ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಎಸ್‌ಆರ್‌ಟಿಸಿ ವೋಲ್ವೊ ಬಸ್‌ಗಳಲ್ಲಿ ಇನ್ಮುಂದೆ ನೀರು ಕೊಡಲ್ಲ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 3: ಇನ್ನುಮುಂದೆ ಕೆಎಸ್‌ಆರ್‌ಟಿಸಿ ವೋಲ್ವೊ ಬಸ್‌ಗಳಲ್ಲಿ ನೀರು ಕೊಡುವುದಿಲ್ಲ.

ಹವಾನಿಯಂತ್ರಿತ ಬಸ್‌ಗಳಲ್ಲಿ ನೀಡುತ್ತಿದ್ದ ಪ್ಲಾಸ್ಟಿಕ್ ಬಾಟಲಿ ನೀರಿನ ಸೌಲಭ್ಯವನ್ನು ಗುರುವಾರದಿಂದ ಜಾರಿಗೆ ಬರುವಂತೆ ರದ್ದುಪಡಿಸಿದೆ.

ದಸರಾ 2019; ಕೆಎಸ್ಆರ್‌ಟಿಸಿಯಿಂದ 2500 ವಿಶೇಷ ಬಸ್ದಸರಾ 2019; ಕೆಎಸ್ಆರ್‌ಟಿಸಿಯಿಂದ 2500 ವಿಶೇಷ ಬಸ್

ಕೆಎಸ್‌ಆರ್‌ಟಿಸಿಯ 300 ಸೇರಿದಂತೆ ಮೂರು ಸಾರಿಗೆ ನಿಗಮಗಳ 450 ಐಷಾರಾಮಿ ಬಸ್‌ಗಳಲ್ಲಿ ಪ್ರತಿ ವರ್ಷ ಪ್ರಯಾಣಿಕರಿಗೆ 1.20 ಕೋಟಿ ಪ್ಲಾಸ್ಟಿಕ್ ಬಾಟಲಿ ನೀರು ವಿತರಿಸಲಾಗುತ್ತಿತ್ತು. ಬಳಿಕ ಈ ಬಾಟಲಿಗಳು ಮಣ್ಣಿಗೆ ಸೇರುತ್ತಿತ್ತು. ಹಾಗಾಗಿ ಪ್ಲಾಸ್ಟಿಕ್ ಬಾಟಲಿ ನೀಡದಂತೆ ಕ್ರಮ ಕೈಗೊಳ್ಳಲಾಗಿದೆ.

KSRTC To Stop Free Water Bottles In Volvo Buses

ಈ ಹಿನ್ನೆಲೆಯಲ್ಲಿ ಇನ್ನುಮುಂದೆ ಈ ಬಸ್‌ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ತಾವೇ ಕುಡಿಯುವ ನೀರಿನ ಬಾಟಲಿ ತರಬೇಕು, ಈ ಸಂಬಂಧ ಟಿಕೆಟ್‌ಗಳಲ್ಲೂ ಮುದ್ರಿಸಲಾಗುತ್ತಿದೆ.

ಕೆಎಸ್‌ಆರ್‌ಟಿಸಿಯ ಫೇಸ್‌ಬುಕ್ ಹಾಗೂ ಟ್ವಿಟ್ಟರ್ ಖಾತೆಯಲ್ಲಿ ಸೆಲ್ಫಿ ವಿತ್ ಮೈ ಓನ್ ಬಾಟಲ್' ಹೆಸರಿನಲ್ಲಿ ಸ್ಪರ್ಧೆ ಆಯೋಜಿಸಲು ತೀರ್ಮಾನಿಸಲಾಗಿದೆ. ನಿಗಮದ ಹವಾನಿಯಂತ್ರಿತ ಬಸ್‌ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ತಮ್ಮ ನೀರಿನ ಬಾಟಲಿ ಜೊತೆಗೆ ಸೆಲ್ಫಿ ತೆಗೆದು ಪೋಸ್ಟ್‌ ಮಾಡಬೇಕು.

ಮಕ್ಕಳು, ಮಧ್ಯಮ ವಯಸ್ಕರು ಹಾಗೂ ಹಿರಿಯ ನಾಗರಿಕರು ಈ ಮೂರು ವರ್ಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಪ್ರತಿ ವರ್ಗಗಳಲ್ಲಿ ಆಯ್ಕೆಯಾದ ಉತ್ತಮ ಸೆಲ್ಫಿಗೆ ನಿಗಮದ ಬಸ್‌ನ ಒಂದು ಮಾರ್ಗದಲ್ಲಿ ಉಚಿತ ಪ್ರಯಾಣ ಅವಕಾಶ ಕಲ್ಪಿಸಿಕೊಡಲಾಗುತ್ತದೆ.

ಮೆಜೆಸ್ಟಿಕ್‌ ನಿಲ್ದಾಣದಲ್ಲಿ ಪ್ರಾಯೋಗಿಕವಾಗಿ ಸ್ಯಾನಿಟರಿ ನ್ಯಾಪ್‌ಕಿನ್ ಇನ್ಸಿನೇಟರ್ ಮತ್ತು ನ್ಯಾಪ್‌ಕಿನ್ ವೆಂಡಿಂಗ್ ಮೆಷಿನ್ ಅಳವಡಿಸಲಾಗಿದೆ. ಡಿಪೋಗಳಲ್ಲಿ ಹಾಗೂ ಬಸ್‌ಗಳಲ್ಲಿ ಸ್ವಚ್ಛತೆ ಕಾಪಾಡುವ ಸಿಬ್ಬಂದಿಗೆ ಸ್ವಚ್ಛತಾ ಪ್ರಶಸ್ತಿ ನೀಡಲಾಗುತ್ತದೆ.

English summary
KSRTC To Stop Free Water Bottles In Volvo Buses, has decided to stop providing plastic water bottles in premium AC services on long-distance routes from Thursday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X