• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಯಡಿಯೂರಪ್ಪ 10 ಪ್ರಶ್ನೆಗೆ ಕುಮಾರಸ್ವಾಮಿ ಖಡಕ್ ಉತ್ತರಗಳು

|

ಬೆಂಗಳೂರು, ಜೂನ್ 24: ವಿರೋಧ ಪಕ್ಷ ನಾಯಕ ಯಡಿಯೂರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಸರ್ಕಾರದ ವಿರುದ್ಧ ಸಿಎಂ ಕುಮಾರಸ್ವಾಮಿ ಅವರನ್ನು ಗುರಿಯಾಗಿಸಿ ಹತ್ತು ಪ್ರಶ್ನೆಗಳನ್ನು ಎಸೆದಿದ್ದಾರೆ.

ಯಡಿಯೂರಪ್ಪ ಅವರ ಪ್ರಶ್ನೆಗಳನ್ನು ಗಂಭೀರವಾಗಿ ಪರಗಣಿಸಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಯಡಿಯೂರಪ್ಪ ಅವರು ಮಾಡಿರುವ ಆರೋಪಗಳು ಆರೋಗ್ಯಕರವಾದುವುವಲ್ಲ ಎಂದು ಆರೋಪಿಸಿರುವುದಕ್ಕದೆ, ಯಡಿಯೂರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಪ್ರಸ್ತಾಪಿಸಿರುವ ಎಲ್ಲ ಪ್ರಶ್ನೆಗಳಿಗೂ ಉತ್ತರ ನೀಡಿದ್ದಾರೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಬಿಜೆಪಿ ಕೇಳಿದ 10 ಪ್ರಶ್ನೆಗಳು

ಬರ, ಜಿಂದಾಲ್ ವಿವಾದ, ಶಿಕ್ಷಣ ಖಾತೆ, ರೈತರ ಸಾಲಮನ್ನಾ, ರೈತರ ಆತ್ಮಹತ್ಯೆ, ಐಎಂಎ ಹಗರಣ , ಗ್ರಾಮ ವಾಸ್ತವ್ಯ ಎಲ್ಲ ವಿಶಯಗಳ ಬಗ್ಗೆಯೂ ಮಾಹಿತಿ ಪೂರ್ಣವಾಗಿ ಸುದೀರ್ಘವಾದ ಉತ್ತರಗಳನ್ನೇ ನೀಡಿದ್ದಾರೆ.

ಅಷ್ಟೆ ಅಲ್ಲದೆ, ಆಡಳಿತಾತ್ಮಕ ವಿಚಾರಗಳಿಗೆ ರಚನಾತ್ಮಕವಾಗಿ ಟೀಕೆ ಮಾಡಿದಲ್ಲಿ, ನಾನು ಅವುಗಳನ್ನು ಗಂಭೀರವಾಗಿ ಪರಿಗಣಿಸಿ, ಕ್ರಮ ಕೈಗೊಳ್ಳುತ್ತೇನೆ. ಆದರೆ ಸರ್ಕಾರದ ವ್ಯಾಪ್ತಿಗೆ ಬಾರದ ನನ್ನ ವೈಯಕ್ತಿಕ ವಿಷಯಗಳ ಬಗ್ಗೆ ಪದೇ ಪದೇ ಮಾತನಾಡಿ, ವಿರೋಧ ಪಕ್ಷದ ನಾಯಕರ ಸ್ಥಾನದ ಘನತೆಗೆ ಕುಂದು ತರಬಾರದೆಂದು ಕುಮಾರಸ್ವಾಮಿ ಅವರು ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

ಸರ್ಕಾರಿ ಬಸ್ ದರ ಏರಿಕೆ : ಹೊಸ ಪ್ರಸ್ತಾವನೆ ಸಲ್ಲಿಸಲು ಸಿಎಂ ಸೂಚನೆ

ಕುಮಾರಸ್ವಾಮಿ ಅವರು ಯಡಿಯೂರಪ್ಪ ಅವರ ಆರೋಪ, ಪ್ರಶ್ನೆಗಳಿಗೆ ನೀಡಿದ ಉತ್ತರ ಸವಿವರಾಗಿ ಇಲ್ಲದೆ...

'ಬರ ನಿರ್ವಹಿಸಲು ಅನುದಾನದ ಕೊರತೆ ಇಲ್ಲ'

'ಬರ ನಿರ್ವಹಿಸಲು ಅನುದಾನದ ಕೊರತೆ ಇಲ್ಲ'

ರಾಜ್ಯವು ಬರಗಾಲದ ಪರಿಸ್ಥಿತಿಯನ್ನು ಎದುರಿಸುತ್ತಿದ್ದರೂ, ರಾಜ್ಯದ ಜನತೆಗೆ ಅಗತ್ಯವಾದ ಪರಿಹಾರ ಕಾರ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ರಾಜ್ಯ ಇಡೀ ಆಡಳಿತ ಯಂತ್ರ ಸನ್ನದ್ಧವಾಗಿದೆ. ಕಂದಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಆಯಾ ಜಿಲ್ಲೆಗಳ ಬರ ನಿರ್ವಹಣೆಯಲ್ಲಿ ಪ್ರತಿ ದಿನ ಪರಿಶೀಲನೆ ನಡೆಸುತ್ತಿದ್ದು, ಅಧಿಕಾರಿಗಳಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ. ಪರಿಹಾರ ಕಾರ್ಯಕ್ಕೆ ಯಾವುದೇ ಅನುದಾನದ ಕೊರತೆ ಇಲ್ಲ. ವಿಕೋಪ ನಿರ್ವಹಣೆಗಾಗಿ ಎಲ್ಲ ಜಿಲ್ಲಾಧಿಕಾರಿಗಳ ಬಳಿ ಒಟ್ಟು 620 ಕೋಟಿ ರೂ. ಲಭ್ಯವಿದೆ. ಗ್ರಾಮೀಣಾಭಿವೃದ್ಧಿ ಇಲಾಖೆಯು 201.5 ಕೋಟಿ ರೂ. ಹಾಗೂ ನಗರಾಭಿವೃದ್ಧಿ ಇಲಾಖೆಯು 50 ಕೋಟಿ ರೂ. ಬಿಡುಗಡೆ ಮಾಡಿದೆ. ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ಸಭೆ ನಡೆಸಿ, ಕುಡಿಯುವ ನೀರು, ಮೇವು, ಉದ್ಯೋಗ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ. ಕಳೆದ ಒಂದು ವರ್ಷದಲ್ಲಿ ಮೂರು ಬಾರಿ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಮುಖ್ಯ ಕಾರ್ಯದರ್ಶಿಗಳು ಪ್ರತಿ 15 ದಿನಗಳಿಗೊಮ್ಮೆ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮಾಡಿ ಜಿಲ್ಲೆಗಳ ಬರ ಪರಿಹಾರ ಕಾರ್ಯಗಳನ್ನು ಪರಿಶೀಲಿಸಿ, ಮಾರ್ಗದರ್ಶನ ನೀಡುತ್ತಿದ್ದಾರೆ.

ಕೇಂದ್ರದಿಂದ 1500 ಕೋಟಿ ರೂಪಾಯಿ ಬಾಕಿ ಇದೆ

ಕೇಂದ್ರದಿಂದ 1500 ಕೋಟಿ ರೂಪಾಯಿ ಬಾಕಿ ಇದೆ

ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ರಾಜ್ಯದಲ್ಲಿ ಗುರಿ ಮೀರಿದ ಸಾಧನೆ ಮಾಡಿ, ಜನರಿಗೆ ಉದ್ಯೋಗ ಒದಗಿಸಲಾಗಿದೆ. ಕೇಂದ್ರದಿಂದ ಕೂಲಿ ಬಾಬ್ತು ಅನುದಾನ ಬಿಡುಗಡೆಯಾಗದಿದ್ದರೂ, ರಾಜ್ಯ ಸರ್ಕಾರವೇ ಮುಂಗಡ ಅನುದಾನ ನೀಡಿ, ಕೂಲಿ ಮೊತ್ತ ಜನರಿಗೆ ಪಾವತಿಸಿದೆ. ಕೇಂದ್ರದಿಂದ 1500 ಕೋಟಿ ರೂ. ಮೊತ್ತ ಬಾಕಿ ಇದ್ದು, ಪ್ರಧಾನಮಂತ್ರಿಗಳು, ಹಣಕಾಸು ಸಚಿವರನ್ನು ಹಲವು ಬಾರಿ ಭೇಟಿಯಾಗಿ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರೂ, ಈ ವರೆಗೆ ಅನುದಾನ ಬಿಡುಗಡೆಯಾಗಿಲ್ಲ. ಮಾನ್ಯ ಯಡಿಯೂರಪ್ಪನವರು ವಾಸ್ತವತೆಯ ಅರಿವಿಲ್ಲದೆ, ಆಧಾರರಹಿತ ಆರೋಪ ಮಾಡುವ ಬದಲು ಕೇಂದ್ರದಿಂದ ಅನುದಾನ ಬಿಡುಗಡೆ ಮಾಡಿಸಿಕೊಟ್ಟಲ್ಲಿ, ಬರ ಪರಿಹಾರ ಕಾರ್ಯ ನಿರ್ವಹಿಸಲು ಮತ್ತಷ್ಟು ಅನುಕೂಲವಾಗುವುದು.

ಶಂಕರ್, ನಾಗೇಶ್ ಗೆ ಖಾತೆ ಹಂಚಿದ ಮುಖ್ಯಮಂತ್ರಿ ಕುಮಾರಸ್ವಾಮಿ

ರೈತರ ಸಾಲಮನ್ನಾವನ್ನು ಒಂದೇ ವರ್ಷದಲ್ಲಿ ಪೂರೈಸಲಾಗುವುದು

ರೈತರ ಸಾಲಮನ್ನಾವನ್ನು ಒಂದೇ ವರ್ಷದಲ್ಲಿ ಪೂರೈಸಲಾಗುವುದು

ರೈತರ ಬೆಳೆ ಸಾಲ ಮನ್ನಾ ಯೋಜನೆಯನ್ನು ಅತ್ಯಂತ ಪಾರದರ್ಶಕವಾಗಿ ಜಾರಿಗೊಳಿಸಲಾಗಿದೆ. ಸರ್ಕಾರ ನಿಗದಿ ಪಡಿಸಿದ ಮಾರ್ಗಸೂಚಿಗಳನ್ವಯ ಎಲ್ಲ ಅರ್ಹ ರೈತರಿಗೆ ಸಾಲ ಮನ್ನಾ ಸೌಲಭ್ಯ ಒದಗಿಸಲಾಗಿದೆ. ನಾಲ್ಕು ವರ್ಷಗಳಲ್ಲಿ ಹಂತ ಹಂತವಾಗಿ ಜಾರಿಗೊಳಿಸಲು ಉದ್ದೇಶಿಸಿದ್ದ ಈ ಯೋಜನೆಯನ್ನು ಆರ್ಥಿಕ ಶಿಸ್ತಿನ ಇತಿಮಿತಿಯೊಳಗೆ ಒಂದೇ ವರ್ಷದೊಳಗೆ ಪೂರ್ಣಗೊಳಿಸಲಾಗುತ್ತಿದೆ.

ಜುಲೈ ಅಂತ್ಯದೊಳಗೆ ಸಾಲಮನ್ನಾ ಪೂರ್ಣಗೊಳ್ಳಲಿದೆ

ಜುಲೈ ಅಂತ್ಯದೊಳಗೆ ಸಾಲಮನ್ನಾ ಪೂರ್ಣಗೊಳ್ಳಲಿದೆ

ಆರಂಭದಲ್ಲಿ ಬ್ಯಾಂಕುಗಳು ನೀಡಿದ ಮಾಹಿತಿಯನ್ವಯ ಸಾಲ ಮನ್ನಾ ಮೊತ್ತ 48,000 ಕೋಟಿ ರೂ. ಗಳಾಗಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಸರ್ಕಾರದ ಮಾರ್ಗಸೂಚಿಯ ವ್ಯಾಪ್ತಿಯಲ್ಲಿ ಬರುವ ರೈತರ ಸಂಖ್ಯೆ 30 ಲಕ್ಷ ಹಾಗೂ ಬೆಳೆ ಸಾಲ ಮನ್ನಾ ಮೊತ್ತ ಅಂದಾಜು 16,000 ಕೋಟಿ ರೂ. ಗಳೆಂದು ಗುರುತಿಸಲಾಗಿದೆ. ಇದರಲ್ಲಿ ಈಗಾಗಲೇ 23 ಲಕ್ಷ ರೈತರು ದಾಖಲೆಗಳನ್ನು ಒದಗಿಸಿದ್ದು, 12830 ಕೋಟಿ ರೂ. ಸಾಲ ಮನ್ನಾ ಮೊತ್ತವನ್ನು ನೇರವಾಗಿ ರೈತರ ಸಾಲ ಖಾತೆಗೆ ಬಿಡುಗಡೆ ಮಾಡಲಾಗುತ್ತಿದೆ. ಇದೇ ಜುಲೈ ಅಂತ್ಯದೊಳಗೆ ಸಾಲ ಮನ್ನಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ನಂತರವೂ ಯಾರಾದರೂ ಅರ್ಹ ರೈತರು ಮನವಿ ಸಲ್ಲಿಸಿದಲ್ಲಿ ಸಾಲ ಮನ್ನಾ ಮಾಡಲು ಸರ್ಕಾರ ಸಿದ್ಧವಿದೆ.

ಆತ್ಮಹತ್ಯೆ ಪ್ರಮಾಣ 30% ಕಡಿಮೆ ಆಗಿದೆ

ಆತ್ಮಹತ್ಯೆ ಪ್ರಮಾಣ 30% ಕಡಿಮೆ ಆಗಿದೆ

ಕಳೆದ ಒಂದು ವರ್ಷದಲ್ಲಿ ರೈತರ ಆತ್ಮಹತ್ಯೆ ಪ್ರಕರಣ ಶೇ. 30 ರಷ್ಟು ಕಡಿಮೆಯಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿರುವುದನ್ನು ಮಾನ್ಯ ವಿರೋಧ ಪಕ್ಷದ ನಾಯಕರೂ ಗಮನಿಸಿರಬಹುದೆಂದು ಭಾವಿಸುತ್ತೇನೆ. ಆದರೆ ಇದನ್ನು ಸಾಧನೆ ಎಂದು ಹೇಳಿಕೊಳ್ಳಲಾಗದು. ರೈತರ ಆತ್ಮಹತ್ಯೆ ಪ್ರಕರಣ ಶೂನ್ಯವಾಗಬೇಕು ಎನ್ನುವುದು ನಮ್ಮ ಆಶಯ. ಇದನ್ನು ಸಾಕಾರಗೊಳಿಸುವ ದೃಢ ಸಂಕಲ್ಪದಿಂದ ಕಾರ್ಯ ನಿರ್ವಹಿಸುತ್ತಿದ್ದೇವೆ. ಈ ವಿಚಾರದಲ್ಲಿ ರಾಜಕೀಯ ಮಾಡದೆ ರೈತರಲ್ಲಿ ಆತ್ಮವಿಶ್ವಾಸ ತುಂಬುವ ಮಾತನಾಡಬೇಕೆ ಹೊರತು, ರೈತರ ಸ್ಥೈರ್ಯವನ್ನು ಕುಗ್ಗಿಸುವ ಯಾವ ಪ್ರಯತ್ನವೂ ಆರೋಗ್ಯಕರವಲ್ಲ.

ಐಎಂಎ ಹಗರಣ ತನಿಖೆಗೆ ವಿಶೇಷ ತಂಡ

ಐಎಂಎ ಹಗರಣ ತನಿಖೆಗೆ ವಿಶೇಷ ತಂಡ

ಐಎಂಎ ಹಗರಣ ಕುರಿತು ಸರ್ಕಾರ ಕಣ್ಣುಮುಚ್ಚಿ ಕುಳಿತಿಲ್ಲ. ಎಸ್ಐಟಿ ರಚಿಸಿ, ತನಿಖೆ ನಡೆಸಲಾಗುತ್ತಿದೆ. ಮಾನ್ಯ ಯಡಿಯೂರಪ್ಪನವರ ಬಳಿ ಸರ್ಕಾರದ ಸಚಿವರು, ಶಾಸಕರು ಮತ್ತಿತರರು ಈ ಹಗರಣದಲ್ಲಿ ಭಾಗಿಯಾಗಿರುವ ಕುರಿತು ಸೂಕ್ತ ದಾಖಲೆಗಳಿದ್ದರೆ, ಎಸ್ಐಟಿಗೆ ನೀಡಲಿ. ಪ್ರಕರಣವು ತನಿಖಾ ಹಂತದಲ್ಲಿ ಇರುವಾಗ ದಾಖಲೆಗಳಿಲ್ಲದೆ, ರಾಜಕೀಯ ನಾಯಕರ ಹೆಸರನ್ನು ಪ್ರಸ್ತಾಪಿಸಿ, ತನಿಖೆಯ ಹಾದಿ ತಪ್ಪಿಸುವುದು ಸೂಕ್ತವಲ್ಲ.

1200 ಕೋಟಿ ವೆಚ್ಚದಲ್ಲಿ ಶಿಕ್ಷಣದ ಅಭಿವೃದ್ಧಿ

1200 ಕೋಟಿ ವೆಚ್ಚದಲ್ಲಿ ಶಿಕ್ಷಣದ ಅಭಿವೃದ್ಧಿ

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮೈತ್ರಿ ಸರ್ಕಾರ ಪಣ ತೊಟ್ಟಿದೆ. 1200 ಕೋಟಿ ರೂ. ಗಳಲ್ಲಿ ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ ಪಡಿಸಲಾಗುತ್ತಿದೆ. ಮೊದಲ ಬಾರಿಗೆ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಶಿಕ್ಷಣ, ಕರ್ನಾಟಕ ಪಬ್ಲಿಕ್ ಶಾಲೆಗಳ ಸ್ಥಾಪನೆಯಂತಹ ವಿನೂತನ ಉಪಕ್ರಮಗಳನ್ನು ಕೈಗೊಂಡಿದ್ದೇವೆ. ಇದಕ್ಕೆ ಪೋಷಕರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಏಕಕಾಲಕ್ಕೆ ನಾಲ್ಕರಿಂದ 10 ನೇ ತರಗತಿ ವರೆಗಿನ 40 ಲಕ್ಷ ಮಕ್ಕಳ ಕಲಿಕಾ ಸಾಮರ್ಥ್ಯ ಪರೀಕ್ಷೆ ನಡೆಸಿ, ಅದರ ಆಧಾರದಲ್ಲಿ ಕಲಿಕೆಯ ಸುಧಾರಣೆಗೆ ಕ್ರಮ ವಹಿಸುತ್ತಿದ್ದೇವೆ. ಶಿಕ್ಷಕರಿಗೆ ತರಬೇತಿ ನೀಡಲು ಆದ್ಯತೆ ನೀಡಿದ್ದೇವೆ. ಮಲೆನಾಡು, ಕರಾವಳಿ ಭಾಗಗಳಲ್ಲಿ ಶಿಥಿಲಗೊಂಡಿರುವ ಕಾಲು ಸೇತುವೆಗಳನ್ನು ಗುರುತಿಸಿ ಕಾಂಕ್ರೀಟ್ ಸೇತುವೆಗಳನ್ನು ನಿರ್ಮಿಸುವ ಶಾಲಾ ಸಂಪರ್ಕ ಸೇತು ಯೋಜನೆ ಜಾರಿಗೊಳಿಸಿದ್ದೇವೆ. ಮಲೆನಾಡು ಭಾಗದಿಂದ ಬಂದ ಯಡಿಯೂರಪ್ಪನವರು ಈ ಯೋಜನೆಯನ್ನು ಮೆಚ್ಚುವರೆಂದು ನಂಬಿದ್ದೇನೆ. ಒಟ್ಟಾರೆಯಾಗಿ, ಸರ್ಕಾರಿ ಶಾಲೆಗಳಲ್ಲಿಯೂ ಮಕ್ಕಳಿಗೆ ಅತ್ಯುತ್ತಮ ಶಿಕ್ಷಣ ಒದಗಿಸುವ ಎಲ್ಲ ಪ್ರಯತ್ನ ಮಾಡುತ್ತಿದ್ದೇವೆ. ಈ ಬಾರಿ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಯಾವುದೇ ಸರ್ಕಾರಿ ಶಾಲೆ ಶೂನ್ಯ ಫಲಿತಾಂಶ ದಾಖಲಿಸಿಲ್ಲ ಎಂಬ ಅಂಶವನ್ನು ಸನ್ಮಾನ್ಯ ಯಡಿಯೂರಪ್ಪನವರು ಗಮನಿಸಿದ್ದಾರೆಂದುಕೊಂಡಿದ್ದೇನೆ.

'ಜಿಂದಾಲ್ ಸಂಸ್ಥೆ ಕಿಕ್ ಬ್ಯಾಕ್‌ ಪಡೆದವರು ಯಾರು ಗೊತ್ತಿದೆ'

'ಜಿಂದಾಲ್ ಸಂಸ್ಥೆ ಕಿಕ್ ಬ್ಯಾಕ್‌ ಪಡೆದವರು ಯಾರು ಗೊತ್ತಿದೆ'

ಜಿಂದಾಲ್ ಸಂಸ್ಥೆಯಿಂದ ಕಿಕ್ ಬ್ಯಾಕ್ ಪಡೆದವರು ಯಾರು ಎಂಬುದು ಈಗಾಗಲೇ ಜಗಜ್ಜಾಹೀರಾಗಿದೆ. ಈ ಸಂಸ್ಥೆಗೆ ಭೂಮಿ ನೀಡುವ ಕುರಿತು ಸಚಿವ ಸಂಪುಟದ ಉಪ ಸಮಿತಿ ನಿರ್ಧಾರ ಕೈಗೊಳ್ಳಲಿದೆ.

'ಗ್ರಾಮ ವಾಸ್ತವ್ಯಕ್ಕೆ ಕೋಟ್ಯಂತರ ವೆಚ್ಚ ಆರೋಪ ಸುಳ್ಳು'

'ಗ್ರಾಮ ವಾಸ್ತವ್ಯಕ್ಕೆ ಕೋಟ್ಯಂತರ ವೆಚ್ಚ ಆರೋಪ ಸುಳ್ಳು'

ಗ್ರಾಮ ವಾಸ್ತವ್ಯ ವ್ಯರ್ಥ, ಅದಕ್ಕೆ ಕೋಟ್ಯಂತರ ರೂಪಾಯಿ ವೆಚ್ಚ ಮಾಡಲಾಗಿದೆ ಎಂದು ಆರೋಪ ಮಾಡಲಾಗುತ್ತಿದೆ. ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಪ್ರಯಾಣ ವೆಚ್ಚ, ಶಾಲೆಯಲ್ಲಿ ಉಳಿದುಕೊಳ್ಳಲು ಕನಿಷ್ಠ ಸೌಲಭ್ಯ ಮಾತ್ರ ನನ್ನ ವೆಚ್ಚ. ಇದೇ ಸಂದರ್ಭ ಬಳಸಿ, ವಿವಿಧ ಇಲಾಖೆಗಳು ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ/ ಉದ್ಘಾಟನೆ ಮಾಡಿದ್ದಲ್ಲಿ, ಅವುಗಳು ಗ್ರಾಮ ವಾಸ್ತವ್ಯದ ವೆಚ್ಚದ ವ್ಯಾಪ್ತಿಗೆ ಬರುವುದಿಲ್ಲ. ಯಾದಗಿರಿ ಜಿಲ್ಲೆಯ ಚಂಡರಕಿ ಗ್ರಾಮದಲ್ಲಿ 58 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಾಗಿದೆ. ಆದರೆ ವಾಸ್ತವತೆಯನ್ನು ತಿಳಿದುಕೊಂಡು ಜವಾಬ್ದಾರಿಯುತ ಸ್ಥಾನದಲ್ಲಿರುವ ಶ್ರೀ ಯಡಿಯೂರಪ್ಪನವರು ಮಾತನಾಡಬೇಕೆಂದು ನಾನು ಆಶಿಸುತ್ತೇನೆ.

English summary
CM Kumaraswamy gives lengthy reply to BJP president Yeddyurappa's alligation about him and his government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more