ಸ್ಟ್ಯಾಲಿನ್‌ಗೆ ಕರೆ ಮಾಡಿ ಕರುಣಾನಿಧಿ ಆರೋಗ್ಯ ವಿಚಾರಿಸಿದ ಕುಮಾರಸ್ವಾಮಿ
Recommended Video

ಸ್ಟ್ಯಾಲಿನ್‌ಗೆ ಕರೆ ಮಾಡಿ ಕರುಣಾನಿಧಿ ಆರೋಗ್ಯ ವಿಚಾರಿಸಿದ ಕುಮಾರಸ್ವಾಮಿ | Oneindia Kannada
ಬೆಂಗಳೂರು, ಜುಲೈ 27: ಅನಾರೋಗ್ಯದಿಂದ ಆಸ್ಪತ್ರೆ ಸೇರಿರುವ ಡಿಎಂಕೆ ಪಕ್ಷದ ಧುರಿಣ ಕರುಣಾನಿಧಿ ಅವರ ಆರೋಗ್ಯದ ಬಗ್ಗೆ ಕುಮಾರಸ್ವಾಮಿ ಮಾಹಿತಿ ಪಡೆದಿದ್ದಾರೆ.
ಕರುಣಾನಿಧಿ ಅವರ ಪುತ್ರ ಸ್ಟಾಲಿನ್ ಅವರಿಗೆ ಕರೆ ಮಾಡಿದ್ದ ಕುಮಾರಸ್ವಾಮಿ ಅವರು ಕರುಣಾನಿಧಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದು, ಬೇಗ ಗುಣಮುಖರಾಗಲೆಂದು ಹಾರೈಸಿದ್ದಾರೆ.
ಈ ಬಗ್ಗೆ ಟ್ವೀಟರ್ ಮೂಲಕ ಮಾಹಿತಿ ಹಂಚಿಕೊಂಡಿರುವ ಅವರು, 'ಕರುಣಾನಿಧಿ ಅವರ ಆರೋಗ್ಯ ಶೀಘ್ರವಾಗಿ ಸುಧಾರಿಸಲಿ' ಎಂದು ಹಾರೈಸಿದ್ದಾರೆ.

94 ವರ್ಷದ ಕರುಣಾನಿಧಿ ಅವರು ಲಿವರ್ ಸಮಸ್ಯೆಯಿಂದ ಉಂಟಾದ ಜ್ವರದಿಂದ ಆಸ್ಪತ್ರೆ ಸೇರಿದ್ದು. ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂದು ಡಿಎಂಕೆ ಪಕ್ಷ ಹೇಳಿದೆ.
ಪ್ರಧಾನಿ ಮೋದಿ ಸೇರಿದಂತೆ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಹಲವು ನಾಯಕರು ಕರುಣಾನಿಧಿ ಅವರ ಆರೋಗ್ಯ ವಿಚಾರಿಸಿದ್ದು ಬೇಗ ಗುಣಮುಖರಾಗಲೆಂದು ಹಾರೈಸಿದ್ದಾರೆ.












Click it and Unblock the Notifications