KSRTC: ಕರ್ನಾಟಕ ಸಾರಿಗೆಗೆ ಮತ್ತೆ 3 ರಾಷ್ಟ್ರೀಯ ಪ್ರಶಸ್ತಿಗಳು

ಬೆಂಗಳೂರು, ಮಾರ್ಚ್ 09: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಜಾರಿಗೆ ತರುತ್ತಿರುವ ಜನಸ್ನೇಹಿ ಉಪಕ್ರಮಗಳು, ಸೇವಾ ಬದ್ಧತೆಗಳಿಗೆ ಈಗಾಗಲೇ ಸಾಕಷ್ಟು ಪ್ರಶಸ್ತಿಗಳು ಲಭ್ಯವಾಗಿದೆ. ಇತ್ತೀಚೆಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕಿರಗೆ ರಾಷ್ಟ್ರೀಯ ಸಾರ್ವಜನಿಕ‌ ಉದ್ದಿಮೆಗಳ ಪ್ರಶಸ್ತಿ ಮತ್ತು ನಾಯಕತ್ವ ಪ್ರಶಸ್ತಿ -2025 ದೊರೆತಿದೆ. ಅದರ ಬೆನ್ನಲ್ಲೆ ನಿಗಮಕ್ಕೆ ಮತ್ತೆ 3 ರಾಷ್ಟ ಮಟ್ಟದ ಪ್ರಶಸ್ತಿಗಳು ಧಕ್ಕಿವೆ.

ದೇಶದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ ( ASRTU) 2023-24ನೇ ಸಾಲಿನ ಒಟ್ಟು ಮೂರು ರಾಷ್ಟ್ರೀಯ ಸಾರ್ವಜನಿಕ ಬಸ್ ಸಾರಿಗೆ ಪ್ರಶಸ್ತಿಗಳಿಗೆ (National Transport Excellence Award) ಕರ್ನಾಟಕ KSRTC ಭಾಜನವಾಗಿದೆ ಎಂದು ನಿಗಮದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

KSRTC Wins Three National Public Bus Transport Excellence Awards 2023-24

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟ (ASRTU)ದ ವ್ಯಾಪ್ತಿಯಲ್ಲಿ ದೇಶದ 62 ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು ಸದಸ್ಯತ್ವವನ್ನು ಹೊಂದಿವೆ. ಸದರಿ ಒಕ್ಕೂಟವು 13ನೇ ಆಗಸ್ಟ್ 1965 ರಲ್ಲಿ ಅಸ್ತಿತ್ವಕ್ಕೆ ಬಂದಿದೆ. ಭಾರತ ಸರ್ಕಾರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದ ನಿರ್ದೇಶನದ ಅನುಸಾರ ಕಾರ್ಯ ನಿರ್ವಹಿಸುತ್ತದೆ. ಈ ಸಂಸ್ಥೆಯು 59 ವರ್ಷಗಳ ಅನುಭವವನ್ನು ಹೊಂದಿದ್ದು, ದೇಶದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ.

ಪ್ರಶಸ್ತಿಗಳು ಲಭಿಸಲು ಕಾರಣ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ (KSRTC) ಅಶ್ವಮೇಧ ಬ್ರ್ಯಾಂಡಿಂಗ್ ಹಾಗೂ ವರ್ಚಸ್ಸು ಅಭಿವೃದ್ಧಿ, ಕಾರ್ಮಿಕರ ಕಲ್ಯಾಣಕ್ಕಾಗಿ ಕೈಗೊಂಡಿರುವ ವಿನೂತನ ಯೋಜನೆಗಳು ಹಾಗೂ ಗಣಕೀಕರಣ ಉಪಕ್ರಮಗಳಿಗಾಗಿ ಈ ಮೂರು ರಾಷ್ಟ್ರಮಟ್ಟದ ಪ್ರಶಸ್ತಿಗಳು ಲಭಿಸಿವೆ.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟ (ASRTU) ವತಿಯಿಂದ ನವದೆಹಲಿಯಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಡಾ. ಕಿರಣ್ ಬೇಡಿ IPS (ನಿವೃತ್ತ ) ಅವರು ಪ್ರಶಸ್ತಿ ಪ್ರಧಾನ ಮಾಡಿದರು. ಉಪಮುಖ್ಯ ಸಂಚಾರ ವ್ಯವಸ್ಥಾಪಕ ಗುರುರಾಜ್ ಮತ್ತು ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ ರಾಧಾ ಅವರು ಪ್ರಶಸ್ತಿಗಳನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗ, ನಿರ್ವಾಹಕ ನಿರ್ದೇಶಕರಾದ ಸೂರ್ಯಕಿರಣ್ ಪ್ರಶಸ್ತಿ ಸ್ವೀಕಾರಕ್ಕೆ ಸಾಕ್ಷಿಯಾದರು.

KSRTC Wins Three National Public Bus Transport Excellence Awards 2023-24

ಇದೆ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಆನೇಕಲ್ ಘಟಕದ ಚಾಲಕ ಕಂ ನಿರ್ವಾಹಕಿ ಸುಲೋಚನಾ ದೇವಿ ಅವರು ಸಾರಿಗೆ ಸಂಸ್ಥೆಯಲ್ಲಿ ಸಲ್ಲಿಸಿರುವ 26 ವರ್ಷಗಳ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು.

ಇತ್ತೀಚೆಗೆ ಗೌವರ್ನನ್ಸ್ ನೌ ಆಯೋಜಿಸಿದ್ದ ಸಮಾರಂಭದಲ್ಲಿ ಕರ್ನಾಟಕ ಸಾರಿಗೆಗೆ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯವಸ್ಥಾಪಕ ನಿರ್ದೇಶಕರು ಅನ್ಬುಕುಮಾರ್ ಅವರಿಗೆ 'PSU ಆತ್ಮ‌ನಿರ್ಭರ್ ನಾಯಕತ್ವ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+