ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

KSRTC ಹೆಸರು ಕೈ ತಪ್ಪುವ ಆತಂಕ ಬೇಡ; ಕಾನೂನು ಹೋರಾಟ ಮುಗಿದಿಲ್ಲ

|
Google Oneindia Kannada News

ಬೆಂಗಳೂರು, ಜೂನ್ 04; ಕೆ. ಎಸ್. ಆರ್. ಟಿ. ಸಿ. ಎಂಬ ಹೆಸರು ಕರ್ನಾಟಕದಿಂದ ಕೈತಪ್ಪಿದೆ ಎಂದು ಆತಂಕ ಪಡಬೇಕಾಗಿಲ್ಲ. ಕೇರಳ ಸರ್ಕಾರವು ಈ ಬಗ್ಗೆ ಏನೇ ಹೇಳಿಕೆ ನೀಡಿದರೂ ನಮ್ಮ ಕರ್ನಾಟಕ ಸರ್ಕಾರವು ಈ ಬಗ್ಗೆ ಸೂಕ್ತ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳುವ ಮೂಲಕ ರಾಜ್ಯದ ಹಿತಾಸಕ್ತಿಯನ್ನು ಕಾಪಾಡಿಕೊಳ್ಳುತ್ತದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ.

Recommended Video

KSRTC ಹೆಸರು ಕರ್ನಾಟಕದಿಂದ ಕೈತಪ್ಪಿದೆ ಎಂಬ ಆತಂಕ ಬೇಡ-ತೀರ್ಪು ನೀಡಿದ ಸಂಸ್ಥೆಯೇ ಇಲ್ಲ; ಡಿಸಿಎಂ ಸವದಿ | Oneindia Kannada

ಶುಕ್ರವಾರ ಫೇಸ್‌ಬುಕ್ ಪೋಸ್ಟ್ ಮೂಲಕ ಸಚಿವರು ಈ ಕುರಿತು ಹೇಳಿಕೆಯನ್ನು ನೀಡಿದ್ದಾರೆ. ಕೆ. ಎಸ್. ಆರ್. ಟಿ. ಸಿ. ಎಂಬ ಹೆಸರನ್ನು ಮುಂದೆಯೂ ಕರ್ನಾಟಕವು ಬಳಸಲು ಸ್ವತಂತ್ರವಾಗಿದೆ. ಈ ಬಗ್ಗೆ ಕೇರಳ ಸರ್ಕಾರದ ಅನುಮತಿ ನಮಗೆ ಬೇಕಾಗಿಲ್ಲ. ಅಗತ್ಯವಿದ್ದರೆ ನ್ಯಾಯಾಲಯಲ್ಲಿ ಕಾನೂನಾತ್ಮಕ ಹೋರಾಟಗಳನ್ನು ನಡೆಸಲು ನಾವು ಹಿಂದೆ ಬೀಳುವುದಿಲ್ಲ ಎಂದು ಹೇಳಿದ್ದಾರೆ.

ಕೇರಳ ರಾಜ್ಯದ ಪಾಲಾದ KSRTC ಟ್ರೇಡ್‌ ಮಾರ್ಕ್‌! ಕೇರಳ ರಾಜ್ಯದ ಪಾಲಾದ KSRTC ಟ್ರೇಡ್‌ ಮಾರ್ಕ್‌!

ರಾಜ್ಯ ರಸ್ತೆ ಸಾರಿಗೆ ನಿಗಮವು ಇನ್ನು ಮುಂದೆ 'ಕೆಎಸ್‌ಆರ್‌ಟಿಸಿ' ಎಂದು ಬಳಸುವಂತಿಲ್ಲವೆಂದು ಕೇಂದ್ರದ ಟ್ರೇಡ್ ಮಾರ್ಕ್ ರಿಜಿಸ್ಟರಿ ಬುಧವಾರ ತನ್ನ ಅಂತಿಮ ತೀರ್ಪನ್ನು ಪ್ರಕಟಿಸಿದೆ. ಎರಡು ರಾಜ್ಯಗಳ ನಡುವಿನ ಒಂದು ದಶಕದ ಕಾನೂನಾತ್ಮಕ ಹೋರಾಟವು ಅಂತ್ಯಗೊಂಡಂತಿದೆ ಎಂಬ ಮಾಧ್ಯಮಗಳ ವರದಿಗಳ ಹಿನ್ನೆಲೆಯಲ್ಲಿ ಇಂದು ಕೂಲಂಕುಶವಾಗಿ ಪರಿಶೀಲಿಸಲಾಗಿದ್ದು, ಇದು ವಾಸ್ತವಕ್ಕೆ ದೂರವಾದ ಸಂಗತಿಯಾಗಿದೆ ಎಂಬುದು ದೃಢಪಟ್ಟಿದೆ ಎಂದು ಸಚಿವರು ತಿಳಿಸಿದ್ದಾರೆ.

ಗ್ರಾಮಗಳಲ್ಲಿ ವ್ಯಾಕ್ಸಿನ್ ನೀಡಲು ಸರ್ಕಾರಿ ಬಸ್ ಬಾಡಿಗೆಗೆ ಲಭ್ಯ ಗ್ರಾಮಗಳಲ್ಲಿ ವ್ಯಾಕ್ಸಿನ್ ನೀಡಲು ಸರ್ಕಾರಿ ಬಸ್ ಬಾಡಿಗೆಗೆ ಲಭ್ಯ

ಕೆ. ಎಸ್. ಆರ್‌. ಟಿ. ಸಿ. ಟ್ರೇಡ್‌ ಮಾರ್ಕ್

ಕೆ. ಎಸ್. ಆರ್‌. ಟಿ. ಸಿ. ಟ್ರೇಡ್‌ ಮಾರ್ಕ್

ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಕೆ ಎಸ್ ಆರ್ ಟಿ ಸಿ ಗೆ ನೀಡಲಾದ ಟ್ರೇಡ್ ಮಾರ್ಕ್ ಪ್ರಮಾಣಪತ್ರದ ವಿರುಧ್ಧ ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿ (ಐಪಿಎಬಿ)ಯ ಮುಂದೆ ಸಲ್ಲಿಸಿದ ಮೇಲ್ಮನವಿಗಳಲ್ಲಿ ಯಾವುದೇ ಅಂತಿಮ ಆದೇಶಗಳನ್ನು ಸಹ ಹೊರಡಿಸಲಾಗಿಲ್ಲ ಎಂಬುದು ತಿಳಿದುಬಂದಿದೆ. ಆದ್ದರಿಂದ ಅನವಶ್ಯಕ ಅಪಪ್ರಚಾರಕ್ಕೆ ಯಾರೂ ಕಿವಿಕೊಡಬಾರದು ಎಂದು ಲಕ್ಷ್ಮಣ ಸವದಿ ಹೇಳಿದ್ದಾರೆ.

ಟ್ರೇಡ್‌ ಮಾರ್ಕ್‌ಗಳನ್ನು ಬಳಕೆ ಮಾಡುವುದಿಲ್ಲ

ಟ್ರೇಡ್‌ ಮಾರ್ಕ್‌ಗಳನ್ನು ಬಳಕೆ ಮಾಡುವುದಿಲ್ಲ

ಸದರಿ ಮಂಡಳಿಯನ್ನು 4/04/2021ರ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯ ಮೂಲಕ ರದ್ದುಪಡಿಸಲಾಗಿದೆ ಮತ್ತು ಇಲ್ಲಿ ಬಾಕಿ ಇರುವ ಅರ್ಜಿಗಳನ್ನು ಹೈಕೋರ್ಟ್‌ಗೆ ವರ್ಗಾಯಿಸಲಾಗುತ್ತದೆ. ಆದ್ದರಿಂದ, ಕರ್ನಾಟಕದಲ್ಲಿ ಕೆಎಸ್‌ಆರ್‌ಟಿಸಿಯ ಟ್ರೇಡ್ ಮಾರ್ಕ್ ನೋಂದಣಿಯು ಪ್ರಸ್ತುತ ಜಾರಿಯಲ್ಲಿದೆ ಮತ್ತು ಕೆಎಸ್‌ಆರ್‌ಟಿಸಿಯು ತನಗೆ ನೀಡಲಾಗಿರುವ ಟ್ರೇಡ್‌ಮಾರ್ಕ್‌ಗಳನ್ನು ಬಳಸಲಾಗುವುದಿಲ್ಲ ಎಂಬ ಸುದ್ದಿ, ವರದಿಗಳು ಸತ್ಯಕ್ಕೆ ದೂರವಾಗಿದೆ ಮತ್ತು ಇದನ್ನು ಕಾನೂನಾತ್ಮಕವಾಗಿ ಒಪ್ಪಲಾಗದು.

ನಿಷೇಧ, ಅಡೆತಡೆ ಇಲ್ಲ

ನಿಷೇಧ, ಅಡೆತಡೆ ಇಲ್ಲ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ‘ಕೆಎಸ್‌ಆರ್‌ಟಿಸಿ' ಟ್ರೇಡ್‌ಮಾರ್ಕ್ ಬಳಕೆ ಮಾಡುವ ವಿರುದ್ಧವಾಗಿ ಯಾವುದೇ ಕಾನೂನಾತ್ಮಕ ಅಡೆತಡೆಯಾಗಲಿ ಅಥವಾ ನಿಷೇಧವಾಗಲೀ ಇಲ್ಲ ಎಂಬುದನ್ನು ಗಮನಿಸಬೇಕು. ಕೇರಳ ಎಸ್‌ಆರ್‌ಟಿಸಿಯು, ಕೆಎಸ್ಆರ್‌ಟಿಸಿ/ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ನೀಡಲು ಉದ್ದೇಶಿಸಿದೆ ಎಂದು ಮಾಧ್ಯಮಗಳಲ್ಲಿನ ಸುದ್ದಿ ಪ್ರಕಟವಾಗಿದೆ. ಒಂದು ವೇಳೆ ಅಂತಹ ನೋಟಿಸ್ ನೀಡಿದರೆ, ಸಂಸ್ಥೆಯಿಂದ ಸೂಕ್ತವಾದ ಉತ್ತರವನ್ನು ನೀಡಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.

ಸೂಕ್ತ ಉತ್ತರ ಕೊಡಲಾಗುತ್ತದೆ

ಕೇರಳ ನೋಟಿಸ್ ನೀಡಲು ಉದ್ದೇಶಿಸಿದೆ ಎಂದು ಮಾಧ್ಯಮಗಳಲ್ಲಿನ ಸುದ್ದಿ ಪ್ರಕಟವಾಗಿದೆ. ಒಂದು ವೇಳೆ ಅಂತಹ ನೋಟಿಸ್ ನೀಡಿದರೆ, ಸಂಸ್ಥೆಯಿಂದ ಸೂಕ್ತವಾದ ಉತ್ತರವನ್ನು ನೀಡಲಾಗುತ್ತದೆ.

English summary
KSRTC trademark legal battle between Kerala and Karnataka not ends transport minister of Karnataka Lakshman Savadi said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X