KSRTC New Volvo 9600 Bus: ರಸ್ತೆಗಳಿಯಲಿವೇ 'ಐರಾವತ ಕ್ಲಬ್ ಕ್ಲಾಸ್ 2.0' ಬಸ್‌: ರಾಮಲಿಂಗಾ ರೆಡ್ಡಿ

ಬೆಂಗಳೂರು, ಅಕ್ಟೋಬರ್ 07: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಹೊಸ ಬಸ್ ಖರೀದಿ ಪ್ರಕ್ರಿಯೆ ಮುಂದುವರೆಸಿದೆ. ಜನ ಸಾಮಾನ್ಯರಿಗೆ ಉತ್ತಮ ಅನುಭವ ನೀಡುವ ಉದ್ದೇಶದಿಂದ ಹೊಸ 9600 ವೋಲ್ವೊ ಮಲ್ಟಿಎಕ್ಸೆಲ್ ಮಾದರಿಯ 'ಐರಾವತ ಕ್ಲಬ್ ಕ್ಲಾಸ್ 2.0' ಬಸ್‌ಗಳನ್ನು ಖರೀದಿಸುತ್ತಿದೆ. ಈಗಾಗಲೇ ಒಂದನ್ನು ಪ್ರಾಯೋಗಿಕವಾಗಿ ಪರಿಶೀಲಿಸಿರುವ ಸಾರಿಗೆ ಸಚಿವರು ಇಂದು ಖುದ್ದು ತಯಾರಿಕಾ ಘಟಕ್ಕೆ ಭೇಟಿ ನೀಡಿ ವೀಕ್ಷಿಸಿದ್ದಾರೆ.

ಹೌದು, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಸೋಮವಾರ ಹೊಸಕೋಟೆ ಬಳಿಯಿರುವ ವೋಲ್ವೋ ಬಸ್ ತಯಾರಿಕಾ ಫ್ಯಾಕ್ಟರಿಗೆ ಭೇಟಿ ನೀಡಿದರು. ತಯಾರಾಗುತ್ತಿರುವ ವಿನೂತನ, ವಿಶೇಷತೆಗಳ ಬಸ್ಸನ್ನು ವೀಕ್ಷಿಸಿ, ಅವುಗಳನ್ನು ರಸ್ತೆಗೆ ಇಳಿಸುವ ಬಗ್ಗೆ ಅಪ್ಡೇಟ್ ನೀಡಿದ್ದಾರೆ.

KSRTC to Introduce New 9600 Multi-Axle Volvo Airavata Buses by Month s End Says Ramalinga Reddy

ಐರಾವತ ಕ್ಲಬ್ ಕ್ಲಾಸ್ 2.0 ಮಾದರಿಯ 20 ಬಸ್ಸುಗಳನ್ನು ಸಾರಿಗೆ ಇಲಾಖೆಯು ಇದೇ ಅಕ್ಟೋಬರ್ ತಿಂಗಳ ಕೊನೆಯ ವಾರದಲ್ಲಿ KSRTC ನಿಗಮಕ್ಕೆ ಸೇರ್ಪಡೆ ಮಾಡಿಕೊಳ್ಳಲಿದೆ. ಪ್ರತಿ ಒಂದು ಬಸ್‌ಗೆ 1.78 ಕೋಟಿ ರೂಪಾಯಿ ವ್ಯಯಿಸಲಾಗುತ್ತಿದೆ. ಸದ್ಯ ಸಾರಿಗೆ ನಿಗಮದಲ್ಲಿ ಒಟ್ಟು 443 ಬಸ್ಸುಗಳು ಐಷಾರಾಮಿ ಬಸ್ಸುಗಳಿವೆ. ಇವು ಸಹ ಕೆಲವೇ ದಿನಗಳಲ್ಲಿ ರಸ್ತೆಗೆ ಇಳಿಯಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ನೂತನ ಮಾದರಿ ವೋಲ್ವೊ ಬಸ್ ವಿಶೇಷತೆ, ವಿವರ

* ಶಕ್ತಿಶಾಲಿ ಹ್ಯಾಲೊಜೆನ್ ಹೆಡ್‌ಲೈಟ್‌ಗಳು ಮತ್ತು ಡೇ ರನ್ನಿಂಗ್ ಲೈಟ್‌ಗಳೊಂದಿಗೆ (DRL) ಹೊಸ‌ ಪ್ಲಶ್ ಇಂಟೀರಿಯರ್ಸ್ ಮತ್ತು ಬಾಹ್ಯ ಸ್ಕ್ಯಾಂಡಿನೇವಿಯನ್ ವಿನ್ಯಾಸ ಹೊಂದಿರುವುದರಿಂದ ಕಣ್ ತಣಿಸುವ ಸೌಂದರ್ಯ.

* ಒಟ್ಟಾರೆ ಬಸ್ಸಿನ ಎತ್ತರದಲ್ಲಿ 5.6% ಹೆಚ್ಚಳ ಇರುವುದರಿಂದ ಹೆಚ್ಚಿನ ಹೆಡ್‌ ರೂಂ ಇರುತ್ತದೆ.

* ಏರೋಡೈನಾಮಿಕ್ ವಿನ್ಯಾಸದಿಂದ ಉತ್ತಮ ಇಂಧನ ದಕ್ಷತೆ ಹೊಂದಿರುವ ಬಸ್ ಇದಾಗಿದೆ.

* ಒಟ್ಟಾರೆ ಬಸ್ಸಿನ ಉದ್ದದಲ್ಲಿ 3.5% ಹೆಚ್ಚಳ ಇರುವುದರಿಂದ ಸಲೂನ್‌ನಲ್ಲಿ ಪ್ರಯಾಣಿಕರ ಆಸನಗಳ ನಡುವಿನ ಅಂತರ ಹೆಚ್ಚಾಗಿದೆ.

* ನವೀನ ತಂತ್ರಜ್ಙಾನ/ತಾಂತ್ರಿಕತೆಯಿಂದ ಸುಧಾರಿತ ಇಂಜಿನ್ ಹೊಂದಿದ್ದು ಅತ್ಯುತ್ತಮ ಕಾರ್ಯಕ್ಷಮತೆ ಹಾಗೂ ಸುಧಾರಿತ ಇಂಜಿನ್‌ ಕೆಎಂಪಿಎಲ್ ನೀಡುತ್ತದೆ.

* ವಿಂಡ್‌ಶೀಲ್ಡ್ ಗಾಜು 9.5% ರಷ್ಟು ವಿಸ್ತಾರವಾಗಿದೆ. ಚಾಲಕನಿಗೆ ಗೋಚರತೆ ಹೆಚ್ಚಿಸಿ ಬ್ಲೈಂಡ್ ಸ್ಪಾಟ್ ಅನ್ನು ಕಡಿಮೆ ಮಾಡುತ್ತದೆ.

* ವಿಶಾಲವಾದ ಎಸಿ ಡಕ್ಟ್ ಹೊಂದಿರುವುದರಿಂದ ವಾಹನದ ಒಳಗೆ ಉತ್ತಮ ಹವಾ ನಿಯಂತ್ರಣಾ ವ್ಯವಸ್ಥೆ ಇರುತ್ತದೆ.

* ಈ ಬಸ್‌ನಲ್ಲಿ ವಿಶಾಲ ಲಗೇಜ್ ಸ್ಥಳಾವಕಾಶವಿದೆ. ಹಿಂದಿನ ಬಸ್ ಗಳಿಗೆ ಹೋಲಿಸಿದ್ದಲ್ಲಿ ಶೇಕಡಾ 20% ರಷ್ಟು ಹೆಚ್ಚಿನ ಲಗ್ಗೇಜ್ ಇಡುವ ಸೌಲಭ್ಯ ವಿಸ್ತಾರವಾಗಿದೆ. ಬೃಹತ್ ಲಗೇಜಿನ ಮೊದಲ ಬಸ್ ಇದಾಗಿದೆ.

* USB +C ಟೈಪ್ ನಂತಹ ಹೊಸ ಜನರೇಷನ್ ಮೊಬೈಲ್ ಚಾರ್ಜಿಂಗ್ ಪಾಯಿಂಟ್‌ ಒಳಗೊಂಡಿದೆ.

* ಉನ್ನತ ದರ್ಜೆ/ ವಿನ್ಯಾಸದ ಆಸನಗಳು ಮತ್ತು ಸಾಮಗ್ರಿಗಳ ಬಳಕೆಯಿಂದ ಪ್ರಯಾಣಿಕರಿಗೆ ಪ್ರೀಮಿಯಂ ಅನುಭವ ಮತ್ತು ಸೌಕರ್ಯ ಹೊಂದಿದೆ.

* ವಿಶಾಲವಾದ ಪ್ಯಾಂಟೋಗ್ರಾಫಿಕ್ ವಿನ್ಯಾಸ ಹೊಂದಿರುವುದರಿಂದ ಅದು ವಾಹನದ ನಿರ್ವಹಣೆಯನ್ನು ಸುಲಭವಾಗಿಸಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

* ಸುಲಭವಾಗಿ ಕೈಗೆಟುಕುವ ಚಾಲಕ ನಿಯಂತ್ರಣಗಳು ಮತ್ತು ಸ್ವಿಚ್‌ಗಳನ್ನು ಹೊಂದಿದ್ದು ಚಾಲಕರಿಗೆ ಹೆಚ್ಚು ಅನುಕೂಲಕರವಾಗಿರುತ್ತದೆ.

* ಹಿಂಭಾಗದಲ್ಲಿ fog light ಅನ್ನು ಒಳಗೊಂಡಿರುವುದಿರಂದ ರಾತ್ರಿ ವೇಳೆಯಲ್ಲಿ ಹೆಚ್ಚಿನ ಸುರಕ್ಷತೆ ಹೊಂದಿರಲಿದೆ.

* ಬಸ್ ನಲ್ಲಿ ಫೈರ್ ಅಲಾರ್ಮ್ ಮತ್ತು ಪ್ರೊಟೆಕ್ಷನ್ ವ್ಯವಸ್ಥೆ (FAPS) ಇದೆ. ತುರ್ತು ಸಂದರ್ಭದಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆ ನೀಡಲಿದೆ. ಬಸ್ಸಿನ ಒಳಗೆ ಪ್ರಯಾಣಿಕರ ಆಸನದ ಎರಡೂ ಬದಿಯಲ್ಲಿ ನೀರಿನ ಪೈಪುಗಳಿದ್ದು 30 ನಾಜಲ್ ಗಳಿಂದ ನೀರು ಸರಬರಾಜು ಆಗಿ ಬೆಂಕಿ ಅವಘಡದ ಸಂದರ್ಭದಲ್ಲಿ ನೀರನ್ನು ಸ್ವಯಂಪ್ರೇರಿತವಾಗಿ ಸಿಂಪಡಿಸುತ್ತದೆ.

* ಚಾಲಕರು ಪಾದಚಾರಿಯನ್ನು ಪ್ರಯಾಣಿಕರ ಬಾಗಿಲಿನಿಂದ ಸುಲಭವಾಗಿ ನೋಡಬಹುದಾಗಿದ್ದು ಪಾದಾಚಾರಿಗಳಿಗೆ ಹೆಚ್ಚಿನ ಸುರಕ್ಷತೆ ಇರುತ್ತದೆ..

ಇನ್ನೂ ಇತ್ತೀಚೆಗೆ ವಿಪಕ್ಷ ನಾಯಕರು ಶಕ್ತಿ ಯೋಜನೆಯಿಂದ ರಾಜ್ಯದ ಎಲ್ಲ ಸಾರಿಗೆ ನಿಗಮಗಳು ಆರ್ಥಿಕವಾಗಿ ಸೊರಗುತ್ತಿವೆ. ಸರ್ಕಾರ ಕೋಟಿಕೋಟಿ ಹಣ ನಿಗಮಗಳಿಗೆ ನೀಡದೇ ಬಾಕಿ ಉಳಿಸಿಕೊಂಡಿದೆ ಎಂದೆಲ್ಲ ಜರಿದಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಸಚಿವ ರಾಮಲಿಂಗಾ ರೆಡ್ಡಿಯವರು ನಿಮ್ಮ ಬಿಜೆಪಿಸರ್ಕಾರದಲ್ಲಿ ಸಾಕಷ್ಟು ಸಾಲ ಮಾಡಿದ್ದೀರಿ. ನೌಕರರ ವೇತನ ನೀಡದೇ ಬಾಕಿ ಉಳಿಸಿಕೊಳ್ಳಲಾಗಿತ್ತು. ಅಲ್ಲದೇ ಹೊಸ ಬಸ್ ಖರೀದಿ ಯೋಚನೆ ಸಹ ಮಾಡಿರಲಿಲ್ಲ. ನಮ್ಮ ಸರ್ಕಾರ ಬಂದ ಮೇಲೆ ಸಾಕಷ್ಟು ಬಸ್ ಖರೀದಿಗೆ ಮುಂದಾಗಿದ್ದೇವೆ ಎಂದು ತಿರುಗೇಟು ಕೊಟ್ಟಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+