ದೀಪಾವಳಿ ಹಬ್ಬದ ಪ್ರಯುಕ್ತ ಹೆಚ್ಚುವರಿಯಾಗಿ ಬಸ್‌ ಸಂಚಾರ!

Posted By:
Subscribe to Oneindia Kannada

ಬೆಂಗಳೂರು, ಅಕ್ಟೋಬರ್ 13: ದೀಪಾವಳಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಹೆಚ್ಚುವರಿಯಾಗಿ 1,500 ಬಸ್‌ ಗಳನ್ನು ವಿಶೇಷವಾಗಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಂಚಾರಕ್ಕೆ ಬಿಡುತ್ತಿದೆ.

ಈ ವಿಶೇಷ ಬಸ್ ಸಂಚಾರ ವ್ಯವಸ್ಥೆ ಅಕ್ಟೋಬರ್ 17ರಿಂದ 20 ರವರೆಗೆ ಜಾರಿಯಲ್ಲಿರಲಿದೆ. ಅಗತ್ಯ ಬಿದ್ದರೆ ಇನ್ನಷ್ಟು ದಿನ ವಿಸ್ತರಿಸಲಾಗುವುದು. ರಾಜ್ಯದ ವಿವಿಧ ಜಿಲ್ಲೆಗಳು ಮತ್ತು ಹೊರ ರಾಜ್ಯಗಳಿಗೆ ವಿಶೇಷ ಬಸ್‌ ಗಳು ಬೆಂಗಳೂರಿನಿಂದ ಹೊರಡಲಿವೆ. ವಿಶೇಷ ಬಸ್ ಗಳು ಅಕ್ಟೋಬರ್ 22ರಂದು ಬೆಂಗಳೂರಿಗೆ ವಾಪಸ್ ಬರುವ ವ್ಯವಸ್ಥೆಯಾಗಿದೆ ಎಂದು ಕೆಎಸ್ಸಾರ್ಟಿಸಿ ಪ್ರಕಟಿಸಿದೆ.

KSRTC to run 1,500 extra buses for Deepavali

ಬೆಂಗಳೂರಿನ ಕೆಂಪೇಗೌಡ ಬಸ್‌ ನಿಲ್ದಾಣದಿಂದ ಹಾಸನ, ಶಿವಮೊಗ್ಗ, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ ಹಾಗೂ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಬಸ್‌ ಗಳು ಹೊರಡಲಿವೆ.

ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ವಿಜಯನಗರ, ಜೆ.ಪಿ. ನಗರ, ಜಯನಗರ 4ನೇ ಬ್ಲಾಕ್‌ ಮತ್ತು 9ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್‌, ನವರಂಗ್‌ (ರಾಜಾಜಿನಗರ), ಮಲ್ಲೇಶ್ವರ 18ನೇ ಕ್ರಾಸ್‌, ಕೆಂಗೇರಿ ಉಪನಗರದಿಂದಲೂ ಬಸ್‌ಗಳು ಹೊರಡಲಿವೆ

ಮೈಸೂರು, ಹೊರರಾಜ್ಯದ ಕಡೆಗೆ: ಮೈಸೂರು, ಮಡಿಕೇರಿ ಭಾಗಕ್ಕೆ ತೆರಳುವ ಬಸ್‌ಗಳು ಸ್ಯಾಟ್‌ಲೈಟ್‌ ಬಸ್‌ ನಿಲ್ದಾಣದಿಂದ ಹಾಗೂ ತಮಿಳುನಾಡು ಮತ್ತು ಆಂಧ್ರಪ್ರದೇಶದ ಕಡೆಗೆ ಹೋಗುವ ಬಸ್‌ಗಳು ಶಾಂತಿನಗರದ ಟಿಟಿಎಂಸಿ ನಿಲ್ದಾಣದಿಂದ ಹೊರಡಲಿವೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
KSRTC announced that it would operate 1,500 extra buses in addition to its regular schedule. The extra services, starting from October 17 to October 20 during the Deepavali festival

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ