Breaking; ಗದಗಕ್ಕೆ 'ಐರಾವತ' ಬಸ್ ಸೇವೆ, ಬಿ. ಶ್ರೀರಾಮುಲು ಘೋಷಣೆ

ಬೆಂಗಳೂರು, ಜನವರಿ 05; ಮಾಜಿ ಕ್ರಿಕೆಟಿಗನ ಬೇಡಿಕೆಗೆ ಸಾರಿಗೆ ಸಚಿವ ಬಿ. ಶ್ರೀರಾಮುಲು ಸ್ಪಂದಿಸಿದ್ದಾರೆ. ಜನವರಿ 9ರಿಂದಲೇ ಬೆಂಗಳೂರಿನಿಂದ ವೊಲ್ವೋ ಬಸ್ ಸೇವೆ ಆರಂಭಿಸುವುದಾಗಿ ಘೋಷಣೆ ಮಾಡಿದ್ದಾರೆ.

ಗುರುವಾರ ಸಾರಿಗೆ ಸಚಿವ ಬಿ. ಶ್ರೀರಾಮುಲು ಈ ಕುರಿತು ಟ್ವೀಟ್ ಮಾಡಿದ್ದಾರೆ. ಬೆಂಗಳೂರು ನಗರದಿಂದ ಗದಗಕ್ಕೆ ವೊಲ್ವೋ ಬಸ್ ಸೇವೆ ಆರಂಭ ಮಾಡುವುದಾಗಿ ಹೇಳಿದ್ದಾರೆ.

ಮಾಜಿ ಕ್ರಿಕೆಟಿಗ ಸುನಿಲ್ ಜೋಶಿ ಕರ್ನಾಟಕದ ಮುಖ್ಯಮಂತ್ರಿಗಳ ಖಾತೆ, ಬಸವರಾಜ ಬೊಮ್ಮಾಯಿ ವೈಯಕ್ತಿಕ ಖಾತೆಯನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದರು.

KSRTC to start Volvo bus services to Gadag from January 9 announces Minister B Sriramulu

ನನ್ನ ವಿನಯ ಪೂರ್ವಕ ಮನವಿ ಬೆಂಗಳೂರಿನಿಂದ ಗದಗಕ್ಕೆ ವೊಲ್ವೋ ಬಸ್ ಸೇವೆ ಆರಂಭವಾಗಬೇಕು. ಇದಕ್ಕಾಗಿ ನಾವು 25 ವರ್ಷಗಳಿಂದ ಕಾಯುತ್ತಿದ್ದೇವೆ. ಇದು 'ಐರಾವತ' ಬಸ್ ಗದಗಕ್ಕೆ ಬರುವ ಸಮಯ ಎಂದು ಹೇಳಿದ್ದರು.

ಈ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿರುವ ಬಿ. ಶ್ರೀರಾಮುಲು ನಾವು ಜನರ ಸೇವೆಗಾಗಿಯೇ ಇದ್ದೇವೆ. ಜನವರಿ 9ರ ಸೋಮವಾರದಿಂದಲೇ ಕೆಎಸ್‌ಆರ್‌ಟಿಸಿ ಗದಗಕ್ಕೆ ವೊಲ್ವೋ ಬಸ್ ಸೇವೆ ಆರಂಭಿಸಲಿದೆ ಎಂದು ತಿಳಿಸಿದ್ದಾರೆ.

ಪುಟ್ಟರಾಜ ಗವಾಯಿಗಳ ಪುಣ್ಯಭೂಮಿ, ನನ್ನ ಹೃದಯಕ್ಕೆ ಹತ್ತಿರವಾದ ಜನರಿಗಾಗಿ ಬಸ್ ಸೇವೆ ಆರಂಭಿಸಲಾಗುತ್ತದೆ ಎಂದು ಟ್ವೀಟ್‌ನಲ್ಲಿ ಸಾರಿಗೆ ಸಚಿವರು ಮಾಹಿತಿ ನೀಡಿದ್ದಾರೆ.

ಬಿ. ಶ್ರೀರಾಮುಲು ಹಿಂದೆ ಗದಗ ಜಿಲ್ಲಾ ಉಸ್ತುವಾರಿಯಾಗಿದ್ದರು. ಜಿಲ್ಲೆಯ ಮೇಲೆ ಅವರಿಗೆ ಅಪಾರವಾದ ಪ್ರೀತಿ ಇದೆ. ಕೆಲವು ದಿನಗಳ ಹಿಂದೆ ಗದಗದಲ್ಲಿ ವಾಯುವಿಹಾರ ಮಾಡುವಾಗ ಅಭಿಮಾನಿ ಕೋರಿಕೆಯಂತೆ ಆಟೋ ಓಡಿಸಿ ಗಮನ ಸೆಳೆದಿದ್ದರು.

ಈ ಕುರಿತು ಫೇಸ್‌ಬುಕ್ ಪೋಸ್ಟ್ ಹಾಕಿದ್ದ ಅವರು, "ಗದಗದಲ್ಲಿ ಬೆಳಗ್ಗೆ ವಾಯುವಿಹಾರಕ್ಕೆ ಹೊರಟ ವೇಳೆ ಆಕಸ್ಮಿಕವಾಗಿ ದಾರಿಮಧ್ಯೆ ಸಿಕ್ಕ ಅಭಿಮಾನಿಗಳು ಹಾಗೂ ಹಿತೈಷಿಗಳ ಉಭಯ ಕುಶಲೋಪಚಾರಿ ವಿಚಾರಿಸಲಾಯಿತು‌. ಇದೇ ವೇಳೆ ಅಭಿಮಾನಿಯೊಬ್ಬರ ಕೋರಿಕೆಯಂತೆ ಅವರ ಆಟೋವನ್ನು ಓಡಿಸಿ ಶುಭ ಕೋರಲಾಯಿತು" ಎಂದು ಹೇಳಿದ್ದರು.

"ಗದಗ ಜಿಲ್ಲೆಗೂ ನನಗೂ ಬಿಡಿಸಲಾಗದ ಅವಿನಾಭಾವ ಸಂಬಂಧವಿದೆ. ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದ ವೇಳೆ ಇಲ್ಲಿನ ಜನತೆ ತೋರಿದ ಅಭಿಮಾನಕ್ಕೆ ನಾನು ಸದಾ ಕೃತಜ್ಞನಾಗಿದ್ದೇನೆ" ಎಂದು ತಿಳಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+