ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕುಮಾರಸ್ವಾಮಿ ಸರ್ಕಾರಕ್ಕೆ 150 ದಿನ : ಶಿಕ್ಷಣ ಕ್ಷೇತ್ರದಲ್ಲಿ ಆಗಿದ್ದೇನು?

|
Google Oneindia Kannada News

Recommended Video

ಎಚ್ ಡಿ ಕುಮಾರಸ್ವಾಮಿ ಸರ್ಕಾಕ್ಕೆ 150 ದಿನಗಳ ಸಂಭ್ರಮ | ಶಿಕ್ಷಣ ಕ್ಷೇತ್ರದಲ್ಲಿ ಆಗಿದ್ದೇನು? | Oneindia kannada

ಬೆಂಗಳೂರು, ಅಕ್ಟೋಬರ್ 23 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸರ್ಕಾರ 150 ದಿನಗಳನ್ನು ಪೂರೈಸಿದೆ. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಶಿಕ್ಷಣ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಕುಮಾರಸ್ವಾಮಿ ಮಾಹಿತಿ ನೀಡಿದರು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಗಳವಾರ ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಮಾಧ್ಯಮಗಳ ಜೊತೆ ಸಂವಾದ ನಡೆಸಿದರು. 150 ದಿನಗಳಲ್ಲಿ ಕರ್ನಾಟಕ ಸರ್ಕಾರ ಮಾಡಿರುವ ಸಾಧನೆಗಳ ವಿವರಗಳನ್ನು ಕೊಟ್ಟರು.

ಕುಮಾರಣ್ಣ ಸರ್ಕಾರಕ್ಕೆ 150 ದಿನ : ಕೇಂದ್ರದಿಂದ ಸಿಕ್ಕಿದ್ದೇನು?ಕುಮಾರಣ್ಣ ಸರ್ಕಾರಕ್ಕೆ 150 ದಿನ : ಕೇಂದ್ರದಿಂದ ಸಿಕ್ಕಿದ್ದೇನು?

ಮಾಧ್ಯಮ ಸಂವಾದದಲ್ಲಿ ಶಿಕ್ಷಣ ಕ್ಷೇತ್ರದ ಕುರಿತು ಮುಖ್ಯಮಂತ್ರಿಗಳು ಮಾಹಿತಿ ನೀಡಿದರು. 'ಶಿಕ್ಷಣ ಕ್ಷೇತ್ರಕ್ಕೆ ಅಗತ್ಯವಾದ ಒತ್ತನ್ನು ಸರ್ಕಾರ ನೀಡಿದೆ. ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ' ಎಂದು ಕುಮಾರಸ್ವಾಮಿ ಹೇಳಿದರು.

ಬೆಂಗಳೂರಿನ ಟ್ರಾಫಿಕ್ ಜಾಮ್ ಸಮಸ್ಯೆ ನಿವಾರಣೆಗೆ ಕುಮಾರಬಾಣಬೆಂಗಳೂರಿನ ಟ್ರಾಫಿಕ್ ಜಾಮ್ ಸಮಸ್ಯೆ ನಿವಾರಣೆಗೆ ಕುಮಾರಬಾಣ

ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳ್ನು ಸುಧಾರಿಸಲು ಸರ್ಕಾರ ಮುಂದಾಗಿದೆ. ಮೂಲ ಸೌಕರ್ಯ ಒದಗಿಸಲು 450 ಕೋಟಿ ರೂ. ಗಳ ಕ್ರಿಯಾಯೋಜನೆಗೆ ಮಂಜೂರಾತಿ ನೀಡಲಾಗಿದೆ... ಶಿಕ್ಷಣ ಕ್ಷೇತ್ರದ ವಿವರಗಳು ಇಲ್ಲಿವೆ...

ಉಪಚುನಾವಣೆ ಬಳಿಕ ಋಣಮುಕ್ತ ಪತ್ರಗಳು ರೈತರ ಮನೆಬಾಗಿಲಿಗೆ : ಸಿಎಂಉಪಚುನಾವಣೆ ಬಳಿಕ ಋಣಮುಕ್ತ ಪತ್ರಗಳು ರೈತರ ಮನೆಬಾಗಿಲಿಗೆ : ಸಿಎಂ

ಮೂಲ ಸೌಕರ್ಯ ಅಭಿವೃದ್ಧಿ

ಮೂಲ ಸೌಕರ್ಯ ಅಭಿವೃದ್ಧಿ

ಕರ್ನಾಟಕ ಸರ್ಕಾರ ಶಾಲೆ-ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಿದೆ. ಮೂಲ ಸೌಕರ್ಯ ಕಲ್ಪಿಸಲು ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ. 450 ಕೋಟಿ ರೂ. ವೆಚ್ಚದಲ್ಲಿ ಸರ್ಕಾರಿ ಶಾಲೆ-ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ.

ಹಂತ-ಹಂತವಾಗಿ ಬಿಡುಗಡೆ

ಹಂತ-ಹಂತವಾಗಿ ಬಿಡುಗಡೆ

ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳ ಮೂಲ ಸೌಲಭ್ಯಕ್ಕೆ 450 ಕೋಟಿ ರೂ. ಗಳ ಕ್ರಿಯಾಯೋಜನೆಗೆ ಮಂಜೂರಾತಿ ನೀಡಲಾಗಿದೆ. ಈ ವರ್ಷ 150 ಕೋಟಿ ಅನುದಾನವನ್ನು ಹಂತ ಹಂತವಾಗಿ ಬಿಡುಗಡೆ ಮಾಡಲಾಗುತ್ತದೆ.

ಶಾಲಾ ಕೊಠಡಿಗಳು

ಶಾಲಾ ಕೊಠಡಿಗಳು

1521 ಶಾಲೆ/ ಪದವಿಪೂರ್ವ ಕಾಲೇಜುಗಳಲ್ಲಿ 2711 ಕೊಠಡಿಗಳು, 86 ಪ್ರಯೋಗಾಲಯಗಳು ಹಾಗೂ 154 ಶೌಚಾಲಯ ನಿರ್ಮಿಸಲು ಉದ್ದೇಶಿಸಲಾಗಿದೆ. 66 ಸರ್ಕಾರಿ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್‍ಗಳು, 8 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಮೂಲಸೌಕರ್ಯಕ್ಕೆ 470.37 ಕೋಟಿ ರೂ. ಗಳ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗಿದೆ.

ವಿಶ್ವವಿದ್ಯಾಲಯ ಸ್ಥಾಪನೆ

ವಿಶ್ವವಿದ್ಯಾಲಯ ಸ್ಥಾಪನೆ

ಪದವೀಧರರ ಎಂಪ್ಲಾಯೇಬಿಲಿಟಿ ಅನುಪಾತ ಅತಿ ಕಡಿಮೆ ಇರುವುದನ್ನು ಗಮನಿಸಿರುವ ಸರ್ಕಾರ ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಮೂರು ಕೌಶಲ್ಯಾಧಾರಿತ ವಿಶ್ವವಿದ್ಯಾಲಯ ಸ್ಥಾಪನೆಗೆ ತೀರ್ಮಾನ ಕೈಗೊಂಡಿದೆ. ಆಯವ್ಯಯದಲ್ಲಿ 9 ಕೋಟಿ ರೂ. ಅನುದಾನ ನಿಗದಿ ಪಡಿಸಲಾಗಿದೆ. ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ.

English summary
Congress-JD(S) alliance government led by Chief Minister H.D.Kumaraswamy in Karnataka completes 150 days in office. Here are the list of achievements of education department.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X