ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೈದರಾಬಾದ್‌ಗೆ ಕೆಎಸ್ಆರ್‌ಟಿಸಿ ಬಸ್ ಸಂಚಾರ ಆರಂಭ

|
Google Oneindia Kannada News

ಬೆಂಗಳೂರು, ನವೆಂಬರ್ 03: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಆರ್‌ಟಿಸಿ) ಹೈದರಾಬಾದ್‌ಗೆ ಬಸ್ ಸಂಚಾರವನ್ನು ಆರಂಭಿಸಿದೆ. ಕೋವಿಡ್ ಲಾಕ್ ಡೌನ್ ಘೋಷಣೆಯಾದ ಬಳಿಕ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.

ಕೋವಿಡ್ ಲಾಕ್ ಡೌನ್ ಸಡಿಲಗೊಂಡಿರುವ ಹಿನ್ನಲೆಯಲ್ಲಿ ಅಂತರರಾಜ್ಯ ಬಸ್‌ಗಳ ಸಂಚಾರವನ್ನು ಆರಂಭಿಸಲಾಗಿದೆ. ನವೆಂಬರ್ 3ರ ಮಂಗಳವಾರದಿಂದ ಬೆಂಗಳೂರು ಮತ್ತು ಮೈಸೂರಿನಿಂದ ತೆಲಂಗಾಣ ರಾಜ್ಯದ ಹೈದರಾಬಾದ್‌ಗೆ ಬಸ್ ಸೇವೆ ಆರಂಭಿಸಲಾಗಿದೆ.

ಕೆಎಸ್ಆರ್‌ಟಿಸಿ; ಶೇ 10ರಷ್ಟು ಪ್ರಯಾಣ ದರ ಏರಿಕೆ ಇಲ್ಲ ಕೆಎಸ್ಆರ್‌ಟಿಸಿ; ಶೇ 10ರಷ್ಟು ಪ್ರಯಾಣ ದರ ಏರಿಕೆ ಇಲ್ಲ

ಎರಡೂ ನಗರಗಳಿಂದ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಬಸ್‌ಗಳನ್ನು ಸಂಚಾರ ಮಾಡಲಾಗುತ್ತದೆ. ಬಸ್‌ನಲ್ಲಿ ಸಂಚಾರ ನಡೆಸುವ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಕೆಎಸ್ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಫೋಟೋ ಶೂಟ್‌ಗೆ ಕೆಎಸ್ಆರ್‌ಟಿಸಿ ಬಸ್ ಬಾಡಿಗೆಗೆ ಲಭ್ಯ! ಫೋಟೋ ಶೂಟ್‌ಗೆ ಕೆಎಸ್ಆರ್‌ಟಿಸಿ ಬಸ್ ಬಾಡಿಗೆಗೆ ಲಭ್ಯ!

 KSRTC Resume Bus Service To Hyderabad

ಪ್ರಯಾಣಿಕರು ಕೆಎಸ್ಆರ್‌ಟಿಸಿ ವೆಬ್‌ಸೈಟ್ ಮೂಲಕ ಮುಂಗಡ ಟಿಕೆಟ್ ಬುಕ್ ಮಾಡಬಹುದು ಎಂದು ತಿಳಿಸಲಾಗಿದೆ. ಪ್ರಯಾಣಿಕರು ಬಸ್ ಸೇವೆಯ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದು ಕೆಎಸ್ಆರ್‌ಟಿಸಿ ಮನವಿ ಮಾಡಿದೆ.

ಪ್ರಶಾಂತ್ ಆಚಾರ್ ಬಳಿ 10 ಬಸ್‌ಗೆ ಬೇಡಿಕೆ ಇಟ್ಟ ಕೆಎಸ್ಆರ್‌ಟಿಸಿ! ಪ್ರಶಾಂತ್ ಆಚಾರ್ ಬಳಿ 10 ಬಸ್‌ಗೆ ಬೇಡಿಕೆ ಇಟ್ಟ ಕೆಎಸ್ಆರ್‌ಟಿಸಿ!

ಕೋವಿಡ್ ಲಾಕ್ ಡೌನ್ ಘೋಷಣೆ ಬಳಿಕ ಕರ್ನಾಟಕ-ತೆಲಂಗಾಣ ರಾಜ್ಯಗಳ ನಡುವಿನ ಬಸ್ ಸಂಚಾರ ಸ್ಥಗಿತಗೊಂಡಿತ್ತು. ತೆಲಂಗಾಣದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 2,40,970. ಸಕ್ರಿಯ ಪ್ರಕರಣಗಳ ಸಂಖ್ಯೆ 17,700.

Recommended Video

Sira , JDS ಅಭ್ಯರ್ಥಿ ಆಮ್ಮಾಜಮ್ಮ ಅವರು ಮತ ಚಲಾಯಿಸುವ ಮುನ್ನ ಮಾಡಿದ್ದೇನು | Oneindia Kannada

ತೆಲಂಗಾಣ ಸರ್ಕಾರದ ನವೆಂಬರ್ 1ರ ಸೋಮವಾರದಿಂದ ಆಂಧ್ರ ಪ್ರದೇಶಕ್ಕೆ ಬಸ್ ಸಂಚಾರವನ್ನು ಆರಂಭಿಸಿದೆ. ಈಗ ಕರ್ನಾಟಕ ಸಹ ಹೈದರಾಬಾದ್‌ಗೆ ಬಸ್ ಸಂಚಾರವನ್ನು ಆರಂಭಿಸಿದ್ದು, ಪ್ರಯಾಣಿಕರಿಗೆ ಅನುಕೂಲವಾಗಲಿದೆ.

English summary
Karnataka State Road Transport Corporation (KSRTC) resumed bus to Hyderabad from Mysuru and Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X