ಗೌರಿ-ಗಣೇಶ ಹಬ್ಬಕ್ಕೆ ಹೆಚ್ಚುವರಿ ಬಸ್ ಓಡಾಟ
ಬೆಂಗಳೂರು, ಆ. 26: ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಆ.27 ರಿಂದ ಆ.29ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳಿಗೆ ಹೆಚ್ಚುವರಿಯಾಗಿ ವಿಶೇಷ ಬಸ್ಸುಗಳ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪ್ರಕಟಿಸಿದೆ.
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರ ನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಬಿಜಾಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಗುಲ್ಬರ್ಗ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿಗೆ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.
ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ರಾಜಪೇಟೆ, ಕುಶಾಲನಗರ, ಮಡಿಕೇರಿ ಹಾಗೂ ಮಧುರೈ, ಕುಂಬ ಕೋಣಂ, ತಿರುಚಿ, ಚೆನೈ, ಕೊಯಮತ್ತೂರ್ ತಿರುಪತಿ, ವಿಜಯವಾಡ, ಹೈದರಾಬಾದ್‌ಗೆ ಶಾಂತಿ ನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಿವೆ.

ಜಯನಗರ, ಜೆ.ಪಿ.ನಗರ, ಜಯನಗರ 4ನೇ ಬ್ಲಾಕ್ ಮತ್ತು 9ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್, ಮಲ್ಲೇಶ್ವರಂ 18ನೇ ಅಡ್ಡರಸ್ತೆ, ಕೆಂಗೇರಿಯ ಉಪನಗರ ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಕೋರಿಗೆ ಹಾಗೂ ಅನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆಸುಬ್ರಮಣ್ಯ ಮತ್ತು ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. [ಬಿಎಂಟಿಸಿ ಡ್ರೈವರ್ ಮಗ ರಾಕಿಂಗ್ ಸ್ಟಾರ್ ಯಶೋಗಾಥೆ]
ಕಂಪ್ಯೂಟರ್ ಬುಕ್ಕಿಂಗ್ : ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇ.5 ರಷ್ಟು ರಿಯಾಯಿತಿ ಹಾಗೂ ಹೋಗುವ ಬರುವ ಪ್ರಯಾಣದ ಟಿಕೆಟ್ ಅನ್ನು ಒಟ್ಟಿಗೆ ಕಾಯ್ದಿರಿಸಿದರೆ ಬರುವ ಪ್ರಯಾಣ ದರದಲ್ಲಿ ಶೇ.10 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಕೆಎಸ್ಸಾರ್ಟಿಸಿ ಸಂಸ್ಥೆ ತಿಳಿಸಿದೆ.
ಇ-ಟಿಕೆಟ್ ಬುಕ್ಕಿಂಗ್‌ನ್ನು ವೆಬ್‌ಸೈಟ್ ಮೂಲಕ ಮಾಡಬಹುದು. ಪ್ರಯಾಣಿಕರು ಬೆಂಗಳೂರು ನಗರದ 173, ಮೈಸೂರಿನ 14 ಹಾಗೂ ಮಂಗಳೂರು-54, ರಾಜ್ಯದ 230 ಗಣಕೀಕೃತ ಬುಕ್ಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.












Click it and Unblock the Notifications