KSRTC: ಅ.2 ಗಾಂಧಿ ಜಯಂತಿ ಪ್ರಯುಕ್ತ 850 ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ: ಎಲ್ಲಿಂದ ಎಲ್ಲೆಲ್ಲಿಗೆ? ವೇಳಾಪಟ್ಟಿ

ಬೆಂಗಳೂರು: ಮುಂದಿನ ತಿಂಗಳ ಅಕ್ಟೋಬರ್ 2 ಶುಕ್ರವಾರ ಗಾಂಧಿ ಜಯಂತಿ ಆಚರಿಸಲಾಗುತ್ತಿದ್ದು, ಹಾಲಿಡೇ ಇರಲಿದೆ. ಅಲ್ಲದೇ ಅಕ್ಟೋಬರ್ 3 ಮತ್ತು 4 ವಾರಾಂತ್ಯ ದಿನಗಳಾಗಿವೆ. ಈ ವೇಳೆ ಊರಿಗೆ ತೆರಳುವವರ ಸಂಖ್ಯೆ ಹೆಚ್ಚಿರುತ್ತದೆ. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ( KSRTC) ವತಿಯಿಂದ ಹೆಚ್ಚುವರಿ ಬಸ್‌ಗಳನ್ನು ಬಿಡಲಾಗಿದೆ.

ಅಕ್ಟೋಬರ್ 1 ರಿಂದ 2ರಂದು ಬೆಂಗಳೂರಿನಿಂದ ರಾಜ್ಯ, ಹೊರ ರಾಜ್ಯದ ವಿವಿಧ ಸ್ಥಳಗಳಿಗೆ 850 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ನಂತರ ಅ. 4ರಿಂದ ರಾಜ್ಯದ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದು ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.

KSRTC Special Buses 1

ಎಲ್ಲಿಂದ ಎಲ್ಲೆಲ್ಲಿಗೆ ಬಸ್ ಸಂಚಾರ, ಮಾರ್ಗಗಳು?

ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ ಮಾಡಲಿವೆ.

* ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದಲ್ಲಿ ಈ ಹೆಚ್ಚುವರಿ ಬಸ್ ಸೇವೆ ಲಭ್ಯವಾಗಲಿದೆ.

* ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಬಕೋಣಂ, ಚೆನ್ನೆ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಿಂದ ಕಾರ್ಯಾಚರಣೆ ಮಾಡಲಾಗುತ್ತದೆ.

ವಾರಾಂತ್ಯದ ಪ್ರಯಾಣಿಕರಿಗೆ ಅನುಕೂಲ

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.

ನೀವು ಇ-ಟಿಕೇಟ್ ಗಳನ್ನು ಅಧಿಕೃತ ವೆಬ್‌ಸೈಟ್ www.ksrtc.karnataka.gov.in ಗೆ ಭೇಟಿ ನೀಡುವ ಮೂಲಕ ಬುಕ್ ಮಾಡಬಹುದು. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇಕಡ 5ರಷ್ಟು ರಿಯಾಯಿತಿ ನೀಡಲಾಗುವುದು. ಪ್ರಯಾಣದ ಟಿಕೆಟ್‌ನ್ನು ಒಟ್ಟಿಗೆ ಕಾಯ್ದಿರಿಸಿದರೆ ಅಂಥಹವರಿಗೆ ಎರಡು ಬದಿಯ ಟಿಕೆಟ್ ದರದ ಮೇಲೆ ಶೇ. 10ರಷ್ಟು ರಿಯಾಯಿತಿ ಸಿಗಲಿದೆ.

ನೆರೆ ರಾಜ್ಯಗಳಲ್ಲೂ ಟಿಕೆಟ್ ಕೌಂಟರ್

ಕರ್ನಾಟಕ ಹಾಗೂ ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟç ಹಾಗೂ ಪುದುಚೇರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇವೆ. ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.

ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ಸಮಯದ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್ಜಾಲ ವ್ಯವಸ್ಥೆಯಲ್ಲಿ ಹಾಗೂ ಸಾರಿಗೆ ನಿಗಮದ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ.

ಸಾರಿಗೆ ಸಂಸ್ಥೆ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುತ್ತದೆ. ಪ್ರಯಾಣಿಕರು ಈ ಬಸ್‌ಗಳ ಸೇವೆಯ ಲಾಭ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ KSRTC ಕೋರಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+