KSRTC: SSLC ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ
ಬೆಂಗಳೂರು, ಜುಲೈ 31: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC)ಯು ಗುಡ್ ನ್ಯೂಸ್ ನೀಡಿದೆ. ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಉಚಿತ ಸಾರಿಗೆ ಸೌಲಭ್ಯ ಕಲ್ಪಿಸಿದೆ. ಯಾವಾಗ? ಎಲ್ಲಿಂದ ಎಲ್ಲಿಗೆ? ಎಂಬೆಲ್ಲ ಮಾಹಿತಿ ಇಲ್ಲಿದೆ.
ಪ್ರಸಕ್ತ ಶೈಕ್ಷಣಿಕ 2024-25ನೇ ವರ್ಷದಲ್ಲಿ ರಾಜ್ಯದ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳು ಇದೇ ಆಗಸ್ಟ್ 02ರಿಂದ ಆರಂಭವಾಗಲಿವೆ. ಈ ಕುರಿತಂತೆ ಸಾರಿಗೆ ನಿಗಮವು ಇದ್ಯಾರ್ಥಿಗಳ ವಿದ್ಯಾಸಂಸ್ಥೆಯ ಹೊರತಾಗಿ ಇತರ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆ ಆಗಿರುವ ಹಿನ್ನೆಲೆಯಲ್ಲಿ ಅವರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸಲಾಗಿದೆ.

ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ KSRTC ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸಲು ಕರ್ನಾಟಕ ಶಾಲಾ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷರು ಮನವಿ ಮಾಡಿದ್ದಾರೆ. ಅದರ ಮೇರೆಗೆ ವಿದ್ಯಾರ್ಥಿಗಳಿಗೆ ಉಚಿತ್ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಮಾಹಿತಿ ನೀಡಿದೆ.
ಎಸ್‌ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪೂರಕೆ ಪರೀಕ್ಷೆ ನಡೆಯುವ ದಿನಾಂಕಗಳು ಅಂದರೆ ಆಗಸ್ಟ್ 02 ರಿಂದ ಆಗಸ್ಟ್ 9ರವರೆಗೆ, ಪರೀಕ್ಷೆಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಮತ್ತು ಹಿಂದಿರುಗುವಾಗ SSLC ಈ ಸಾರಿಗೆ ಬಸ್‌ಗಳಲ್ಲಿ ಸಂಚರಿಸಬಹುದಾಗಿದೆ. ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಪ್ರಯಾಣಿಸಲು ಸಹ ಅವಕಾಶ ನೀಡಲಾಗಿದೆ.
ಹಾಲ್‌ಟಿಕೆಟ್ ತೋರಿಸಿ ಪ್ರಯಾಣ ಮಾಡಿ
ಈ ಕುರಿತು ನಿಗಮದ ಎಲ್ಲಾ ಚಾಲಕರು ಮತ್ತು ನಿರ್ವಾಹಕರುಗಳಿಗೆ ಎಸ್ಎಸ್ಎಸ್‌ಎಲ್‌ಸಿ ಪರೀಕ್ಷಾ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿ ನೀಡಬೇಕು ಎಂದು ಸೂಚನೆ ನೀಡಲಾಗಿದೆ.
ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸುಗಳ ಕಾರ್ಯಾಚರಣೆ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದು, ಮಾರ್ಗವನ್ನು ಅನುಕೂಲವಾಗುವಂತೆ ಸದರಿ ಕೋರಿಕೆ ನಿಲುಗಡೆಗೆ ಸಹ ಕ್ರಮ ಕೈಗೊಳ್ಳಲಾಗಿದೆ. ಚಾಲನಾ ಸಿಬ್ಬಂದಿ ಮೇಲ್ಕಂಡ ನಿರ್ದೇಶನಗಳನ್ನು ತಪ್ಪದೇ ಪಾಲಿಸಬೇಕು. ಎಲ್ಲ ಬಸ್‌ಗಳಲ್ಲಿ ಸೂಚನಾ ಫಲಕ ಪ್ರದರ್ಶಿಸುವಂತೆ ಸಾರಿಗೆ ನಿಮಗದ ವ್ಯವಸ್ಥಾಪಕರು ಮಾಹಿತಿ ನೀಡಿದರು.












Click it and Unblock the Notifications