ಮತ್ತೆ ಶುರುವಾಯ್ತು ಬಂಗಾರಪ್ಪ ಮಕ್ಕಳ ಕದನ! ಈ ಬಾರಿ ಸೊರಬದ ಸರದಾರನಾರು? ಇಲ್ಲಿದೆ ಇನ್ ಸೈಡ್ ಸ್ಟೋರಿ
ಶಿವಮೊಗ್ಗ,ಮಾರ್ಚ್ 11: ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ರಾಜ್ಯದ ಹಾಟ್ ಕ್ಷೇತ್ರಗಳಲ್ಲಿ ಸೊರಬ ಕ್ಷೇತ್ರವೂ ಒಂದಾಗಿದ್ದು, ಪ್ರತಿ ಚುನಾವಣೆ ಸ್ಪರ್ಧೆಗೆ ಕಿಚ್ಚು ಹಚ್ಚಿದವರೇ ಬಂಗಾರಪ್ಪ ಮಕ್ಕಳು ಎಂದರೇ ತಪ್ಪಾಗುವುದಿಲ್ಲ. ಸಹೋದರರ ನಡುವೆ ಉಂಟಾದ ಕೌಟುಂಬಿಕ ವೈಮನಸ್ಸು ಪ್ರತಿ ಬಾರಿಯ ಚುನಾವಣೆ ಕದನಕ್ಕೂ ಕಾರಣವಾಗಿದೆ.
ಬಂಗಾರಪ್ಪ ನವರ ಇಬ್ಬರು ಮಕ್ಕಳ ನಡುವೆ ಚುನಾವಣಾ ಸಮರ ಜೋರಾಗಿದ್ದು, ಈ ಬಾರಿ ಸೊರಬ ಕ್ಷೇತ್ರವನ್ನ ಪಡೆಯುವಲ್ಲಿ ಇಬ್ಬರು ನಾಯಕರು ಪಣ ತೊಟ್ಟಿದ್ದಾರೆ. ಈಗಾಗಲೇ 2018 ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನ ತೊರೆದು ಕುಮಾರ್ ಬಂಗಾರಪ್ಪ ಬಿಜೆಪಿ ಪಕ್ಷವನ್ನ ಸೇರ್ಪಡೆಯಾಗಿದ್ರು, ಆದರೆ, ಈ ಬಾರಿ ಮಧು ಬಂಗಾರಪ್ಪ ಜೆಡಿಎಸ್ ಪಕ್ಷವನ್ನ ತೊರೆದು ಕಾಂಗ್ರೆಸ್ ಪಕ್ಷವನ್ನ ಸೇರ್ಪಡೆಯಾಗಿದ್ದಾರೆ. ಸೊರಬ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಸ್ಪರ್ಧೆಗಿಂತ ಇಬ್ಬರು ಸಹೋದರರ ನಡುವೆ ಸಮರ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಸೋಲರಿಯದ ಸರದಾರ ಎಂದೇ ಖ್ಯಾತರಾಗಿದ್ದಮಾಜಿ ಮುಖ್ಯಮಂತ್ರಿ ದಿ. ಬಂಗಾರಪ್ಪ ಅವರ ತವರು ಕ್ಷೇತ್ರವಾಗಿದ್ದ ಸೊರಬ ಇತಿಹಾಸದಲ್ಲಿ ಬಂಗಾರಪ್ಪ ಕುಟುಂಬದ ಹೊರತಾಗಿ ಒಮ್ಮೆ ಮಾತ್ರ ಬೇರೆಯವರಿಗೆ ಈ ಕ್ಷೇತ್ರದಲ್ಲಿ ಗೆಲುವು ಕಂಡಿದ್ದಾರೆ. ಈಗಲೂ ಬಂಗಾರಪ್ಪ ಪುತ್ರರ ನಡುವಿನ ಪೈಪೋಟಿ ಏರ್ಪಪಟ್ಟಿದ್ದು, ಈ ಬಾರಿ ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದು, ಬಹುತೇಕ ಕಾಂಗ್ರೆಸ್ ಟಿಕೆಟ್ ನೀಡುವುದು ಖಚಿತವಾಗಿದೆ.
ಇನ್ನೂ ಸೊರಬ ಕ್ಷೇತ್ರದಲ್ಲಿ ಹಾಲಿ ಶಾಸಕರಾಗಿರುವ ಕುಮಾರ್ ಬಂಗಾರಪ್ಪ ನವರ ವಿರುದ್ದವಾಗಿ ಪಕ್ಷದಲ್ಲಿ ಸಾಕಷ್ಟು ಅಸಮಾಧಾನಗಳಿದ್ದೂ ಈ ಬಾರೀ ಬಿಜೆಪಿ ಟಿಕೆಟ್ ಕೊಡುತ್ತಾ ಎಂಬುದು ಇನ್ನೂ ಸಷ್ಟವಾಗಿಲ್ಲ. ಇತ್ತ 2009 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಹರತಾಳ ಹಾಲಪ್ಪಅವರನ್ನ ಈ ಬಾರೀ ಕಣಕ್ಕಿಳಿಸುವ ಲೆಕ್ಕಾಚಾರಗಳು ಕೇಳಿ ಬಂದಿವೆ. ಆದರೆ, ಯಾವುದೇ ಕಾರಣಕ್ಕೂ ಸಾಗರ ಬಿಟ್ಟು ಹೋಗುವುದಿಲ್ಲ ಎಂದು ಹರತಾಳ ಹಾಲಪ್ಪ ಹೇಳುತ್ತಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿವೆ.
ಈ ಸಲ ಗೆಲ್ಲಲೇಬೇಕು ಎಂದು ಇಬ್ಬರು ಸಹೋದರರು ಸೊರಬ ಕ್ಷೇತ್ರವನ್ನು ಪ್ರತಿಷ್ಠೆಯ ಕಣವನ್ನಾಗಿಸಿಕೊಂಡಿದ್ದಾರೆ. ಆದರೆ, ಒಂದು ಕಡೆ ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪನವರಿಗೆ ಮೂಲ ಬಿಜೆಪಿ ನಾಯಕರು ಮುಳ್ಳಾಗಿದ್ದಾರೆ. ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದಿಂದ ಗೆದ್ದು ಬಳಿಕ ಬಿಜೆಪಿ ಸೇರಿ ಶಾಸಕರಾಗಿರುವ ಕುಮಾರ್ ಬಂಗಾರಪ್ಪ ಕ್ಷೇತ್ರದಲ್ಲಿ ಮೂಲ ಬಿಜೆಪಿಗರನ್ನು ಕಡೆಗಣಿಸುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದ್ದು, ಕುಮಾರ್ ಬಂಗಾರಪ್ಪ ನಡೆಗೆ ಸ್ವತಃ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರೇ ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಅವರು ಈಗಾಗಲೇ ಎರಡೆರಡು ಬಾರಿ ಸಂಧಾನ ನಡೆಸಿದರೂ ಇದುವರೆಗೂ ಪ್ರಯೋಜನವಾಗಿಲ್ಲ ಎಂದು ಹೇಳಲಾಗಿದೆ.

ಇತ್ತ ಬಿಜೆಪಿಯಲ್ಲಿ ಹಾಲಿ ಶಾಸಕರಾಗಿರುವ ಕುಮಾರ ಬಂಗಾರಪ್ಪ ಅವರು 2023ರ ಚುನಾವಣೆಯಲ್ಲಿ ಬಿಜೆಪಿಯಿಂದ ಅವರೇ ಸ್ಪರ್ಧಿಸುತ್ತಾರಾ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಸೋತಿದ್ದ ರಾಜು ಎಂ.ತಲ್ಲೂರು ಇದೀಗ ಬಿಜೆಪಿ ಸೇರಿದ್ದು, ಇದೀಗ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಬಿಜೆಪಿಯಲ್ಲಿ ಟಿಕೆಟ್ ಗಾಗಿ ಸಾಕಷ್ಟು ಫೈಪೋಟಿ ಎದುರಾಗಿದ್ದು, ಹಾಲಿ ಶಾಸಕರಿಗೆ ಬಿಜೆಪಿಯ ಸ್ಥಳೀಯ ನಾಯಕರೇ ರಾಜಕೀಯ ವಿರೋಧಿಗಳಾಗುತ್ತಾರೆ ಎಂದು ಹೇಳಲಾಗಿದ್ದು, ಯಾರಿಗೆ ಟಿಕೆಟ್ ಕೊಡ್ಬೇಕು ಎಂಬ ಲೆಕ್ಕಾಚಾರ ಬಿಜೆಪಿ ಪಾಳಯದಲ್ಲಿ ನಡೆಯುತ್ತಿದೆ.
ಇತ್ತ ಪಕ್ಷಕ್ಕಿಂದ ಕೌಟುಂಬಿಕ ವೈಮನಸ್ಸಿನಿಂದಾಗಿ ಕುಮಾರ ಬಂಗಾರಪ್ಪ ಅವರು ಸಹ ಟಿಕೆಟ್ ಗಾಗಿ ಪಟ್ಟು ಹಿಡಿದಿದ್ದಾರೆ. ಇತ್ತ ಮೂಲ ಬಿಜೆಪಿಗರಲ್ಲಿ ಕುಮಾರ ಬಂಗಾರಪ್ಪ ಅವರಿಗೆ ಟಿಕೆಟ್ ನೀಡುವ ವಿಚಾರವಾಗಿ ಬಾರೀ ವಿರೋಧ ಕೇಳಿ ಬಂದಿದೆ ಎನ್ನಲಾಗಿದೆ. 56 ವರ್ಷಗಳಿಂದ ಬಂಗಾರಪ್ಪ ಕುಟುಂಬದ ಹಿಡಿಯದಲ್ಲಿದ್ದ ಸೊರಬ ಕ್ಷೇತ್ರ ಇದೀಗ ಬಂಗಾರಪ್ಪ ಮಕ್ಕಳ ಪ್ರತಿಷ್ಠೆಯ ಕಣವಾಗಿದ್ದು, ಈ ಬಾರಿ ಕುಮಾರ ಬಂಗಾರಪ್ಪ ಅವರಿಗೆ ಟಿಕೆಟ್ ಕೊಡದಿದ್ದರೆ, ಮಧು ಬಂಗಾರಾಪ್ಪ ಗೆಲ್ಲುವಿಗೆ ಬಿಜೆಪಿಯೇ ದಾರಿ ಮಾಡಿಕೊಟ್ಟಂತ ದಾರಿ ಮಾಡಿಕೊಟ್ಟಂತಾಗುತ್ತದೆ ಎಂಬ ಲೆಕ್ಕಾಚಾರವಿದೆ. ಹೀಗಾಗಿ ಬಿಜೆಪಿಯಲ್ಲಿಯೇ ಕುಮಾರ ಬಂಗಾರಪ್ಪ ನವರ ವಿರೋಧ ಇರುವ ಅಲೆಯನ್ನ ಶಮನಗೊಳಿಸಿ ಅವರಿಗೆ ಟಿಕೆಟ್ ನೀಡಲು ಬಿಜೆಪಿ ನಾಯಕರು ತಯಾರಿ ನಡೆಸಿದ್ದಾರೆ ಎನ್ನಲಾಗಿದೆ.
ಸೊರಬ ಕ್ಷೇತ್ರ ಈ ಬಾರೀ ಸಾಕಷ್ಟು ಕುತೂಹಲಕಾರಿ ಕ್ಷೇತ್ರವಾಗಿದ್ದು, ಈ ಬಾರಿಯೂ ಕುಮಾರ ಬಂಗಾರಪ್ಪ ಹಾಗೂ ಮಧು ಬಂಗಾರಪ್ಪ ನಡುವೆ ನೇರಾನೇರ ಪೈಪೋಟಿ ಏರ್ಪಡಲಿದ್ದು, ಕುಮಾರ ಬಂಗಾರಪ್ಪ ಕಡಿಮೆ ಅಂತರದಲ್ಲಿ ಜನಯಗಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications