Get Updates
Get notified of breaking news, exclusive insights, and must-see stories!

KSRTC Strike : ಯುಗಾದಿಗೆ KSRTC ಬಸ್‌ ಇರೋದು ಡೌಟ್‌! ಮಾರ್ಚ್‌ 21ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಬೇಡಿಕೆಗಳ ಈಡೇರಿಕೆಗಾಗಿ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ಕೊಟ್ಟಿದ್ದು, ಯುಗಾದಿ ಹಬ್ಬಕ್ಕೆ ಬಸ್‌ ಇರುವುದೇ ಡೌಟ್.!‌

ಬೆಂಗಳೂರು,ಮಾರ್ಚ್15:‌ ಯುಗಾದಿ ಹಬ್ಬಕ್ಕೆ ಊರಿಗೆ ಹೋಗುವವರಿಗೆ ರಾಜ್ಯ ಸಾರಿಗೆ ನೌಕರರ ಸಂಘ ಬಿಗ್ ಶಾಕ್ ಕೊಟ್ಟಿದೆ. ಯುಗಾದಿ ಹಬ್ಬಕ್ಕೂ ಮುನ್ನವೇ ಅಂದ್ರೆ, ಮಾರ್ಚ್ 21ರಂದು ರಾಜ್ಯಾದ್ಯಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ಕೊಟ್ಟಿದೆ.

ವೇತನ ಪರಿಷ್ಕರಣೆ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮಾರ್ಚ್‌ 21ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ಕೊಟ್ಟಿದ್ದು, ಬಸ್‌ ಸಂಚಾರ ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ. ಇದರಿಂದ ಯುಗಾದಿ ಹಬ್ಬಕ್ಕೆ ಮುನ್ನವೇ ರಾಜ್ಯಾದ್ಯಂತ 23 ಸಾವಿರ ಬಸ್‌ಗಳ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆಗಳಿವೆ ಎನ್ನಲಾಗಿದೆ.

KSRTC Workers Announced Indefinite Strike From March 21 Ahead Of Ugadi

ಮಾಚ್ 21ರಂದು ಬೆಳಗ್ಗೆ 6 ಗಂಟೆಯಿಂದ ಮುಷ್ಕರ ಆರಂಭವಾಗಲಿದೆ ಎಂದು ರಾಜ್ಯ ಸಾರಿಗೆ ನೌಕರರ ಸಂಘದ ಅಧ್ಯಕ್ಷ ಅನಂತ್ ಸುಬ್ಬಾರಾವ್ ತಿಳಿಸಿದ್ದಾರೆ. ಮುಂದಿನ ಮಂಗಳವಾರ ನಮ್ಮ ಮುಷ್ಕರ ನಡೆಯಲಿದೆ. 1 ಲಕ್ಷಕ್ಕೂ ಹೆಚ್ಚು ಸಿಬ್ಬಂದಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದು, ಯಾವುದೇ ಕಾರಣಕ್ಕೂ ಡಿಪೋದಿಂದ ಬಸ್‌ಗಳನ್ನು ತೆಗೆಯಲ್ಲ ಎಂದು ಹೇಳಿದ್ದಾರೆ.

ಫೆಬ್ರವರಿ 21 ರಂದು ಅಂಬಾರಿ-ಉತ್ಸವ' ಬಸ್ಸುಗಳ ಲೋಕಾರ್ಪಣೆ ಸಮಾರಂಭದಲ್ಲಿ ನಮ್ಮ ಮನವಿಗೆ ಉತ್ತರವಾಗಿ ನಮ್ಮ ಬೇಡಿಕೆಗಳ ಬಗ್ಗೆ ಸಹಾನುಭೂತಿ ಇದೆ ಎಂದು ಮತ್ತು ವಿಧಾನ ಮಂಡಲದ ಅಧಿವೇಶನ ಮುಗಿದ ನಂತರ, ಸಭೆ ನಡೆಸಿ ಇತ್ಯರ್ಥ ಪಡಿಸುವುದಾಗಿ ಭರವಸೆ ನೀಡಿದ್ದಿರಿ. ನಂತರದ ದಿನಗಳಲ್ಲಿ ಸಾರಿಗೆ ನಿಗಮಗಳ ಆಡಳಿತ ವರ್ಗವು ಫೆಬ್ರವರಿ 27 ರಂದು ಕೆ.ಎಸ್.ಆರ್.ಟಿ.ಸಿ ಕೇಂದ್ರ ಕಛೇರಿಯಲ್ಲಿ ಜಂಟಿ ಕ್ರಿಯಾ ಸಮಿತಿಯ ನಾಯಕರ ಜೊತೆ ಈ ಬೇಡಿಕೆಗಳ ಬಗ್ಗೆ ಮಾತುಕತೆ ನಡೆಸಿದರು.

ಈ ಸಭೆಯಲ್ಲಿ ಯಾವುದೇ ನಿರ್ದಿಷ್ಟ ಪ್ರಸ್ತಾವನೆಗಳು ಬಾರದಿದ್ದ ಕಾರಣ ಮಾರ್ಚ್‌ 8 ರಂದು, ಸಾರಿಗೆ ಇಲಾಖೆಯ ಸಚಿವರಾದ ಬಿ. ಶ್ರೀರಾಮುಲು ರವರ ಅಧ್ಯಕ್ಷತೆಯಲ್ಲಿ ವಿಧಾನ ಸೌಧದಲ್ಲಿ ಸಭೆ ನಡೆಯಿತು. ಈ ಸಭೆಯು ವೇತನ ವಿಮರ್ಶೆಗೆ ಮಾತ್ರ ಸೀಮಿತವಾಗಿತ್ತು. ಹಾಗೂ ಈ ಸಭೆಯಲ್ಲಿ ಸಚಿವರು ಸುಮಾರು 2.00 ಗಂಟೆಗಳ ಸುಧೀರ್ಘ ಚರ್ಚೆಯ ನಂತರ ಸಮಸ್ತ ಸಾರಿಗೆ ನೌಕರರಿಗೂ ಮೂಲ ವೇತನದ ಶೇಕಡ 10 ರಷ್ಟು ಹೆಚ್ಚಳವನ್ನು ನೀಡುವುದಾಗಿ ತಿಳಿಸಿದರು. ಇದಕ್ಕೆ ನಮ್ಮ ಸಮ್ಮತಿ ಇಲ್ಲದ ಕಾರಣ ತಮ್ಮೊಡನೆ ಮತ್ತೊಮ್ಮೆ ಸಭೆ ನಡೆಸಿ ಈ ಬೇಡಿಕೆಯನ್ನು ತೀರ್ಮಾನಿಸುವುದಾಗಿ ತಿಳಿಸಿದರು. ಹಾಗೂ ಇನ್ನೆರಡು ದಿನಗಳಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಸಭೆ ಏರ್ಪಡಿಸುವುದಾಗಿ ತಿಳಿಸಿ, ಮಾಧ್ಯಮಗಳ ಮುಂದೆ ಘೋಷಿಸಿದರು.

KSRTC Workers Announced Indefinite Strike From March 21 Ahead Of Ugadi

ಈ ಹಿನ್ನೆಲೆಯಲ್ಲಿ ಜಂಟಿ ಕ್ರಿಯಾ ಸಮಿತಿಯು ಸಭೆ ಸೇರಿ, ಸುಧೀರ್ಘವಾಗಿ ಪರಿಸ್ಥಿತಿಯ ಅವಲೋಕನ ಮಾಡಿ, ಸರ್ಕಾರದ ಕಣ್ಣಿತೆರೆಸಲು ನಾಲ್ಕೂ ನಿಗಮಗಳ ಎಲ್ಲಾ ವರ್ಗಗಳ ನೌಕರರೂ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಮಾರ್ಚ್‌ 21 ಬೆಳಿಗ್ಗೆ 6.00 ಗಂಟೆಯಿಂದ ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಮುಷ್ಕರದಲ್ಲಿ ತೊಡಗಬೇಕೆಂದು ಒಮ್ಮತದ ನಿರ್ಣಯಕ್ಕೆ ಬಂದಿದೆ. ಆದರಂತೆ ನಾವು ರಾಜ್ಯಾದ್ಯಂತ ಇರುವ ಸಾರಿಗೆ ನೌಕರರು ಶಾಂತಿಯುತವಾದ ಅನಿರ್ಧಿಷ್ಟ ಮುಷ್ಕರ ಮಾಡಲು ನಿರ್ಧರಿಸಿದ್ದೇವೆ ಎಂದು ರಾಜ್ಯ ಸಾರಿಗೆ ನೌಕರರ ಸಂಘದ ಅಧ್ಯಕ್ಷ ಅನಂತ್ ಸುಬ್ಬಾರಾವ್ ತಿಳಿಸಿದ್ದಾರೆ.

ಸಾರಿಗೆ ನೌಕರರ ಬೇಡಿಕೆಗಳೇನು?

1. ಮೂಲ ವೇತನಕ್ಕೆ ಬಿ.ಡಿ.ಎ ವಿಲೀನಗೊಳಿಸಿ, ಮೂಲ ವೇತನವನ್ನು ಶೇ.25ರಷ್ಟು ಹೆಚ್ಚಿಸಬೇಕು.

2. ವೇತನ ಹೆಚ್ಚಳವು ಪರಿಷ್ಕೃತ ಮೂಲ ವೇತನದ ಶೇ.3ರಷ್ಟಿರಬೇಕು.

KSRTC Workers Announced Indefinite Strike From March 21 Ahead Of Ugadi

3. ಆಯ್ಕೆ ಶ್ರೇಣಿ ಹಾಗೂ ಉನ್ನತ ಶ್ರೇಣಿಗಳ ವೇತನ ಶ್ರೇಣಿಯನ್ನೂ ಮೇಲಿನಂತೆಯೇ ಸಿದ್ಧಪಡಿಸಬೇಕು. ವೇತನ ಬಡ್ತಿ ದರವು ಪರಿಷ್ಕೃತ ಮೂಲ ವೇತನದ ಶೇ 3ರಷ್ಟಿರಬೇಕು. ಆಯ್ಕೆ ಶ್ರೇಣಿ ಬಡ್ತಿಯನ್ನು ಸೇವಾವಧಿಯ ಪ್ರತಿ 10 ವರ್ಷಕ್ಕೆ ನೀಡಬೇಕು.

4. ಎಲ್ಲನೌಕರರಿಗೂ ಹಾಲಿ ಇರುವ ಬಾಟಾ, ಮಾಸಿಕ, ದೈನಂದಿನ (ಕ್ಯಾಷ್‌, ರಿಪಾಸ್ಟ್‌, ಬಟ್ಟೆ ತೊಳೆಯುವ, ರಾತ್ರಿ ಪಾಳಿ, ಪ್ರೋತ್ಸಾಹ ಭತ್ಯೆ) ಭತ್ಯೆಗಳನ್ನು ಐದು ಪಟ್ಟು ಜಾಸ್ತಿ ಮಾಡಬೇಕು.

5. ಹೊಲಿಗೆ ಭತ್ಯೆ, ಶೂ, ಜೆರ್ಸಿ, ರೈನ್‌ ಕೋಟ್‌ಗೆ ನೀಡುವ ಮೊತ್ತವನ್ನು ಮೂರು ಪಟ್ಟು ಹೆಚ್ಚಿಸಬೇಕು.

6. ಎಲ್ಲ ನಿರ್ವಾಹಕರಿಗೂ ಕ್ಯಾಷಿಯರ್‌ಗಳಿಗೆ ಸಮಾನವಾದ ನಗದು ಪ್ರೋತ್ಸಾಹಧನ ನೀಡಬೇಕು.

7. 2021ರ ಏಪ್ರಿಲ್‌ನಲ್ಲಿ ಮುಷ್ಕರ ನಡೆಸಿದ ಸಂದರ್ಭದಲ್ಲಿ ಸೇವೆಯಿಂದ ವಜಾಗೊಳಿಸಿದ ನೌಕರರನ್ನು ಷರತ್ತಿಲ್ಲದೆ ಮರು ನೇಮಕ ಮಾಡಬೇಕು.

8. ವರ್ಗಾವಣೆ ಶಿಕ್ಷೆಗೆ ಒಳಗಾದ ಸಿಬ್ಬಂದಿ, ನೌಕರರನ್ನು ಮೂಲ ಘಟಕಕ್ಕೆ ಮರು ನಿಯೋಜಿಸಬೇಕು.

9. ಮುಷ್ಕರದ ವೇಳೆ ಎಫ್‌ಐಆರ್‌ ದಾಖಲಿಸಿರುವ ನೌಕರರನ್ನು ಕೆಲಸಕ್ಕೆ ವಾಪಸ್‌ ತೆಗೆದುಕೊಳ್ಳಬೇಕು.

10. ಜಂಟಿ ಕ್ರಿಯಾ ಸಮಿತಿಯಿಂದ ಜ. 24ರಂದು ಸಲ್ಲಿಸಿರುವ ಬೇಡಿಕೆಗಳನ್ನು ಆಡಳಿತ ವರ್ಗದವರು ಚರ್ಚಿಸಿ, ವಿಳಂಬವಿಲ್ಲದೇ ಈಡೇರಿಸಬೇಕು.

11. ಕೈಗಾರಿಕಾ ವಿವಾದ ಕಾಯಿದೆ 1947ರ ಅನ್ವಯ ಜಂಟಿ ಕ್ರಿಯಾ ಸಮಿತಿಯ ಜತೆ ಕೈಗಾರಿಕಾ ಒಪ್ಪಂದ ಮಾಡಬೇಕು. ಇದು 2020ರ ಜ. 1 ರಿಂದ 2023ರ ಡಿ. 31ರವರೆಗೆ ಜಾರಿಯಲ್ಲಿರಬೇಕು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+