ತಮಿಳುನಾಡಿಗೆ ಬಸ್ ಸಂಚಾರ; ಕೆಎಸ್ಆರ್‌ಟಿಸಿ ಪ್ರಕಟಣೆ

ಬೆಂಗಳೂರು, ನವೆಂಬರ್ 17 : ಕರ್ನಾಟಕದ ವಿವಿಧ ಸ್ಥಳಗಳಿಂದ ತಮಿಳುನಾಡಿಗೆ ಎಲ್ಲಾ ಮಾದರಿ ಬಸ್ ಸೇವೆಗಳನ್ನು ಮುಂದುವರೆಸಲಾಗುತ್ತದೆ ಎಂದು ಕೆಎಸ್ಆರ್‌ಟಿಸಿ ಹೇಳಿದೆ. ನವೆಂಬರ್ 11 ರಿಂದ 16ರ ತನಕ ಪ್ರಾಯೋಗಿಕವಾಗಿ ಬಸ್ ಸಂಚಾರ ನಡೆಸಲಾಗಿತ್ತು.

ಮಂಗಳವಾರ ಕೆಎಸ್ಆರ್‌ಟಿಸಿ ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದೆ. ತಮಿಳುನಾಡು ರಾಜ್ಯಕ್ಕೆ ಈ ಹಿಂದೆ ಕಾರ್ಯಾಚರಣೆ ನಡೆಸುತ್ತಿದ್ದಂತೆ ರಾಜ್ಯದ ಎಲ್ಲಾ ಸ್ಥಳಗಳಿಂದ ತಮಿಳುನಾಡು ರಾಜ್ಯದ ವಿವಿಧ ಸ್ಥಳಗಳಿಗೆ ಎಲ್ಲಾ ಬಸ್ ಸಂಚಾರ ನಡೆಸಲಿದೆ ಎಂದು ಹೇಳಿದೆ.

ವಿವಿಧ ಸ್ಥಳಗಳಿಗೆ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಎಲ್ಲಾ ಸಾರಿಗೆಗಳನ್ನು 16/11/2020ರ ನಂತರವೂ ಮುಂದುವರೆಸಲಾಗುತ್ತದೆ. ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

KSRTC Resume Services To Tamil Nadu From All Locations

ಬಸ್‌ನಲ್ಲಿ ಸಂಚಾರ ನಡೆಸುವ ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕೆಎಸ್ಆರ್‌ಟಿಸಿ ವೆಬ್ ಸೈಟ್, ನಿಗದಮ ಫ್ರಾಂಚೈಸಿ ಕೌಂಟರ್‌ಗಳ ಮೂಲಕವೂ ಈ ಬಸ್‌ಗಳಿಗೆ ಮುಂಗಡ ಟಿಕೆಟ್ ಕಾಯ್ದಿರಿಸಬಹುದಾಗಿದೆ.

ಕೋವಿಡ್ ಲಾಕ್ ಡೌನ್ ಘೋಷಣೆ ಬಳಿಕ ಅಂತರರಾಜ್ಯ ಬಸ್‌ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ನವೆಂಬರ್ 11ರಿಂದ 16ರ ತನಕ ಹಬ್ಬದ ರಜೆ ಹಿನ್ನಲೆಯಲ್ಲಿ ರಾಜ್ಯದ ಎಲ್ಲಾ ಸ್ಥಳಗಳಿಂದ ತಮಿಳುನಾಡಿಗೆ ವಿಶೇಷ ಬಸ್‌ಗಳನ್ನು ಓಡಿಸಲಾಗಿತ್ತು.

ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ನವೆಂಬರ್ 16ರ ನಂತರವೂ ತಮಿಳುನಾಡಿನ ವಿವಿಧ ಸ್ಥಳಗಳಿಗೆ ಎಲ್ಲಾ ಮಾದರಿ ಬಸ್ ಸೇವೆಯನ್ನು ಮುಂದುವರೆಸಲಾಗುತ್ತದೆ ಎಂದು ಕೆಎಸ್ಆರ್‌ಟಿಸಿ ಹೇಳಿದೆ.

ಕೇಂದ್ರ ಗೃಹ ಇಲಾಖೆ ಅಂತರರಾಜ್ಯಗಳ ನಡುವಿನ ಸಂಚಾರಕ್ಕೆ ಯಾವುದೇ ಪಾಸುಗಳನ್ನು ನೀಡಬಾರದು ಎಂದು ಈಗಾಗಲೇ ಸ್ಪಷ್ಟಪಡಿಸಿದೆ. ವಿವಿಧ ರಾಜ್ಯಗಳು ಸಹ ಕರ್ನಾಟಕಕ್ಕೆ ಅಂತರರಾಜ್ಯ ಬಸ್ ಸೇವೆಯನ್ನು ಆರಂಭಿಸಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+