ಯುಗಾದಿ ಹಬ್ಬ, ಕೆಎಸ್ಆರ್‌ಟಿಸಿಯಿಂದ ಹೆಚ್ಚುವರಿ ಬಸ್

By: ಒನ್ ಇಂಡಿಯಾ ಪ್ರತಿನಿಧಿ
Subscribe to Oneindia Kannada

ಬೆಂಗಳೂರು, ಏಪ್ರಿಲ್ 02 : ಯುಗಾದಿ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್‌ಟಿಸಿ) 750 ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿದೆ. ರಾಜಧಾನಿ ಬೆಂಗಳೂರಿನಿಂದ ರಾಜ್ಯದ ಇತರೆ ಜಿಲ್ಲೆಗಳಿಗೆ ಹೆಚ್ಚುವರಿ ಬಸ್ಸುಗಳು ಸಂಚಾರ ನಡೆಸಲಿವೆ.

ಹೆಚ್ಚುವರಿ ಬಸ್ಸಿನಲ್ಲಿ ಪ್ರಯಾಣಿಸುವ ಜನರು ಬೆಂಗಳೂರಿನಲ್ಲಿರುವ 171, ಮೈಸೂರಿನ 17 ಮತ್ತು ಮಂಗಳೂರಿನ 35 ಹಾಗೂ ರಾಜ್ಯದ ಇತರೆಡೆ ಇರುವ 230 ಗಣಕೀಕೃತ ಬುಕ್ಕಿಂಗ್ ಕೌಂಟರ್ ಮೂಲಕ ಮುಂಗಡ ಟಿಕೆಟ್ ಬುಕ್ ಮಾಡಬಹುದು. [ವೆಬ್ ಸೈಟ್‌ ವಿಳಾಸ]

ksrtc

ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಬಿಜಾಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಬೀದರ್ ಕಡೆಗೆ ಸಂಚಾರ ನಡೆಸುವ ಬಸ್ಸುಗಳು ಹೊರಡಲಿವೆ. [2016ರ ಸರ್ಕಾರಿ ರಜೆ ಪಟ್ಟಿ]

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಬಸ್ಸುಗಳು ಸಂಚರಿಸಲಿವೆ. ಮಧುರೈ, ಕುಂಬಕೋಣಂ, ತಿರುಚಿ, ಚೆನ್ನೈ, ಕೊಯಮತ್ತೂರ್ ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಹೋಗುವ ಬಸ್ಸುಗಳು ಶಾಂತಿನಗರ ನಿಲ್ದಾಣದಿಂದ ಹೊರಡಲಿವೆ. [13 ಬಸ್ ನಿಲ್ದಾಣದಲ್ಲಿ ಉಚಿತ ವೈಫೈ ಸೇವೆ]

4ಕ್ಕಿಂತ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದಲ್ಲಿ ಶೇ.5 ರಷ್ಟು ರಿಯಾಯಿತಿ ಜತೆಗೆ ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್ ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇ.10 ರಷ್ಟು ರಿಯಾಯಿತಿ ನೀಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

ಸರಣಿ ರಜೆ

* ಏಪ್ರಿಲ್ 8 ಶುಕ್ರವಾರ ಯುಗಾದಿ
* ಏಪ್ರಿಲ್ 9 ಶನಿವಾರ (2ನೇ ಶನಿವಾರ)
* ಏಪ್ರಿಲ್ 10 ಭಾನುವಾರ

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka State Road Transport Corporation (KSRTC) will operate additional buses from Bengaluru to various destinations in the state for Ugadi festival 2016.
Please Wait while comments are loading...