ನಾಲೆಗಳಿಗೆ ನೀರು ಬಿಡದಿದ್ದರೆ ನಾನೇ ಬಂದು ಅಣೆಕಟ್ಟೆಯ ಗೇಟ್ ಗಳನ್ನು ಎತ್ತುತ್ತೇನೆ: ಗುಡುಗಿದ ಹೆಚ್‌ ಡಿ ಕುಮಾರಸ್ವಾಮಿ

ಮಂಡ್ಯ, ಸೆಪ್ಟೆಂಬರ್‌ 13: ಮಳವಳ್ಳಿ, ನಾಗಮಂಗಲ ಸೇರಿ ವಿವಿಧ ಭಾಗಗಳ ಕೆರೆ ತುಂಬಿಸದಿದ್ದರೆ, ಕೊನೆಯ ಭಾಗದ ಪ್ರದೇಶಗಳ ನಾಲೆಗೆ ನೀರು ಹರಿಸದಿದ್ದರೆ ನಾನೇ ಬಂದು ಕೃಷ್ಣರಾಜ ಸಾಗರ ಸಾಗರದ ಗೇಟ್ ಗಳನ್ನು ಎತ್ತಿ ನೀರು ಬಿಡಬೇಕಾಗುತ್ತದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದರು.

ಗಲಭೆಪೀಡಿತ ನಾಗಮಂಗಲಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮಗಳ ಜತೆ ಕೇಂದ್ರ ಸಚಿವರಾದ ಹೆಚ್‌ ಡಿ ಕುಮಾರಸ್ವಾಮಿ ಅವರು ಮಾತನಾಡಿ, ಮಳವಳ್ಳಿ ‌ಭಾಗಕ್ಕೆ ಇದುವರೆಗೂ ನೀರು ಕೊಟ್ಟಿಲ್ಲ. ಕುಮಾರಸ್ವಾಮಿಗೆ ವೋಟು ಹಾಕಿದ್ದೀರಿ, ನೀರು ಬೇಕಾದರೆ ಕುಮಾರಸ್ವಾಮಿಯನ್ನೇ ಹೋಗಿ ಕೇಳಿ ಎಂದು ಒಬ್ಬ ಶಾಸಕ ಹೇಳುತ್ತಿದ್ದಾನೆ. ಅಣೆಕಟ್ಟೆ ಇವರ ಅಪ್ಪನ ಮನೆಯ ಆಸ್ತಿಯೇ. ರೈತರಿಗೆ ನೀರು ಕೊಡಲು ಯೋಗ್ಯತೆ ಇಲ್ಲ. ಜಲಪಾತೋತ್ಸವ ಬೇರೆ ಮಾಡುತ್ತಿದ್ದಾರೆ. ನಾಚಿಕೆ ಆಗಬೇಕು ಇವರಿಗೆ ಎಂದು ಸಚಿವರು ಕಿಡಿಕಾರಿದರು.

Kumaraswamy attacked the Chief Engineer of Cauvery Irrigation Corporation

ಕೆರೆಕಟ್ಟೆಗಳಲ್ಲಿ ನೀರು ಇಲ್ಲ. ಮೆಟ್ಟೂರು ಜಲಾಶಯ ತುಂಬಿ ತುಳುಕುತ್ತಿದೆ. ನನ್ನನ್ನು ಭೇಟಿಯಾಗಿದ್ದ ತಮಿಳುನಾಡಿನ ಕೆಲ ನಾಯಕರು ಜಲಾಶಯದಿಂದ ಲಕ್ಷಾಂತರ ಕ್ಯೂಸೆಕ್ ನೀರು ಸಮುದ್ರಕ್ಕೆ ಹರಿದು ಹೋಗುತ್ತಿದೆ ಎಂದು ಹೇಳುತ್ತಾರೆ. ನಮ್ಮಲ್ಲಿ ಮಳೆ ಇಲ್ಲದೆ ಕೆರೆಗಳು ತುಂಬಿಲ್ಲ. ಮೊದಲೇ ತುಂಬಿಸುವ ಕೆಲಸ ಮಾಡಬೇಕಿತ್ತು ಎಂದು ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಗುರುವಾರ ಸಂಜೆಯೇ ನಾನು ದೆಹಲಿಯಿಂದ ಬರುವಾಗ ಕಾವೇರಿ ನೀರಾವರಿ ನಿಗಮದ ಮುಖ್ಯ ಎಂಜಿನಿಯರ್ ಆರ್.ಎಲ್.ವೆಂಕಟೇಶ್ ಜತೆ ಮಾತನಾಡಿದ್ದೇನೆ. ಅವರಿಗೆ ಸ್ಪಷ್ಟ ಎಚ್ಚರಿಕೆ ಕೊಟ್ಟಿದ್ದೇನೆ. ತಕ್ಷಣ ನಾಲೆಗೆ ನೀರು ಹರಿಸಿ, ಇಲ್ಲವಾದರೆ ಜನರ ಜತೆ ಬಂದು ನಾನೇ ಅಣೆಕಟ್ಟೆಯ ಗೇಟ್ ಗಳನ್ನು ಎತ್ತಿ ನೀರು ಬಿಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದೇನೆ. ತಕ್ಷಣ ಅವರು ನೀರು ಹರಿಸದಿದ್ದರೆ ನಾನೇ ರಸ್ತೆಗೆ ಇಳಿಯುತ್ತೇನೆ, ಹೇಳಿದ್ದನ್ನು ಮಾಡಿ ತೋರಿಸುತ್ತೇನೆ ಎಂದು ಕುಮಾರಸ್ವಾಮಿ ಅವರು ಎಚ್ಚರಿಕೆ ಕೊಟ್ಟರು.

ಶ್ರೀ ಬಂಡೆ ವಿನಾಯಕ ದೇವಸ್ಥಾನ ಲೋಕಾರ್ಪಣೆ

ಹೆಣ್ಣೂರು ಬಂಡೆ ಬಳಿ ನೂತನವಾಗಿ ನಿರ್ಮಾಣವಾಗಿರುವ ಶ್ರೀ ಬಂಡೆ ವಿನಾಯಕ ದೇವಸ್ಥಾನದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ಶುಕ್ರವಾರ ನೆರವೇರಿತು. ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ನಾಥ ಮಹಾಸ್ವಾಮೀಜಿ ಅವರು ಹಾಗೂ ಶ್ರೀ ನಂಜಾವಧೂತ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ನೂತನ ದೇವಾಲಯವನ್ನು ಲೋಕಾರ್ಪಣೆ ಮಾಡಿದರು.

ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಜೆಡಿಎಸ್ ಬೆಂಗಳೂರು ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಅವರ ಅಧ್ಯಕ್ಷತೆಯ ಬಂಡೆ ವಿನಾಯಕ ದೇವಸ್ಥಾನ ಟ್ರಸ್ಟ್ ವತಿಯಿಂದ ಈ ಭವ್ಯ ದೇಗುಲವನ್ನು ನಿರ್ಮಾಣ ಮಾಡಲಾಗಿದೆ. ಈ ಸಂದರ್ಭದಲ್ಲಿ ಮಾಜಿ ಪ್ರಧಾನಿಗಳು ಹಾಗೂ ಕೇಂದ್ರ ಸಚಿವರು ವಿನಾಯಕ ದೇವರ ದರ್ಶನ ಮಾಡಿಕೊಂಡು, ಎಲ್ಲರಿಗೂ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರಾದ ಕುಮಾರಸ್ವಾಮಿ ಅವರು, ರಮೇಶ್ ಗೌಡ ಅವರ ನೇತೃತ್ವದಲ್ಲಿ ವಿನಾಯಕ ದೇವರಿಗೆ ಭವ್ಯ ದೇಗುಲ ನಿರ್ಮಾಣ ಮಾಡಲಾಗಿದೆ. ಅವರಿಗೆ ನನ್ನ ಅಭಿನಂದನೆಗಳು. ಇಲ್ಲಿ ನಿರಂತರವಾಗಿ ದೈವ ಕಾರ್ಯಗಳು ನಡೆಯಲಿ. ಎಲ್ಲರಿಗೂ ಆ ದೇವರು ಒಳ್ಳೆಯದು ಮಾಡಲಿ ಎಂದರು.

ಕೋಲಾರದ ಸಂಸದ ಮಲ್ಲೇಶ್ ಬಾಬು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ.ಸಿ.ಎನ್.ಮಂಜುನಾಥ್, ಮಾಜಿ ಶಾಸಕ ಚೌಡರೆಡ್ಡಿ ತೂಪಲ್ಲಿ, ಹಿರಿಯ ಮುಖಂಡ ಪದ್ಮನಾಭ ರೆಡ್ಡಿ ಸೇರಿದಂತೆ ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+