಚಾರ ಹೆಚ್ಚಿದೆ. ಈ ಮಾರ್ಗಗಳಲ್ಲಿ ಬಸ್‌ಗಳಿಗೆ ಅಧಿಕ ಬೇಡಿಕೆ ಇದೆ ಎಂದು ಖುದ್ದು ಸಚಿವರೇ ಮಾಹಿತಿ ನೀಡಿದರು.

ಕರಾವಳಿಗೆ 100 ಎಲೆಕ್ಟ್ರಿಕ್ ಬಸ್‌ ಘೋಷಣೆ

ಕರಾವಳಿ ಭಾಗದಲ್ಲಿ ಸಾರ್ವಜನಿಕ ಸಾರಿಗೆ ಬಲಪಡಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಮಂಗಳೂರು ನಗರಕ್ಕೆ 100 ಎಲೆಕ್ಟ್ರಿಕ್ ಬಸ್‌ಗಳನ್ನು ಮಂಜೂರು ಮಾಡುವುದಾಗಿ ಘೋಷಿಸಿದರು. ಜಿಲ್ಲೆಯ ಬೈಂದೂರು ಮತ್ತು ಕುಂದಾಪುರ ತಾಲ್ಲೂಕುಗಳು ಸ್ಥಳೀಯ ಸಾರಿಗೆ ಅಗತ್ಯಗಳನ್ನು ಗಮನಿಸಿ ಬೇಡಿಕೆ ಪೂರೈಸಲಾಗುವುದು. ಈ ತಾಲೂಕುಗಳು ಹೆಚ್ಚು ಬಸ್‌ಗಳನ್ನು ಪಡೆಯಬಹುದು. ಸದ್ಯ ತಿಂಗಳಲ್ಲಿ ಎಪ್ಪತ್ತು ದೀರ್ಘ-ಮಾರ್ಗದ (ಲಾಂಗ್ ರೂಟ್) ಬಸ್‌ಗಳು ಇಲ್ಲಿ ಲಭ್ಯ ಇವೆ ಎಂದು ತಿಳಿಸಿದರು.

ಕೊಲ್ಲೂರು ಕ್ಷೇತ್ರ ಸಮಗ್ರ ಅಭಿವೃದ್ಧಿ

ಉಡುಪಿ ಜಿಲ್ಲೆಯಲ್ಲಿರುವ ಪ್ರಮುಖ ಧಾರ್ಮಿಕ ಕ್ಷೇತ್ರವಾದ ಕೊಲ್ಲೂರು ಅಭಿವೃದ್ಧಿಗೊಳಿಸುವ ಬಗ್ಗೆ ಸಚಿವರು ಪ್ರಸ್ತಾಪಿಸಿದರು. ದೇವಾಲಯ ಪಟ್ಟಣದ ಸಮಗ್ರ ಮತ್ತು ಯೋಜಿತ ಅಭಿವೃದ್ಧಿಗೆ ಕ್ರಮವಹಿಸಲಾಗುವುದು. ಇಲ್ಲಿ ಶ್ರೀ ಮೂಕಾಂಬಿಕಾ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಬೇಕೆಂಬ ಬೇಡಿಕೆ ಬಹಳ ದಿನದಿಂದಲೂ ಕೇಳಿ ಬರುತ್ತಿದೆ. ಅದು ನಮ್ಮ ಗಮನದಲ್ಲಿದೆ. ಪ್ರಸ್ತುತದಲ್ಲಿ ದೇವಾಲಯ ನಿರ್ವಹಣಾ ಸಮಿತಿಯ ಅವಧಿ ಮುಗಿದ ನಂತರ ಪ್ರಾಧಿಕಾರ ರಚನೆಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಅವರು ಭರವಸೆ ನೀಡಿದರು.

ಹೊಸ ಬಸ್‌ ನಿಲ್ದಾಣಕ್ಕೆ ಮೂಕಾಂಬಿಕೆ ಹೆಸರು

ಕೊಲ್ಲೂರು ದೇವಾಲಯ ನಿರ್ವಹಣಾ ಸಮಿತಿಯು ತನ್ನ ಅವಧಿಯ ಒಂದು ವರ್ಷವನ್ನು ಮಾತ್ರ ಪೂರ್ಣಗೊಳಿಸಿದೆ. ಈ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಸರ್ಕಾರದೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ಹೇಳಿದರು.

ಇನ್ನೂ ಈ ಪ್ರದೇಶವು ಧಾರ್ಮಿಕ ಮತ್ತು ಸಾಂಸ್ಕೃತಿಕವಾಗಿ ಹೆಚ್ಚು ಮಹತ್ವ ಪಡೆದುಕೊಂಡಿದೆ. ಹೀಗಾಗಿ ಜಿಲ್ಲೆಯಲ್ಲಿ ಉದ್ಘಾಟಿಸಲಾದ ಹೊಸ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಶ್ರೀ ಮೂಕಾಂಬಿಕಾ ದೇವಿಯ ಹೆಸರಿಡಬೇಕು ಎಂದು ಸಚಿವರು ಸೂಚಿಸಿದರು. ಬಸ್ ನಿಲ್ದಾಣದ ಮರು ನಾಮಕರಣಕ್ಕೆ ಅಗತ್ಯವಾದ ಆಡಳಿತಾತ್ಮಕ ಪ್ರಕ್ರಿಯೆಗಳನ್ನು ತ್ವರಿತವಾಗಿ ಮುಗಿಸಿಕೊಡಲಾಗುವುದು ಎಂದು ತಿಳಿಸಿದರು.

ಇದೇ ವೇಳೆ ಸ್ಥಳೀಯ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಕ್ಷೇತ್ರದ ಗ್ರಾಮೀಣ ಪ್ರದೇಶಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸೇವೆಗಳ ಕೊರತೆ ಇದೆ. ಸಮಯಕ್ಕೆ ಸರಿಯಾಗಿ ಬಸ್ ಬಾರದ ಜನರಿಗೆ ಸಮಸ್ಯೆ ಉಂಟಾಗುತ್ತಿದೆ. ಇಲ್ಲಿನ ಸುಮಾರು 35 ರಿಂದ 40 ಮಾರ್ಗಗಳಲ್ಲಿ ಬಸ್‌ಗಳ ಕೊರತೆ ಇದ್ದು, ಜನರು ಸಂಕಷ್ಟ ಎದುರಿಸುವಂತಾಗಿದೆ ಎಂಬುದನ್ನು ಸಚಿವರ ಗಮನಕ್ಕೆ ತಂದರು. ತತ್‌ಕ್ಷಣಕ್ಕೆ ಈ ಮಾರ್ಗಗಳಲ್ಲಿ ಬಸ್ ಬಿಟ್ಟರೆ ಅನುಕೂಲವಾಗಲಿದೆ. ಈ ಭಾಗದಲ್ಲಿ ಜನರು ಸಾರ್ವಜನಿಕ ಸಾರಿಗೆಯನ್ನೇ ದೈನಂದಿನ ಸಂಚಾರಕ್ಕೆ ಅವಲಂಬಿಸಿದ್ದರೆ. ಆದ್ದರಿಂದ ಈ ಭಾಗದ ಸಂಚಾರವನ್ನು ಬಲಪಡಿಸುವಂತೆ ಸಚಿವರಲ್ಲಿ ಮನವಿ ಮಾಡಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+