ಹೈದರಾಬಾದ್‌ಗೆ ಕೆಎಸ್ಆರ್‌ಟಿಸಿ ಬಸ್ ಸಂಚಾರ ಆರಂಭ
ಬೆಂಗಳೂರು, ನವೆಂಬರ್ 03: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಆರ್‌ಟಿಸಿ) ಹೈದರಾಬಾದ್‌ಗೆ ಬಸ್ ಸಂಚಾರವನ್ನು ಆರಂಭಿಸಿದೆ. ಕೋವಿಡ್ ಲಾಕ್ ಡೌನ್ ಘೋಷಣೆಯಾದ ಬಳಿಕ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.
ಕೋವಿಡ್ ಲಾಕ್ ಡೌನ್ ಸಡಿಲಗೊಂಡಿರುವ ಹಿನ್ನಲೆಯಲ್ಲಿ ಅಂತರರಾಜ್ಯ ಬಸ್‌ಗಳ ಸಂಚಾರವನ್ನು ಆರಂಭಿಸಲಾಗಿದೆ. ನವೆಂಬರ್ 3ರ ಮಂಗಳವಾರದಿಂದ ಬೆಂಗಳೂರು ಮತ್ತು ಮೈಸೂರಿನಿಂದ ತೆಲಂಗಾಣ ರಾಜ್ಯದ ಹೈದರಾಬಾದ್‌ಗೆ ಬಸ್ ಸೇವೆ ಆರಂಭಿಸಲಾಗಿದೆ.
ಎರಡೂ ನಗರಗಳಿಂದ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಬಸ್‌ಗಳನ್ನು ಸಂಚಾರ ಮಾಡಲಾಗುತ್ತದೆ. ಬಸ್‌ನಲ್ಲಿ ಸಂಚಾರ ನಡೆಸುವ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಕೆಎಸ್ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಯಾಣಿಕರು ಕೆಎಸ್ಆರ್‌ಟಿಸಿ ವೆಬ್‌ಸೈಟ್ ಮೂಲಕ ಮುಂಗಡ ಟಿಕೆಟ್ ಬುಕ್ ಮಾಡಬಹುದು ಎಂದು ತಿಳಿಸಲಾಗಿದೆ. ಪ್ರಯಾಣಿಕರು ಬಸ್ ಸೇವೆಯ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದು ಕೆಎಸ್ಆರ್‌ಟಿಸಿ ಮನವಿ ಮಾಡಿದೆ.
ಕೋವಿಡ್ ಲಾಕ್ ಡೌನ್ ಘೋಷಣೆ ಬಳಿಕ ಕರ್ನಾಟಕ-ತೆಲಂಗಾಣ ರಾಜ್ಯಗಳ ನಡುವಿನ ಬಸ್ ಸಂಚಾರ ಸ್ಥಗಿತಗೊಂಡಿತ್ತು. ತೆಲಂಗಾಣದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 2,40,970. ಸಕ್ರಿಯ ಪ್ರಕರಣಗಳ ಸಂಖ್ಯೆ 17,700.
ತೆಲಂಗಾಣ ಸರ್ಕಾರದ ನವೆಂಬರ್ 1ರ ಸೋಮವಾರದಿಂದ ಆಂಧ್ರ ಪ್ರದೇಶಕ್ಕೆ ಬಸ್ ಸಂಚಾರವನ್ನು ಆರಂಭಿಸಿದೆ. ಈಗ ಕರ್ನಾಟಕ ಸಹ ಹೈದರಾಬಾದ್‌ಗೆ ಬಸ್ ಸಂಚಾರವನ್ನು ಆರಂಭಿಸಿದ್ದು, ಪ್ರಯಾಣಿಕರಿಗೆ ಅನುಕೂಲವಾಗಲಿದೆ.












Click it and Unblock the Notifications