KSRTC: ತಂಬಾಕು ಉತ್ಪನ್ನಗಳಿಗೆ ಸಂಬಂಧಿಸದ ಜಾಹೀರಾತು ತೆಗೆಯುವ ಕಿಡಿಗೇಡಿಗಳ ವಿರುದ್ಧ ಎಫ್ಐಆರ್
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಸಾರಿಗೆ ಬಸ್ಗಳ ಹೊರ ಭಾಗದಲ್ಲಿ ಅಳವಡಿಸಿದ್ದ ತಂಬಾಕು ಉತ್ಪನ್ನಗಳ ಜಾಹೀರಾತು ನಿರ್ಬಂಧಿಸಿದ್ದ ಸರ್ಕಾರ ತೆರವಿಗೆ ಎರಡು ವಾರಗಳ ಗಡುವು ನೀಡಿತ್ತು. ಇದೀಗ ನಿಯಮಗಳನ್ವಯ ಜಾಹೀರಾತು ಅಳವಡಿಕೆಯು ಸಾರಿಗೇತರ ಆದಾಯ ಮೂಲವಾಗಿದೆ. ಬಸ್ಸುಗಳಲ್ಲಿನ ತಂಬಾಕು ಜಾಹೀರಾತು ಹೊರತುಪಡಿಸಿ ಇತರ ಸದುದ್ದೇಶಗಳ ಜಾಹೀರಾತುಗಳನ್ನು ಅಕ್ರಮವಾಗಿ ತೆರವುಗೊಳಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದೆ.
ಇತ್ತೀಚೆಗೆ ಬಸ್ಗಳ ಮೇಲೆ ಅಳವಡಿಸಿದ್ದ ಸಿಗರೇಟ್, ಪಾನ್ ಮಸಾಲ ಹಾಗೂ ಇತರ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಸಾರ್ವಜನಿಕರು, ಕನ್ನಡ ಪರ ಸಂಘಟನೆಗಳು ತೆರವು ಮಾಡಿದ್ದವು. ಸಾಮಾಜಿಕ ಜಾಲತಾಣಗಳಲ್ಲಿ ಒಂದು ರೀತಿಯ ಅಭಿಯಾನ ಆರಂಭವಾಗಿತ್ತು. ಅದರ ಬೆನ್ನಲ್ಲೆ ಎಚ್ಚೆತ್ತ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಬಸ್ಗಳ ಮೇಲೆ ಜಾಹೀರಾತು ಅಳವಡಿಕೆ ನಿರ್ಬಂಧಿಸಿ ಆದೇಶಿಸಿದ್ದರು. ಆ ಜಾಹೀರಾತುಗಳ ತೆರವಿಗೆ ಫೆಬ್ರವರಿ 18ರವರೆಗೆ ಗಡುವು ನೀಡಲಾಗಿತ್ತು. ಇದು ಸಾರ್ವಜನಿಕರ ಆಕ್ರೋಶಕ್ಕೆ ಸಿಕ್ಕ ಜಯ ಎಂದು ಬಣ್ಣಿಸಲಾಗಿತ್ತು.

ಜಾಹೀರಾತು ಅಕ್ರಮ ತೆರವು ಅಪರಾಧ
ಆದರೆ ಇದೀಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ನೀಡಿರುವ ಟಿಪ್ಪಣಿಯಲ್ಲಿ ಬಸ್ಸುಗಳಲ್ಲಿನ ತಂಬಾಕು ಸಂಬಂಧಿತ ಜಾಹೀರಾತುಗಳನ್ನು ಅಧಿಕಾರಿಗಳೇ ತೆರವುಗೊಳಿಸುತ್ತಿದ್ದಾರೆ. ಆದರೆ ತಂಬಾಕು ಉತ್ಪನ್ನ ಅಲ್ಲದ ವಿಷಯಗಳಿಗೆ ಸಂಬಂಧಿಸಿದ ಜಾಹೀರಾತುಗಳನ್ನು ಕೆಲವರು ಅಕ್ರಮವಾಗಿ ತೆರವು ಮಾಡುತ್ತಿರುವುದು ಸಾರಿಗೆ ಸಂಸ್ಥೆಗೆ ಗೊತ್ತಾಗಿದೆ. ಸಾರ್ವಜನಿಕರು ಹೀಗೆ ಅಕ್ರಮವಾಗಿ ತೆರವುಗೊಸಿದನ್ನು ಅಪರಾಧ ಎಂದಿದೆ. ಅವರ ಬಗ್ಗೆ ಎಫ್ಐಆರ್ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಹೌದು, ಕೆಎಸ್ಆರ್ಟಿಸಿ ನೀಡಿದ ಮಾಹಿತಿಯಲ್ಲಿ 'ಮೇಲ್ಕಂಡ ವಿಷಯ ಹಾಗೂ ಉಲ್ಲೇಖಗಳಿಗೆ ಸಂಬಂಧಿಸಿದಂತೆ, ನಿಗಮದ ಸಾರಿಗೇತರ ಆದಾಯ ಹೆಚ್ಚಿಸಲು ಹಲವಾರು ವರ್ಷಗಳಿಂದ ನಿಗಮದ ಬಸ್ಸುಗಳ ಮೇಲೆ ಜಾಹೀರಾತು ಪ್ರದರ್ಶನಕ್ಕೆ ಅವಕಾಶ ನೀಡಲಾಗಿದೆ. ಸಾರಿಗೆ ಮತ್ತು ಮುಜರಾಯಿ ಸಚಿವರ ಟಿಪ್ಪಣಿಯಂತೆ, ಬಸ್ಸುಗಳ ಜಾಹೀರಾತುಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ ಪರೋಕ್ಷವಾದ ಜಾಹೀರಾತುಗಳನ್ನು ದಿನಾಂಕ 15-02-2026 ರೊಳಗಾಗಿ ತೆರವುಗೊಳಿಸಲು ಈಗಾಗಲೇ ಸೂಚನೆ ನೀಡಿದ್ದಾರೆ.
ಜಾಹೀರಾತಿಗೆ ಅವಕಾಶ ಇದೆ: ಆಕ್ಷೇಪಣೆ ಸಲ್ಲಿಸಿ
ನಿಗಮದ ಬಸ್ಸುಗಳ ಮೇಲೆ Advertisement Standard Council of India Code (ASCI Code) ನಿಯಮಾವಳಿಗಳನ್ವಯ ಜಾಹೀರಾತುಗಳನ್ನು ಪ್ರದರ್ಶಿಸಲು ಅವಕಾಶವಿರುತ್ತದೆ. ನಿಗಮದ ವಾಹನಗಳ ಮೇಲೆ ಪ್ರದರ್ಶಿತವಾಗುತ್ತಿರುವ ಜಾಹೀರಾತುಗಳು ನಿಗಮಕ್ಕೆ ಸಾರಿಗೇತರ ಆದಾಯದ ಮೂಲವಾಗಿರುತ್ತದೆ. ಆದಾಗ್ಯೂ, ನಿಗಮದ ಬಸ್ಸುಗಳ ಮೇಲೆ ಪ್ರದರ್ಶಿತವಾಗುತ್ತಿರುವ ಇತರ ಜಾಹೀರಾತಿನ ಸಂಬಂಧ ಸಾರ್ವಜನಿಕರಿಂದ ಆಕ್ಷೇಪಣೆ/ದೂರುಗಳು ಇದ್ದಲ್ಲಿ, ಲಿಖಿತ ಮನವಿಯನ್ನು ಪಡೆದು, ಈ ಸಂಬಂಧ ಕರಾರಿನ ನಿಯಮಾವಳಿಯಂತೆ ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳುವುದು.
ಆದರೆ, ಕೆಲವು ವ್ಯಕ್ತಿಗಳು ಸಾರ್ವಜನಿಕ ಬಸ್ಸುಗಳಲ್ಲಿನ ಜಾಹೀರಾತುಗಳನ್ನು ಅಕ್ರಮವಾಗಿ ತೆರವುಗೊಳಿಸುತ್ತಿರುವುದು ಕಾನೂನು ಬಾಹಿರವಾಗಿರುತ್ತದೆ. ಅಂತಹ ವ್ಯಕ್ತಿಗಳ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿ FIR ದಾಖಲಿಸಿ, ಎಲ್ಲಾ ರೀತಿಯ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಿದೆ'' ಎಂದು ತಿಳಿಸಿದೆ.
ಅಲ್ಲದೇ ಬಸ್ ನಿಲ್ದಾಣದ ಸಿಬ್ಬಂದಿಗಳು, ಚಾಲನಾ ಸಿಬ್ಬಂದಿಗಳು ಹಾಗೂ ಇತರೆ ಸಿಬ್ಬಂದಿಗಳಿಗೂ ಈ ಸಂಬಂಧ ಸೂಕ್ತ ತಿಳುವಳಿಕೆ /ನಿರ್ದೇಶನ ನೀಡಬೇಕು. ಜೊತೆಗೆ ಈ ಮೇಲ್ಕಂಡ ಅಂಶಗಳ ಸಂಬಂಧ ಅಗತ್ಯ ಕ್ರಮ ಕೈಗೊಂಡಿದ್ದರ ಕುರಿತು ಅಗತ್ಯ ವರದಿ ನೀಡುವಂತೆ ಸಾರಿಗೆ ಸಂಸ್ಥೆ ತಿಳಿಸಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications