ಚುನಾವಣೆ, ರಜೆ : ಕೆಎಸ್‌ಆರ್‌ಟಿಸಿಯಿಂದ ಹೆಚ್ಚುವರಿ ಬಸ್

ಬೆಂಗಳೂರು, ಏಪ್ರಿಲ್ 17 : ಲೋಕಸಭಾ ಚುನಾವಣೆ, ಸಾಲು-ಸಾಲು ರಜೆ ಹಿನ್ನಲೆಯಲ್ಲಿ ಕೆಎಸ್ಆರ್‌ಟಿಸಿ ಹೆಚ್ಚುವರಿ ಬಸ್‌ಗಳನ್ನು ಓಡಿಸಲಿದೆ. 3,300 ಬಸ್‌ಗಳನ್ನು ಚುನಾವಣಾ ಕಾರ್ಯಕ್ಕೆ ಸಂಸ್ಥೆ ನಿಯೋಜನೆ ಮಾಡಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಲೋಕಸಭಾ ಚುನಾವಣೆ ಮತ್ತು ಸಾಲು-ಸಾಲು ರಜೆ ಹಿನ್ನಲೆಯಲ್ಲಿ ಖಾಸಗಿ ಮತ್ತು ಸರ್ಕಾರಿ ಬಸ್ಸುಗಳಿಗೆ ಭಾರಿಬೇಡಿಕೆ ಇದೆ. ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಜನರು ತೆರಳಲಿದ್ದು, ದರಗಳನ್ನು ಹೆಚ್ಚಳ ಮಾಡಲಾಗಿದೆ.

ಕೆಎಸ್‌ಆರ್‌ಟಿಸಿ 3,300 ಬಸ್‌ಗಳನ್ನು ಚುನಾವಣಾ ಸಿಬ್ಬಂದಿಯ ಕಾರ್ಯಕ್ಕೆ ನಿಯೋಜನೆ ಮಾಡಿದೆ. ಜನದಟ್ಟಣೆ ಇಲ್ಲದ ಮಾರ್ಗಗಳಲ್ಲಿ ಸಂಚಾರ ನಡೆಸುವ ಬಸ್‌ಗಳನ್ನು ಜನದಟ್ಟಣೆ ಹೆಚ್ಚಿರುವ ಮಾರ್ಗಗಳಲ್ಲಿ ಓಡಿಸಲಾಗುತ್ತದೆ.

KSRTC to run more buses to clear lok sabha elections rush

ಉತ್ತರ ಕರ್ನಾಟಕ ಭಾಗದಲ್ಲಿ ಏಪ್ರಿಲ್ 23ರಂದು ಚುನಾವಣೆ ನಡೆಯಲಿದೆ. ಆದ್ದರಿಂದ, ಆ ಭಾಗಗಳಲ್ಲಿ ಸಂಚಾರ ನಡೆಸುವ ಬಸ್‌ಗಳನ್ನು ಜನದಟ್ಟಣೆ ಹೆಚ್ಚಿರುವ ಪ್ರದೇಶಗಳಿಗೆ ಬಳಕೆ ಮಾಡಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬೆಂಗಳೂರಿನಿಂದ ರಾಜ್ಯದ ವಿವಿಧ ಭಾಗಗಳಿಗೆ ಪ್ರಯಾಣಿಸುವ ಜನರ ಅನುಕೂಲಕ್ಕಾಗಿ 200 ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗಳನ್ನು ಓಡಿಸಲಾಗುತ್ತದೆ. ಈಶಾನ್ಯ ಮತ್ತು ವಾಯುವ್ಯ ಸಾರಿಗೆ ನಿಗಮಗಳ ಬಸ್‌ಗಳನ್ನು ಬೆಂಗಳೂರಿಗೆ ಕರೆಸಲಾಗಿದೆ.

ಸಾಲು-ಸಾಲು ರಜೆ : ಏಪ್ರಿಲ್ 18ರಂದು 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
* ಏ.19 ರಂದು ಗುಡ್‌ ಫ್ರೈಡೆ
* ಏ.20 ರಂದು ಶನಿವಾರ
* ಏ.21ಭಾನುವಾರ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+