ದಸರಾ ಪ್ರಯುಕ್ತ ಕೆಎಸ್ಆರ್‌ಟಿಸಿಯಿಂದ 1000 ಹೆಚ್ಚುವರಿ ಬಸ್
ಬೆಂಗಳೂರು, ಅಕ್ಟೋಬರ್ 08; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರು ಕೇಂದ್ರ ಕಚೇರಿ ದಸರಾ ಅಂಗವಾಗಿ 1000 ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿದೆ. ಬೆಂಗಳೂರು ನಗರದಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಈ ಬಸ್‌ಗಳು ಸಂಚಾರ ನಡೆಸಲಿವೆ.
13/10/2021 ರಿಂದ 21/10/2021ರ ತನಕ ಹೆಚ್ಚುವರಿ ಬಸ್‌ಗಳು ಸಂಚಾರ ನಡೆಸಲಿವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮನದ ಪ್ರಕಟಣೆ ತಿಳಿಸಿದೆ. ಕೆಎಸ್ಆರ್‌ಟಿಸಿ ವೆಬ್‌ಸೈಟ್ ಮೂಲಕ ಮುಂಗಡವಾಗಿ ಟಿಕೆಟ್ ಬುಕ್ ಮಾಡಲು ಸಹ ಅವಕಾಶ ನೀಡಲಾಗಿದೆ.
ಹೆಚ್ಚುವರಿ ವಿಶೇಷ ಬಸ್‌ಗಳು ಬೆಂಗಳೂರು ನಗರದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಮೈಸೂರು, ಮಡಿಕೇರಿ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌ಗೆ ಸಂಚಾರ ನಡೆಸಲಿದೆ.

ಅಂತರರಾಜ್ಯದ ತಿರುವತಿ, ಕೊಟ್ಟಾಯಂ, ಚೆನ್ನೈ, ಕೊಯಮತ್ತೂರು, ಪುಣೆ, ಪಣಜಿ ಮುಂತಾದ ಸ್ಥಳಗಳಿಗೆ ಬಸ್‌ಗಳು ಸಂಚಾರ ನಡೆಸಲಿವೆ. ಹೆಚ್ಚುವರಿ ವಿಶೇಷ ಬಸ್‌ಗಳ ದರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಕೆಎಸ್‌ಆರ್‌ಟಿಸಿ ವೆಬ್‌ಸೈಟ್ ಮತ್ತು ಕರ್ನಾಟಕ ಮತ್ತು ಅಂತರರಾಜ್ಯದಲ್ಲಿರುವ ಗಣಕೀಕೃತ ಬುಕಿಂಗ್ ಕೌಂಟರ್‌ಗಳ ಮೂಲಕ ಹೆಚ್ಚುವರಿ ವಿಶೇಷ ಬಸ್‌ಗಳ ಆಸನಗಳನ್ನು ಕಾಯ್ದಿರಿಸಬಹುದು. ಜನರು ವಿಶೇಷ ಸಾರಿಗೆಗಳ ಸೌಲಭ್ಯಗಳನ್ನು ಉಪಯೋಗಿಸಿಕೊಳ್ಳಬಹುದು ಎಂದು ಕರೆ ನೀಡಲಾಗಿದೆ.
ದಸರಾ ಪ್ಯಾಕೇಜ್ ಘೋಷಣೆ; 2021ರ ಮೈಸೂರು ದಸರಾ ಮಹೋತ್ಸವಕ್ಕೆ ಗುರುವಾರ ಚಾಲನೆ ಸಿಕ್ಕಿದೆ. ಪ್ರತಿ ವರ್ಷದಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ದಸರಾ ವಿಶೇಷ ಪ್ಯಾಕೇಜ್ ಟೂರ್ ಘೋಷಣೆ ಮಾಡಿದೆ. ದಸರಾ ಸಂದರ್ಭದಲ್ಲಿ ಸಾವಿರಾರು ಪ್ರವಾಸಿಗರು ಮೈಸೂರಿಗೆ ಭೇಟಿ ನೀಡುತ್ತಾರೆ. ಮೈಸೂರು ಮತ್ತು ಸುತ್ತಮುತ್ತಲ ಪ್ರವಾಸಿ ತಾಣಗಳನ್ನು ನೋಡಲು ಅನುಕೂಲವಾಗುವಂತೆ ಪ್ರವಾಸಿ ಪ್ಯಾಕೇಜ್ ಘೋಷಿಸಲಾಗಿದೆ.
ಮೈಸೂರು ಸುತ್ತಮುತ್ತಲಿನ ಪ್ರೇಕ್ಷಣಿಯ ಸ್ಥಳಗಳನ್ನು ವೀಕ್ಷಿಸಲು ಅಕ್ಟೋಬರ್ 9ರಿಂದ 24ರ ತನಕ ಈ ಪ್ಯಾಕೇಜ್‌ಗಳಲ್ಲಿ ಸಂಚಾರ ನಡೆಸಬಹುದಾಗಿದೆ. ಗಿರಿ ದರ್ಶನಿ, ದೇವ ದರ್ಶಿನಿ, ಜಲದರ್ಶನಿ ಪ್ಯಾಕೇಜ್‌ಗಳ ಮೂಲಕ ಜನರು ಪ್ರವಾಸಿ ತಾಣಗಳನ್ನು ವೀಕ್ಷಿಸಬಹುದು.
ಕಲಬುರಗಿಯಿಂದ ಹೆಚ್ಚುವರಿ ಬಸ್; ವಿಜಯದಶಮಿ ಅಂಗವಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಹೆಚ್ಚುವರಿ ಬಸ್‌ಗಳನ್ನು ಅಕ್ಟೋಬರ್ 12ರಂದು ಬೆಂಗಳೂರಿಗೆ, ಇತರೆ ಪ್ರಮುಖ ಸ್ಥಳಗಳಿಗೆ ಹಾಗೂ ಅಕ್ಟೋಬರ್ 13 ರಂದು ಬೆಂಗಳೂರಿನಿಂದ ಜನರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್‌ಗಳನ್ನು ಓಡಿಸಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.
ಅಕ್ಟೋಬರ್ 20ರಂದು ನಿಗಮದ ವ್ಯಾಪ್ತಿಯಿಂದ ಬೆಂಗಳೂರಿಗೆ ಮತ್ತು ಇತರೆ ಸ್ಥಳಗಳಿಗೆ ಬೇಡಿಕೆಗನುಸಾರ ಹೆಚ್ಚುವರಿ ಬಸ್‌ಗಳನ್ನು ಓಡಿಸಲಾಗುತ್ತಿದೆ. ಕಲಬುರಗಿ, ಬೀದರ್, ಯಾದಗಿರಿ, ಬಳ್ಳಾರಿ, ಕೊಪ್ಪಳ, ವಿಜಯಪುರ, ರಾಯಚೂರು ಜಿಲ್ಲೆಗಳಿಂದ ಬೆಂಗಳೂರಿಗೆ ಹಾಗೂ ಹೈದರಾಬಾದ್, ಶ್ರೀಶೈಲಂ, ಧಾರವಾಡ, ಹುಬ್ಬಳ್ಳಿ, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ, ಹೊಸಪೇಟೆ ಮತ್ತು ಬೆಳಗಾವಿ ಮಾರ್ಗಗಳಲ್ಲಿ ಹೆಚ್ಚುವರಿ ಬಸ್ ಸಂಚಾರ ನಡೆಸಲಿದೆ.
ಪ್ರಯಾಣಿಕರು ಹೆಚ್ಚುವರಿ ಬಸ್‍ಗಳಿಗೆ ಮುಂಗಡವಾಗಿ ಟಿಕೆಟ್ ಕಾಯ್ದಿರಿಸಲು ಕರ್ನಾಟಕ ಹಾಗೂ ಅಂತರ ರಾಜ್ಯದಲ್ಲಿ ಇರುವ 16 ಗಣಕೀಕೃತ ಬುಕ್ಕಿಂಗ್ ಕೌಂಟರ್‌ಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಟಿಕೆಟ್ ಕಾಯ್ದಿರಿಸಿದಲ್ಲಿ ಶೇ 5ರಷ್ಟು ರಿಯಾಯತಿ ಇದೆ. ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್ ಒಟ್ಟಿಗೆ ಕಾಯ್ದಿರಿಸಿದ್ದಲ್ಲಿ ಬರುವ ಪ್ರಯಾಣ ದರದಲ್ಲಿ ಶೇ 10 ರಷ್ಟು ರಿಯಾಯತಿ ಸಿಗಲಿದೆ.
-
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications