KSRTC: ಗಣೇಶ ಹಬ್ಬ ಪ್ರಯುಕ್ತ ಹೆಚ್ಚುವರಿ 1200 ಬಸ್‌ಗಳ ಕಾರ್ಯಾಚರಣೆ, ಟಿಕೆಟ್ ಬುಕ್ಕಿಂಗ್‌ಗೆ ರಿಯಾಯಿತಿ

ಬೆಂಗಳೂರು, ಸೆಪ್ಟಂಬರ್ 11: ಹಬ್ಬಗಳು ಎದುರಾದರೆ ಸಾಕು ಬಸ್‌ಗಳನ್ನು ಹಿಡಿದು ತಮ್ಮೂರಿಗೆ ತೆರಳುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಅದರಲ್ಲೂ ರಾಜಧಾನಿ ಬೆಂಗಳೂರಿನಿಂದ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ, ಕರಾವಳಿ ಭಾಗ ಮತ್ತು ನೆರೆಯ ಜಿಲ್ಲೆಗಳಿಗೆ ತೆರಳುವವರ ಸಂಖ್ಯೆ ಹೆಚ್ಚಿರುತ್ತದೆ. ಈ ಸಂಬಂಧ ಎಂಟು ದಿನ ಬಾಕಿ ಇರುವ ಗಣೇಶ ಹಬ್ಬಕ್ಕೆ (Ganesha Festival) ತೆರಳುವವರಿಗೆ ಅನುಕೂಲವಾಗಲೆಂದು KSRTC ನಿಗಮವು ಒಂದು ಸಾವಿರಕ್ಕೂ ಹೆಚ್ಚುವರಿ ಬಸ್‌ಗಳನ್ನು ಬಿಡುವುದಾಗಿ ತಿಳಿಸಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಇದೇ ಗಣೇಶ ಹಬ್ಬದಂದು ಬೆಂಗಳೂರಿನಿಂದ ರಾಜ್ಯದ ವಿವಿಧೆಡೆ ಮತ್ತು ಬೇರೆ ರಾಜ್ಯಗಳಿಗೆ ಹೆಚ್ಚುವರಿಯಾಗಿ 1200 ಬಸ್‌ಗಳನ್ನು ಬಿಡಲಿದೆ. ಈ ಕುರಿತು ಸಾರಿಗೆ ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.

ksrtc-will-be-provide-additional-1200-bus

ಹೆಚ್ಚುವರಿ ಬಸ್‌ ಮಾರ್ಗಗಳ ಮಾಹಿತಿ

ಬೆಂಗಳೂರು ಕೆಂಪೇಗೌಡ ಬಸ್‌ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ksrtc ಬಸ್‌ಗಳು ವಿಶೇಷ ಕಾರ್ಯಾಚರಣೆ ನಡೆಸಲಿವೆ.

* ಮೈಸೂರು ರಸ್ತೆ ಬಸ್‌ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ.

* ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಮಾಡಲಾಗುವುದು. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಬಸ್‌ಗಳು ಸಂಚರಿಸಲಿವೆ.

* ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

* ಪ್ರಯಾಣಿಕರು ಬಸ್‌ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್‌ ನಿಲ್ದಾಣ/ಪಿಕ್ ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.

ksrtc-will-be-provide-additional-1200-bus

ಇ-ಟಿಕೇಟ್ ಬುಕಿಂಗ್‌ನ್ನು www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಲು ಸೂಚಿಸಲಾಗಿದೆ.

* ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತಾರಾಜ್ಯದಲ್ಲಿ ಇರುವ 691 ಗಣಕೀಕೃತ ಬುಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದು.

* ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಹಾಗೂ ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು.

* ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೇರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌ೦ಟರ್‌ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.

* ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‌ಜಾಲ ವ್ಯವಸ್ಥೆಯಲ್ಲಿ ಹಾಗೂ KSRTC ನಿಗಮದ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ ಹಾಗೂ ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ.

ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+