• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ದ್ವಿತೀಯ ಪಿಯುಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿಯಲ್ಲಿ ಪ್ರಯಾಣ ಉಚಿತ

|

ಬೆಂಗಳೂರು, ಫೆಬ್ರವರಿ 22: ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಗಳು ಮಾರ್ಚ್ 1ರಿಂದ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಅವಕಾಶ ಕಲ್ಪಿಸಿದೆ.

ವಿದ್ಯಾರ್ಥಿಗಳು ತಮ್ಮ ಹಾಲ್‌ ಟಿಕೆಟ್ ತೋರಿಸಿ ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ.ವಿದ್ಯಾರ್ಥಿಗಳಿಗೆ ಅವರ ವಿದ್ಯಾ ಸಂಸ್ಥೆಯ ಹೊರತಾಗಿ ಇತರೆ ವಿದ್ಯಾ ಸಂಸ್ಥೆಗಳಲ್ಲಿ ಪರೀಕ್ಷಾ ಕೇಂದ್ರವಿರುದರಿಂದ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ನಿಗಮದ ಬಸ್‌ಗಳನ್ನು ತೆರಳಲು ಅವಕಾಶ ಮಾಡಿಕೊಡಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಮನವಿ ಮಾಡಿದ್ದರು.

ಕರ್ನಾಟಕ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಅದರನ್ವಯ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಎಸ್‌ಆರ್‌ಟಿಸಿ, ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ದಿನಾಂಕಗಳಲ್ಲಿ ಅಂದರೆ ಮಾರ್ಚ್ 1ರಿಂದ ಮಾರ್ಚ್ 18ರವರೆಗೆ ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಮತ್ತು ಪರೀಕ್ಷಾ ಕೇಂದ್ರದಿಂದ ಹಿಂದಿರುಗುವಾಗ ಪರೀಕ್ಷಾ ಪ್ರವೇಶಪತ್ರ ತೀರಿಸಿ ಬಸ್ ಹತ್ತ ಬಹುದಾಗಿದೆ. ನಿಗಮದ ನಗರ, ಹೊರ ವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿಉಚಿತವಾಗಿ ಪ್ರಯಾಣಿಸಬಹುದಾಗಿದೆ.

ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಆ ಮಾರ್ಗದಲ್ಲಿ ಪರೀಕ್ಷಾ ವಿದ್ಯಾರ್ಥಿಗಳಿದ್ದರೆ ವಿದ್ಯಾರ್ಥಿಗಳು ಬಸ್‌ನ್ನು ಹತ್ತಲು, ಇಳಿಯಲು ಅನುಕೂಲವಾಗುವಂತೆ ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

English summary
KSRTC providing free bus facility for 2nd puc students during exam they can just show hall ticket.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X