ಟ್ವಿಟ್ಟರ್‌ನಲ್ಲಿ ಕೆಣಕಿದ ಈಶ್ವರಪ್ಪಗೆ ಗುದ್ದಿದ ಕುಮಾರಸ್ವಾಮಿ

ಬೆಂಗಳೂರು, ಜನವರಿ 18: ಟ್ವಿಟ್ಟರ್‌ನಲ್ಲಿ ತಮ್ಮನ್ನು ಕೆಣಕಿದ ಗ್ರಾಮಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಖಡಕ್ ಪ್ರತಿಕ್ರಿಯೆಯನ್ನು ಮಾಜಿ ಸಿಎಂ ಕುಮಾರಸ್ವಾಮಿ ನೀಡಿದ್ದಾರೆ.

ಸಂಸದ ತೇಜಸ್ವಿ ಸೂರ್ಯ ಮತ್ತು ಚಕ್ರವರ್ತಿ ಸೂಲಿಬೆಲೆ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂಬ ವರದಿಗೆ ಪ್ರತಿಕ್ರಿಯಿಸಿದ್ದ ಕುಮಾರಸ್ವಾಮಿ, 'ತೇಜಸ್ವಿ, ಸೂಲಿಬೆಲೆ ಏನು ಯುಗಪುರುಷರೇ ಅವರನ್ನು ಕೊಲ್ಲಲು' ಎಂದಿದ್ದರು.

ಕುಮಾರಸ್ವಾಮಿ ಹೇಳಿಕೆ ಪ್ರಕಟವಾಗಿದ್ದ ಪತ್ರಕೆಯ ತುಣುಕು ಹಂಚಿಕೊಂಡಿದ್ದ ಈಶ್ವರಪ್ಪ, 'ಅಂದು ತಿನ್ನಲು ಗತಿ ಇಲ್ಲದವರು ಮಾತ್ರ ಸೈನ್ಯಕ್ಕೆ ಸೇರುತ್ತಾರೆ ಎಂದು ಹೇಳಿದ ಈ ಯುಗಪುರುಷ, ಪುಲ್ವಾಮ ಧಾಳಿಗೆ ಭಾರತೀಯ ಸೈನ್ಯ ಪ್ರತ್ಯುತ್ತರ ನೀಡಿದಾಗ ಸಂಭ್ರಮಾಚರಣೆ ಮಾಡಬೇಡಿ ಒಂದು ಕೋಮಿಗೆ ಬೇಜಾರಾಗುತ್ತದೆ ಎಂದೂ ತಮ್ಮ ಅಣಿಮುತ್ತುಗಳನ್ನು ಉದುರಿಸಿ ಅತ್ತಿದ್ದರು ಇಂತಹ ಯುಗಪುರುಷನನ್ನು ಪಡೆದ ಕರ್ನಾಟಕವೇ ಧನ್ಯ. ಅವರ ಯೋಗ್ಯತೆಗೆ ತಕ್ಕ ಮಾತು' ಎಂದು ಟ್ವೀಟ್ ಮಾಡಿದ್ದರು.

ಈಶ್ವರಪ್ಪ ಟ್ವೀಟ್‌ನಿಂದ ಕೆರಳಿದ ಕುಮಾರಸ್ವಾಮಿ, 'ಮನೆಯಲ್ಲಿ ನೋಟು ಎಣಿಸುವ ಯಂತ್ರ ಇಟ್ಟುಕೊಂಡವನು ನಾನಲ್ಲ. ನಿಮ್ಮ ಮೇಲೆ ಅತ್ಯಾಚಾರ ನಡೆದರೆ ಸರ್ಕಾರ ಏನು ಮಾಡೋಕಾಗುತ್ತೆ ಎಂದು ವರದಿಗಾರ್ತಿಗೆ ಪೆಕರನಂತೆ ಪ್ರಶ್ನಿಸಿದವನು ನಾನಲ್ಲ' ಎಂದು ಪ್ರತಿಕ್ರಿಯಿಸಿದ್ದಾರೆ.

ಎಲ್ಲರಿಗೂ ಐಶ್ವರ್ಯಾ ರೈ ಬೇಕು ಆದರೆ ಆಕೆ ಒಬ್ಬಳೇ ಎಂದಿದ್ದ ಈಶ್ವರಪ್ಪ

ಎಲ್ಲರಿಗೂ ಐಶ್ವರ್ಯಾ ರೈ ಬೇಕು ಆದರೆ ಆಕೆ ಒಬ್ಬಳೇ ಎಂದಿದ್ದ ಈಶ್ವರಪ್ಪ

ಈಶ್ವರಪ್ಪ ಅವರ ವಿವಾದಾತ್ಮಕ ಹೇಳಿಕೆಗಳನ್ನು ನೆನಪಿಸಿ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, 'ಉಪ ಮುಖ್ಯಮಂತ್ರಿ ಹುದ್ದೆ ಯಾರಿಗೆ ಇಷ್ಟವಿಲ್ಲ? ವಯಸ್ಸಿಗೆ ಬಂದವರಿಗೆಲ್ಲರಿಗೂ ನಟಿ ಐಶ್ವರ್ಯ ರೈ ಬೇಕೆಂದು ಬಯಸುತ್ತಾರೆ. ಇರುವುದು ಒಬ್ಬಳೇ ಐಶ್ವರ್ಯ ರೈ ತಾನೇ? ಎಂದು ಡಿಸಿಎಂ ಹುದ್ದೆಯ ಬಗ್ಗೆ ಕೀಳು ಅಭಿರುಚಿ ಮಾತನಾಡಿದವನು ನಾನಲ್ಲ' ಎಂದಿದ್ದಾರೆ.

ಮುಸ್ಲಿಂ ಬಗ್ಗೆ ಈಶ್ವರಪ್ಪ ನೀಡಿದ್ದ ಹೇಳಿಕೆ

ಮುಸ್ಲಿಂ ಬಗ್ಗೆ ಈಶ್ವರಪ್ಪ ನೀಡಿದ್ದ ಹೇಳಿಕೆ

'ನನ್ನ ಕ್ಷೇತ್ರದಲ್ಲಿ 55 ರಿಂದ 60 ಸಾವಿರ ಮುಸ್ಲಿಂರ ವೋಟ್ ಗಳಿವೆ. ಇದೂವರೆಗೂ ಒಬ್ಬ ಮುಸ್ಲಿಂಮನಿಗೂ ನಮಸ್ಕಾರ ಹೊಡೆದು ವೋಟ್ ಕೇಳಿಲ್ಲ. ಆದ್ರೂ 47ಸಾವಿರ ಮತಗಳ ಅಂತರದಿಂದ ಗೆದ್ದಿದ್ದೇನೆ. ರಾಷ್ಟ್ರಭಕ್ತ ಮುಸ್ಲಿಂ ಬಿಜೆಪಿಗೆ ವೋಟ್ ಹಾಕ್ತಾನೆ ಪಾಕಿಸ್ತಾನ ಪರ ಇರೋ ಮುಸ್ಲಿಂ ಬಿಜೆಪಿಗೆ ವೋಟ್ ಹಾಕಲು ಹಿಂದೆ ಮುಂದೆ ನೋಡ್ತಾರೆ‌ ಎಂದವನು ನಾನಲ್ಲ' ಎಂದು ವಿವಾದಾತ್ಮಕ ಹೇಳಿಕೆಯನ್ನು ನೆನಪಿಸಿದ್ದಾರೆ.

ಸಿದ್ದರಾಮಯ್ಯ ಗೆ ಹೇಳಿದ್ದ ಮಾತುಗಳ ಉಲ್ಲೇಖ

ಸಿದ್ದರಾಮಯ್ಯ ಗೆ ಹೇಳಿದ್ದ ಮಾತುಗಳ ಉಲ್ಲೇಖ

'ಕುಂದಗೋಳ ವಿಧಾನಸಭೆ ಉಪಚುನಾವಣೆ ಪ್ರಚಾರದ ಸಂದರ್ಭದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ,ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವಾಗಿತ್ತು,ಈ ಬಗ್ಗೆ ಸಿದ್ದರಾಮಯ್ಯ ನಾನು ಏನು ಮಾಡಬೇಕು ಎಂದಿದ್ದರು.ಒಂದು ವೇಳೆ ಸಿದ್ದರಾಮಯ್ಯ ಅವರ ಮೊಮ್ಮಗಳ ಮೇಲೆ ಅತ್ಯಾಚಾರ ನಡೆದರೆ ಏನು ಮಾಡುತ್ತಾರೆ ಎಂಬ ಕೀಳು ಮಟ್ಟದ ಹೇಳಿಕೆ ನೀಡಿದವನು ನಾನಲ್ಲ' ಎಂದು ಈಶ್ವರಪ್ಪ ಸಿದ್ದರಾಮಯ್ಯ ಬಗ್ಗೆ ಹೇಳಿದ್ದ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ.

'ಮೂರ್ಖ ಪುರುಷ' ನಾನಲ್ಲ: ಕುಮಾರಸ್ವಾಮಿ

'ಮೂರ್ಖ ಪುರುಷ' ನಾನಲ್ಲ: ಕುಮಾರಸ್ವಾಮಿ

'ಎಂತೆಂತಹ ಅದ್ಭುತವಾದ ಅಣಿಮುತ್ತುಗಳನ್ನು ಉದುರಿಸಿದ ತಮ್ಮಿಂದ ಯುಗಪುರುಷ ಎಂಬ ಸರ್ಟಿಫಿಕೇಟ್ ಪಡೆಯುವ "ಮೂರ್ಖ ಪುರುಷ" ನಾನಲ್ಲ. ದಿಢೀರ್ ನಿದ್ದೆಯಿಂದ ಎದ್ದಂತೆ ಹಳೆಯ ಹೇಳಿಕೆಗೆ ಟ್ವೀಟ್ ಮಾಡುವವನು ನಾನಲ್ಲ' ಎಂದು ವ್ಯಂಗ್ಯ ಮಾಡಿದ್ದಾರೆ ಕುಮಾರಸ್ವಾಮಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+