ರಾಜ್ಯಾದ್ಯಂತ 2 ದಿನ ಶಾಲೆ ಕಾಲೇಜುಗಳಿಗೆ ರಜೆ: ಸಿಎಂ

Posted By:
Subscribe to Oneindia Kannada

ಬೆಂಗಳೂರು, ಜುಲೈ 24: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ರಾಜ್ಯಾದ್ಯಂತ 2 ದಿನ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಿ ಭಾನುವಾರ ಆದೇಶ ಹೊರಡಿಸಿದ್ದಾರೆ.

ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನಾಳೆಯಿಂದ ಎರಡು ದಿನ ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಪದವಿ ಪೂರ್ವ, ಇಂಜಿನಿಯರ್ ಕಾಲೇಜುಗಳು ಇದರಲ್ಲಿ ಸೇರಿವೆ.[ಸಾರಿಗೆ ಸಂಸ್ಥೆ ನೌಕರರಿಗೆ ಶೇ 8ರಷ್ಟು ವೇತನ ಹೆಚ್ಚಳ]

ಬೆಂಗಳೂರು ವಿವಿ ಸ್ನಾತಕೋತ್ತರ ಪದವಿ ಎಂಬಿಎ ಪರೀಕ್ಷೆಗಳು ಮುಂದೂಡಿಕೆ ಮಾಡಿ ಆದೇಶ ಹೊರಡಿಸಲಾಗಿದೆ. ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಕುಲ ಸಚಿವ ಡಾ. ಸುರೇಶ್ ನಾಡಗೌಡರ್ ಹೇಳಿದ್ದಾರೆ.

ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜುಲೈ 25ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಸಾರಿಗೆ ಸಂಸ್ಥೆ ಯೂನಿಯನ್ ಗಳು ಸಿದ್ಧವಾಗಿವೆ. ಆದರೆ, ಬೆಂಗಳೂರು, ಮಂಡ್ಯ, ಮಳವಳ್ಳಿ, ಕೆಆರ್ ಪೇಟೆ, ಗದಗ, ರಾಯಚೂರ್, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಭಾನುವಾರದಿಂದಲೇ ಮುಷ್ಕರ ಆರಂಭವಾಗಿದ್ದು, ಕೆಎಸ್ಸಾರ್ಟಿಸಿ, ಬಿಎಂಟಿಸಿ ಬಸ್ ಸಂಚಾರ ಸ್ಥಗಿತಗೊಂಡಿರುವುದರಿಂದ ಪ್ರಯಾಣಿಕರು ಪರದಾಟ ಅನುಭವಿಸಿದ್ದಾರೆ.[ರಸ್ತೆ ಸಾರಿಗೆ ನಿಗಮದ ನೌಕರರ ಮುಷ್ಕರ ಏಕೆ, ಏನು?]

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Siddaramaiah Government has declared two days(Monday and Tuesday) holiday for all schools and colleges across Karnataka in view of Indefinite Strike by KSRTC and BMTC unions on July 25, 2016
Please Wait while comments are loading...