ಕೆಎಸ್ಆರ್‌ಟಿಸಿಯಿಂದ ಕೋಲಾರ ಪ್ರವಾಸಕ್ಕೆ ವಿಶೇಷ ಪ್ಯಾಕೇಜ್

ಕೋಲಾರ, ಫೆ.5 : ಕೋಲಾರ ಜಿಲ್ಲೆಯ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಲು ಕೆಎಸ್‌ಆರ್‌ಟಿಸಿ ವಿಶೇಷ ಪ್ಯಾಕೇಜ್ ವ್ಯವಸ್ಥೆಯನ್ನು ಆರಂಭಿಸಲಿದೆ. ಶನಿವಾರ ಮತ್ತು ಭಾನುವಾರ ಈ ಪ್ಯಾಕೇಜ್ ಮೂಲಕ ಜನರು ಜಿಲ್ಲೆಗೆ ಭೇಟಿ ನೀಡಬಹುದಾಗಿದೆ. ಮುಂದಿನ ಹಂತದಲ್ಲಿ ಪ್ರತಿ ಜಿಲ್ಲೆಯಲ್ಲೂ ಪ್ಯಾಕೇಜ್ ವ್ಯವಸ್ಥೆ ಮಾಡುವ ಚಿಂತನೆಯೂ ಇದೆ.

ಗುರುವಾರ ಕೋಲಾರಕ್ಕೆ ಭೇಟಿ ನೀಡಿದ್ದ ಕೆಎಸ್ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರಕುಮಾರ್ ಕಠಾರಿಯಾ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಜಿಲ್ಲೆಯ ಪ್ರವಾಸಿ ಕೇಂದ್ರಗಳಿಗೆ ಭೇಟಿ ನೀಡಲು ಈ ಪ್ಯಾಕೇಜ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು. [ಕೋಲಾರ : ಕರ್ನಾಟಕದ ಪೂರ್ವದ ಹೆಬ್ಬಾಗಿಲು]

KSRTC

ಈ ರೀತಿಯ ಪ್ಯಾಕೇಜ್ ವ್ಯವಸ್ಥೆಯನ್ನು ಕೋಲಾರ ಜಿಲ್ಲೆಯಲ್ಲಿ ಮೊದಲು ಪರಿಚಯಿಸುತ್ತಿದ್ದೇವೆ. ಶನಿವಾರ, ಭಾನುವಾರ ಮಾತ್ರ ಜನರಿಗೆ ಲಭ್ಯವಾಗುವಂತೆ ಪ್ಯಾಕೇಜ್ ಸಿದ್ಧಪಡಿಸಲಾಗುತ್ತದೆ ಎಂದರು. ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಕೆಎಸ್‌ಆರ್‌ಟಿಸಿ ಜಂಟಿಯಾಗಿ ಇದನ್ನು ಕಾರ್ಯರೂಪಕ್ಕೆ ತರುತ್ತಿದೆ ಎಂದರು.

ಕೆಎಸ್ಆರ್‌ಟಿಸಿ ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಇಂತಹ ಪ್ಯಾಕೇಜ್ ಸಿದ್ಧಪಡಿಸಲು ಚಿಂತನೆ ನಡೆಸುತ್ತಿದೆ. ಪ್ರಾಯೋಗಿಕವಾದ ಯೋಜನೆ ಯಶಸ್ವಿಯಾದರೆ ಉಳಿದ ಜಿಲ್ಲೆಗಳತ್ತ ಗಮನಹರಿಸಲಾಗುತ್ತದೆ ಎಂದು ತಿಳಿಸಿದರು. [ಪೀಣ್ಯ ನಿಲ್ದಾಣ ಸ್ಥಳಾಂತರ : ಸಚಿವರು ಹೇಳುವುದೇನು?]

ಅಂದಹಾಗೆ ತೇರಹಳ್ಳಿಬೆಟ್ಟ, ಅಂತರಗಂಗೆ, ಕೋಲಾರಮ್ಮ ಮತ್ತು ಸೋಮೇಶ್ವರ ದೇವಾಲಯ, ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಸೇರಿದಂತೆ ವಿವಿಧ ಪ್ರವಾಸಿ ಸ್ಥಳಗಳಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+