• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಜನವರಿ 8 ಮತ್ತು 9ರಂದು ಕೆಎಸ್ಆರ್‌ಟಿಸಿ ನೌಕರರ ಮುಷ್ಕರ

|

ಬೆಂಗಳೂರು, ಡಿಸೆಂಬರ್ 19 : ಕೆಎಸ್ಆರ್‌ಟಿಸಿ ನೌಕರರು 2019ರ ಜನವರಿ 8 ಮತ್ತು 9ರಂದು ಮುಷ್ಕರ ನಡೆಸಲಿದ್ದಾರೆ?. ಎರಡು ದಿನಗಳ ಕಾಲ ರಾಷ್ಟ್ರವ್ಯಾಪಿ ಸಾರಿಗೆ ಮುಷ್ಕರ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ.

ಕೆಎಸ್ಆರ್‌ಟಿಸಿ ಸ್ಟಾಫ್ ಅಂಡ್ ವರ್ಕಸ್ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಎಚ್.ವಿ.ಅನಂತ ಸುಬ್ಬರಾವ್ ಅವರು ಈ ಕುರಿತು ಹೇಳಿಕೆ ನೀಡಿದ್ದಾರೆ. 'ಕನಿಷ್ಠ ಕೂಲಿ ನಿಗದಿ ಸೇರಿದಂತೆ ಕಾರ್ಮಿಕರ 18 ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜನವರಿ 8 ಮತ್ತು 9ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಾಗುತ್ತದೆ' ಎಂದು ಹೇಳಿದ್ದಾರೆ.

ಮಂಡ್ಯ : ಕನಗನಮರಡಿಯಲ್ಲಿ ಸರ್ಕಾರಿ ಬಸ್ ಸೇವೆಗೆ ಚಾಲನೆ

ಕೆಎಸ್ಆರ್‌ಟಿಸಿ ಸ್ಟಾಫ್ ಅಂಡ್ ವರ್ಕಸ್ ಫೆಡರೇಷನ್ 6ನೇ ರಾಜ್ಯ ಸಮ್ಮೇಳನದಲ್ಲಿ ಮಾತನಾಡಿದ ಎಚ್.ವಿ.ಅನಂತ ಸುಬ್ಬರಾವ್, 'ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಇದುವರೆಗೆ ರಾಷ್ಟ್ರವ್ಯಾಪಿ ಮೂರು ಮುಷ್ಕರಗಳನ್ನು ನಡೆಸಲಾಗಿದ್ದು, ಇದು ನಾಲ್ಕನೇ ಮುಷ್ಕರವಾಗಿದೆ' ಎಂದರು.

ಬಾಪೂಜಿ ಕೇಂದ್ರದಲ್ಲಿ ಬಸ್, ರೈಲ್ವೇ ಟಿಕೆಟ್ ಬುಕ್ ಮಾಡಿ

'ಜೀವವಿಮೆ, ಬ್ಯಾಂಕ್, ಸಾರ್ವಜನಿಕ ವಯಲದ ಉದ್ದಿಮೆಗಳ ಖಾಸಗೀಕರಣ ಕೈಬಿಡಬೇಕು. ತಿಂಗಳಿಗೆ 18 ಸಾವಿರ ಕನಿಷ್ಠ ಕೂಲಿ ನಿಗದಿಪಡಿಸಬೇಕು. ಕಾರ್ಮಿಕ ವಿರೋಧಿ ನೀತಿಗಳನ್ನು ಕೈ ಬಿಡಬೇಕು ಎಂದು ಒತ್ತಾಯಿಸಿ ಮುಷ್ಕರ ನಡೆಸಲಾಗುತ್ತದೆ' ಎಂದರು.

ಮೈಸೂರು ಭಾಗದ ಕೆಎಸ್ಆರ್‌ಟಿಸಿ ಬಸ್ ಮೆಜೆಸ್ಟಿಕ್‌ಗೆ ಸ್ಥಳಾಂತರ

'ಕೆಎಸ್ಆರ್‌ಟಿಸಿ ನಿಗಮಗಳಲ್ಲಿ ಕೆಲಸ ಮಾಡುತ್ತಿರುವ ಯಾರೊಬ್ಬರು ಆತ್ಮಹತ್ಯೆ ಮಾಡಿಕೊಳ್ಳಬಾರದು. ಕಿರುಕುಳ ನೀಡುವ ಅಧಿಕಾರಿಗಳ ವಿರುದ್ಧ ಹೋರಾಟ ಮಾಡಬೇಕು' ಎಂದು ಕರೆ ನೀಡಿದರು.

ಕೆಎಸ್ಆರ್‌ಟಿಸಿ ಸ್ಟಾಫ್ ಅಂಡ್ ವರ್ಕಸ್ ಫೆಡರೇಷನ್ ಗೌರವ ಅಧ್ಯಕ್ಷ ಡಾ.ಸಿದ್ದನಗೌಡ ಪಾಟೀಲ ಮಾತನಾಡಿ, 'ಮೋದಿ ಸರ್ಕಾರ ಜನಸಾಮಾನ್ಯರ ಹಿತ ಕಾಯದೇ ಕಾರ್ಪೊರೇಟ್ ವಲಯದ ಗುಲಾಮನಂತೆ ವರ್ತಿಸುತ್ತಿದೆ. ರಫೇಲ್ ರಾಜ ಮೋದಿ ಎಲ್ಲವನ್ನು ಖಾಸಗೀಕರಣಗೊಳಿಸುವ ಹುನ್ನಾರ ನಡೆಸಿದ್ದಾರೆ' ಎಂದು ದೂರಿದರು.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
KSRTC Staff and Workers Federation general secretary H.V.Anantha Subbarao said that nationwide bandh will called on January 8 and 9, 2019 to approach government to fulfill various demand.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more